ವೇಶ್ಯಾವಾಟಿಕೆ ದಂಧೆ: ಆರೋಪಿಗಳ ಬಂಧನ
ಬೆಂಗಳೂರು, ಮಾ. 23: ಮನೆಯಲ್ಲಿಯೇ ಅಪ್ರಾಪ್ತ ಹುಡುಗಿಯನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಇಲ್ಲಿನ ಆರ್. ಟಿ.ನಗರದ ವಿಜಯ್(27), ಜಿಗಣಿ ನಿವಾಸಿ ಶಿವಲಿಂಗ(25) ಎಂದು ಗುರುತಿಸಲಾಗಿದ್ದು, ಹುಡುಗಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಆರೋಪಿಗಳಿಬ್ಬರು ಪಶ್ಚಿಮ ಬಂಗಾಲ ಮೂಲದ ಹುಡುಗಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಕರೆತಂದು ಇಲ್ಲಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಟಿ ಲೇಔಟ್‌ನ 5ನೆ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ ಬಿಟ್ಟು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದಾರೆ ಎಂದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳಿಂದ 2 ಸಾವಿರ ನಗದು, ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಒಳಪಟ್ಟಂತೆ ಇನ್ನು ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.
ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ





