ಮಹಿಳೆಯರ ಟ್ವೆಂಟಿ-20 ವಿಶ್ವಕಪ್: ಆಸ್ಟ್ರೇಲಿಯಕ್ಕೆ ಸುಲಭ ಜಯ
ಹೊಸದಿಲ್ಲಿ, ಮಾ.24: ಐಸಿಸಿ ಮಹಿಳೆಯರ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಎ ಗುಂಪಿನ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಶ್ರೀಲಂಕಾ ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ.
ಗುರುವಾರ ಇಲ್ಲಿನ ಫಿರೋಝ್ ಷಾ ಕೋಟ್ಲಾ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ನ 13ನೆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 123 ರನ್ ಗಳಿಸಿತ್ತು. ನಾಯಕಿ ಜಯಾಂಗನಿ(38) ಹಾಗೂ ವಿಕೆಟ್‌ಕೀಪರ್ ಸುರಂಗಿಕಾ(38) ಗರಿಷ್ಠ ಸ್ಕೋರ್ ದಾಖಲಿಸಿದರು.
ಆಸೀಸ್‌ನ ಪರ ಸುಟ್(2-25) ಹಾಗೂ ಬೀಮ್ಸ್(2-25) ತಲಾ 2 ವಿಕೆಟ್ ಉರುಳಿಸಿದರು.
ಗೆಲ್ಲಲು ಸುಲಭ ಸವಾಲು ಪಡೆದ ಆಸ್ಟ್ರೇಲಿಯ 17.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ವಿಲ್ಲಾನಿ(ಔಟಾಗದೆ 53) ಹಾಗೂ ನಾಯಕಿ ಲ್ಯಾನ್ನಿಂಗ್(ಔಟಾಗದೆ 56) 2ನೆ ವಿಕೆಟ್‌ಗೆ 98 ರನ್ ಜೊತೆಯಾಟ ನಡೆಸಿ ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.
Next Story





