ಪುತ್ತೂರು: ಜಾತ್ರೋತ್ಸವ ಆಮಂತ್ರಣ ಪತ್ರಿಕೆ ವಿವಾದ
ಹೈಕೋರ್ಟು ವಿಚಾರಣೆ ಮಾ.29ಕ್ಕೆ ಮುಂದೂಡಿಕೆ
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲಾಧಿಕಾರಿಗಳ ಹೆಸರನ್ನು ಮುದ್ರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಉಚ್ಚ ನ್ಯಾಯಾಲಯ ಮಾ. 29ಕ್ಕೆ ಮುಂದೂಡಿದೆ.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆಯಲ್ಲಿ ಹಿಂದೂಯೇತರ ಜಿಲ್ಲಾಧಿಕಾರಿಗಳ ಹೆಸರು ಮುದ್ರಿಸಿರುವ ಕುರಿತಂತೆ ಆಕ್ಷೇಪಿಸಿ ವಿಶ್ವ ಹಿಂದೂ ಪರಿಷತ್‌ನ ಪ್ರಖಂಡ ಕಾರ್ಯದರ್ಶಿ ನವೀನ್ ಕುಲಾಲ್ ಅವರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಹಿಂದೂಯೇತರ ಜಿಲ್ಲಾಧಿಕಾರಿಗಳಾದ ಎ.ಬಿ. ಇಬ್ರಾಹಿಂ ಅವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗಿದ್ದು, ಇದು ಕಾನೂನು ಬಾಹಿರವಾಗಿದೆ. ಇಬ್ರಾಹಿಂ ಹೆಸರನ್ನು ತೆಗೆದು ಹೊಸ ಆಮಂತ್ರಣಪತ್ರಿಕೆ ಮುದ್ರಿಸುವಂತೆ ಅವರು ಆಗ್ರಹಿಸಿದ್ದರು. ದಾವೆ ಸ್ವೀಕರಿಸಿದ ನ್ಯಾಯಾಲಯ ಈ ಬಗ್ಗೆ ಮಾ. 21ಕ್ಕೆ ವಿಚಾರಣೆಗೆ ನಿಗದಿಪಡಿಸಿತ್ತು. ಬಳಿಕ ಮಾ.24ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೆ ಮಾ. 29ಕ್ಕೆ ಮುಂದೂಡಿದೆ.





