ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಸಿಐಡಿ ತನಿಖೆ ಚುರುಕು

ಬೆಂಗಳೂರು, ಮಾ.24: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ತನಿಖೆ ಆರಂಭಿಸಿದ್ದು, ಸಿಐಡಿ ಡಿಐಜಿ ಸೋನಿಯಾ ನಾರಂಗ್ ಇಂದು ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರ ಕಚೇರಿಗೆ ಆಗಮಿಸಿ ಮಹತ್ವದ ದಾಖಲೆಗಳನ್ನು ಸಿಐಡಿ ವಶಕ್ಕೆ ತೆಗೆದುಕೊಂಡಿದ್ದಾರೆ
ಪದವಿ ಪುರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಪಲ್ಲವಿ ಅಕುರಾತಿ ಅವರಿಂದ ಸೋನಿಯಾ ನಾರಂಗ್ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಪಡೆದರು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಸ್‍ಪಿ ಸಿರಿಗೌರಿ ನೇತೃತ್ವದ ತಂಡಕ್ಕೆ ಡಿಐಜಿ ಸೋನಿಯಾ ನಾರಂಗ್ ತನಿಖೆಗೆ ಮಾರ್ಗದರ್ಶನ ನೀಡಿದರು.
ಸಿಐಡಿ ಪೊಲೀಸರು ಪದವಿ ಪೂರ್ವ ಶಿಕ್ಷಣ ಮಂಡಳಿಯಯ ಸಂಬಂಧಪಟ್ಟ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಅಮನತುಗೊಂಡಿರುವ ಕೋಲಾರ ಜಿಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನೂ ಕೂಡ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story





