Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ನ್ಯಾಟೊ ಮಿತ್ರರಿಗೆ ಸಮಾನ

ಭಾರತ ನ್ಯಾಟೊ ಮಿತ್ರರಿಗೆ ಸಮಾನ

ಅಮೆರಿಕ ಕಾಂಗ್ರೆಸ್‌ನಲ್ಲಿ ನಿರ್ಣಯ ಮಂಡನೆ

ವಾರ್ತಾಭಾರತಿವಾರ್ತಾಭಾರತಿ23 March 2016 11:50 PM IST
share

ವಾಷಿಂಗ್ಟನ್,ಮಾ.23: ವ್ಯಾಪಾರ ಮತ್ತು ತಂತ್ರಜ್ಞಾನ ವರ್ಗಾವಣೆಗೆ ಸಂಬಂಧಿಸಿದಂತೆ ಭಾರತವನ್ನು ನ್ಯಾಟೊ ಮಿತ್ರರಾಷ್ಟ್ರಗಳಿಗೆ ಸಮಾನವಾಗಿ ಪರಿಗಣಿಸುವ ಮತ್ತು ಅಮೆರಿಕದಿಂದ ರಕ್ಷಣಾ ಸಾಮಗ್ರಿಗಳ ರಫ್ತಿನಲ್ಲಿ ಅದರ ‘ಸ್ಥಾನಮಾನ ’ವನ್ನು ಮೇಲ್ದರ್ಜೆಗೇರಿಸುವ ನಿರ್ಣಯವೊಂದನ್ನು ಸಂಸತ್ತಿನ ಕಾಂಗ್ರೆಸ್‌ನಲ್ಲಿ ಮಂಡಿಸಲಾಗಿದೆ.
 
ಸದನದ ಭಾರತ ಮಿತ್ರಕೂಟದ ಸಹ ಅಧ್ಯಕ್ಷ ಜಾರ್ಜ್ ಹೋಲ್ಡಿಂಗ್ ಅವರು ಮಂಡಿಸಿರುವ ಅಮೆರಿಕ-ಭಾರತ ರಕ್ಷಣಾ ತಂತ್ರಜ್ಞಾನ ಮತ್ತು ಪಾಲುದಾರಿಕೆ ಕಾಯ್ದೆಯು ಶಸ್ತ್ರಾಸ್ತ್ರ ರಫ್ತು ನಿಯಂತ್ರಣ ಕಾಯ್ದೆಗೆ ತಿದ್ದುಪಡಿಗಳನ್ನು ತರಲು ಉದ್ದೇಶಿಸಿದೆ.
ಈ ಶಾಸನವು ಈಗಾಗಲೇ ಆರಂಭಗೊಂಡಿರುವ ಪ್ರಕ್ರಿಯೆಯನ್ನು ಗಟ್ಟಿಗೊಳಿಸಲಿದೆ ಮತ್ತು ಭವಿಷ್ಯದ ಸಹಕಾರ ಮತ್ತು ಪ್ರಗತಿಗೆ ಬುನಾದಿಯನ್ನು ಹಾಕಲಿದೆ ಎಂದು ಹೋಲ್ಡಿಂಗ್ ಹೇಳಿದರು.
 ಈ ಶಾಸನವು ಅಮೆರಿಕದಿಂದ ಭಾರತಕ್ಕೆ ರಕ್ಷಣಾ ಸಾಮಗ್ರಿಗಳ ಮಾರಾಟ ಅಥವಾ ರಫ್ತಿಗೆ ಅಧಿಸೂಚನೆಯನ್ನು ಹೊರಡಿಸಲು ತಗಲುವ ಸಮಯವನ್ನು ಕಡಿತಗೊಳಿಸುವ ಮೂಲಕ ಭಾರತದ ಸ್ಥಾನಮಾನವನ್ನು ಹೆಚ್ಚಿಸಲಿದೆ. ಅದು ಜಂಟಿ ತುರ್ತು ಸಂದರ್ಭ ಯೋಜನೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ಅಮೆರಿಕ ಸರಕಾರದಿಂದ ಪರಸ್ಪರ ಹಿತಾಸಕ್ತಿಯ ಮಿಲಿಟರಿ ಕಾರ್ಯಾಚರಣೆಗಳನ್ನು ನಿರ್ವಹಿಸುವ ಭಾರತದ ಸಾಮರ್ಥ್ಯದ ಪುನರ್‌ಪರಿಶೀಲನೆ ಮತ್ತು ವೌಲ್ಯಮಾಪನವನ್ನು ಅಗತ್ಯವಾಗಿಸುತ್ತದೆ ಎಂದರು.

ಮುಂದಿನ ತಿಂಗಳು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಷ್ಟನ್ ಕಾರ್ಟರ್ ಅವರ ಭಾರತ ಭೇಟಿಗೆ ಮುನ್ನ ಮಂಡಿಸಲಾಗಿರುವ ನಿರ್ಣಯವನ್ನು ಸ್ವಾಗತಿಸಿರುವ ಅಮೆರಿಕ ಭಾರತ ಉದ್ಯಮ ಮಂಡಳಿ(ಯುಎಸ್‌ಐಬಿಸಿ)ಯು, ಅದು ಇಂದಿನ ರಾಜಕೀಯ ಸ್ಥಿತಿ ಹಿಂದಿನದಕ್ಕಿಂತ ಭಿನ್ನವಾಗಿದೆ ಎಂಬ ಮಹತ್ವದ ಸಂಕೇತವನ್ನು ಭಾರತೀಯ ರಕ್ಷಣಾ ವ್ಯವಸ್ಥೆಗೆ ರವಾನಿಸಿದೆ ಎಂದು ಹೇಳಿದೆ.
 ಈ ಮಸೂದೆಯು ಅಧಿಸೂಚನೆ ಅವಧಿಗೆ ಸಂಬಂಧಿಸಿದಂತೆ ಭಾರತವನ್ನು ಇತರ ನ್ಯಾಟೊ ಮಿತ್ರರಾಷ್ಟ್ರಗಳಿಗೆ ಸಮಾನವಾಗಿಸುವುದಲ್ಲದೆ,ಉಭಯ ಸರಕಾರಗಳಿಗೂ ರಕ್ಷಣಾ ಸಹಕಾರವು ಅತ್ಯುನ್ನತ ಆದ್ಯತೆಯಾಗಿರಬೇಕೆಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತದೆ ಎಂದು ಹೋಲ್ಡಿಂಗ್ ಹೇಳಿದರು.
ನಮ್ಮ ರಾಷ್ಟ್ರಗಳ ನಡುವಿನ ರಕ್ಷಣಾ ವ್ಯಾಪಾರವು ದ್ವಿಪಕ್ಷೀಯ ಆರ್ಥಿಕ ಸಂಬಂಧದ ಅತ್ಯಂತ ಪ್ರಬಲ ಕ್ಷೇತ್ರಗಳಲ್ಲೊಂದಾಗಿದೆ ಮತ್ತು ಕಳೆದ 10 ವರ್ಷಗಳಲ್ಲಿ 300 ಮಿ.ಡಾ.ಗಳಿಂದ 14 ಬಿ.ಡಾ.ಗಳನ್ನು ದಾಟಿದೆ ಎಂದು ಯುಎಸ್‌ಐಬಿಸಿ ಅಧ್ಯಕ್ಷ ಮುಕೇಶ ಅಘಿ ಹೇಳಿದರು.

ಅಮೆರಿಕ ಮತ್ತು ಭಾರತ ಹಲವಾರು ಭದ್ರತಾ ಸವಾಲುಗಳನ್ನು ಎದುರಿಸುತ್ತಿವೆ ಎನ್ನುವುದನ್ನು ಬೆಟ್ಟು ಮಾಡಿದ ಹೋಲ್ಡಿಂಗ್ ಅವರು, ಉಭಯ ರಾಷ್ಟ್ರಗಳ ನಡುವೆ ಗಾಢ ರಕ್ಷಣಾ ಸಂಬಂಧಗಳು ಮತ್ತು ನಿಕಟ ಸಹಕಾರದ ಅಗತ್ಯಕ್ಕೆ ಒತ್ತು ನೀಡಿದರು.
ಸದನದಲ್ಲಿ ಹೇಳಿಕೆ ನೀಡಿದ ಸಂದರ್ಭ ಅವರು ಪಾಕಿಸ್ತಾನಕ್ಕೆ ಎಫ್-16 ಯುದ್ಧವಿಮಾನಗಳನ್ನು ಮಾರಾಟ ಮಾಡುವ ಒಬಾಮ ಆಡಳಿತದ ನಿರ್ಧಾರವನ್ನೂ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X