Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿಗೆ ಆಗಮಿಸಿದ ಸಯನ್ಸ್...

ಮಂಗಳೂರಿಗೆ ಆಗಮಿಸಿದ ಸಯನ್ಸ್ ಎಕ್ಸ್‌ಪ್ರೆಸ್ ರೈಲು: ವಿದ್ಯಾರ್ಥಿಗಳಿಗೆ ಸಂತಸ

ವಾರ್ತಾಭಾರತಿವಾರ್ತಾಭಾರತಿ25 March 2016 12:33 PM IST
share
ಮಂಗಳೂರಿಗೆ ಆಗಮಿಸಿದ ಸಯನ್ಸ್ ಎಕ್ಸ್‌ಪ್ರೆಸ್ ರೈಲು: ವಿದ್ಯಾರ್ಥಿಗಳಿಗೆ ಸಂತಸ

 ಮಂಗಳೂರು.ಮಾ.25: ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ,ಪರಿಸರ,ಜೈವಿಕ ತಂತ್ರಜ್ಞಾನ ಇಲಾಖೆ,ಪರಿಸರ ಶಿಕ್ಷಣ ಕೆಂದ್ರ,ವಿಕ್ರಂಸಾರಾಬಾಯಿ ಸಮುದಾಯ ವಿಜ್ಞಾನ ಕೇಂದ್ರ ,ಅರಣ್ಯಮತ್ತು ಹವಾಮಾನ ಬದಲಾವಣೆ ಸಚಿವಾಲಯ ,ರೈಲ್ವೇ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಿರುವ ಹವಾಮಾನ ಬದಲಾವಣೆಯ ಜಾಗೃತಿ ಮಾಹಿತಿ ನೀಡುವ ವಿಶೇಷ ರೈಲು ಶುಕ್ರವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣಕ್ಕೆ ಆಗಮಿಸಿದೆ.
ಕಳೆದ ಅಕ್ಟೋಬರ್ 15ರಿಂದ ದೆಹಲಿಯ ಸಪ್ದರ್ ಜಂಗ್ ರೈಲು ನಿಲ್ದಾಣದಿಂದ ಆರಂಭಗೊಂಡ 16ಎಸಿ ಬೋಗಿಗಳನ್ನು ಹೊಂದಿರುವ ಈ ರೈಲು ಬಂಡಿ 51 ನಿಲ್ದಾಣಗಳಲ್ಲಿ ಪ್ರದರ್ಶನ ನೀಡಿ ಪಾಲಕ್ಕಾಡ್ ಮಾರ್ಗವಾಗಿ ಮಂಗಳೂರಿಗೆ ಆಗಮಿಸಿದೆ.ಮಾರ್ಚ್ 28ವರೆಗೆ ಮಂಗಳೂರು ಜಂಕ್ಷನ್( ಕಂಕನಾಡಿ )ರೈಲು ನಿಲ್ದಾಣದಲ್ಲಿ ಆಕರ್ಷಕ ರೈಲು ವೀಕ್ಷಣೆಗೆ ಶಾಲಾ ವಿದ್ಯಾರ್ಥಿಗಳು,ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿದೆ.ಬೆಳಗ್ಗೆ 10ರಿಂದ ಸಂಜೆ 5ರವರೆಗ ಈ ರೈಲು ಸಾರ್ವಜನಿಕ ವೀಕ್ಷಣೆಗೆ ತರೆದಿರುತ್ತದೆ.ಈ ರೈಲಿನಲ್ಲಿ ವಿಕ್ರಂ ಸಾರಾಬಾಯಿ ಸಮುದಾಯ ವಿಜ್ಞಾನ ಕೇಂದ್ರ,ಬೆಂಗಳೂರು ಅರಣ್ಯ,ಪರಿಸರ ಜೀವಿಶಾಸ್ತ್ರ ಇಲಾಖೆಯ ಸಿಬ್ಬಂದಿಗಳು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ.
  ಈ ರೈಲು ದೇಶಾದ್ಯಂತ 7ತಿಂಗಳುಗಳ ಕಾಲಸಂಚರಿಸಿ 20ರಾಜ್ಯಗಳ ಮೂಲಕ 50 ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕರಿಗೆ ಪರಿಸರ ಹವಾಮಾನ ಬದಲಾವಣೆಯ ಬಗೆಗಿನ ವೈಜ್ಞಾನಿಕ ಮಾಹಿತಿಗಳನ್ನು ಬುಹುಮಾಧ್ಯಮದ ಮೂಲಕ ನೀಡಲಿದೆ.ಈ ರೈಲು ಒಟ್ಟು 19,800 ಕಿ.ಮೀ ಕ್ರಮಿಸಲಿದೆ.ರೈಲಿನಲ್ಲಿ ಪರಿಸರ,ಪರಿಸರದ ಮೇಲಾಗುತ್ತಿರುವ ವಿವಿಧ ರೀತಿಯ ಪರಿಣಾಮ ಇದರಿಂದ ಉಂಟಾಗುವ ಹವಾಮಾನ ಬದಲಾವಣೆ,ಜೈವಿಕ ತಂತ್ರಜ್ಞಾನ,ಪರಿಸರಕ್ಕೆ ಹಾನಿಯಾಗದ ರೀತಿಯ ಪ್ರಾಚೀನ,ಬುಡಕಟ್ಟು ಜನರ ಜೀವನ ಕ್ರಮ,ಪರಿಸರಕ್ಕೆ ಹಾನಿಯಾಗುವ ಮಾನವ ನಿರ್ಮಿತ ಪರಿಸರ,ಪರಿಸರಕ್ಕೆ ಹಾನಿಯಾಗುವ ಕೈಗಾರಿಕೆಗಳ ಸಚಿತ್ರ ಮಾಹಿತಿ ಪ್ರಪಂಚದ ವಿವಿಧ ಭಾಗಗಳಲ್ಲಿ ವಾಸವಾಗಿರುವ ಜೀವ ಪ್ರಬೇಧ,ಜೀವ ಜಗತ್ತಿನಲ್ಲಿ ಅಳಿದು ಹೋದ ಡೈನೋಸಾರ್‌ಗಳ ಬಗ್ಗೆ ಮಾಹಿತಿ ನೀಡುವ ಮಾದರಿಗಳು,ಹವಾಮಾನದ ಬದಲಾವಣೆಯಿಂದ ಸೂರ್ಯನ ಕಿರಣದ ಪ್ರಖರತೆ ಮನುಷ್ಯನ ಮೇಲಾಗುವ ಪರಿಣಾಮ ,ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಮಾಹಿತಿಗಳನ್ನು ಈ ರೈಲು ಬೋಗಿಗಳಲ್ಲಿದೆ.ಸೌರಶಕ್ತಿ,ನೀರಿನ ಸಮರ್ಪಕ ಬಳಕೆ,ಮಿತ ಬಳಕೆ,ನೀರಿನ ಬಳಕೆಯ ಮಹತ್ವ,ಸೌರಶಕ್ತಿ ನವೀಕರಿಸಬಹುದಾದ ಇಂಧನ ಶಕ್ತಿಯ ಬಗ್ಗೆ ಈ ರೈಲಿನಲ್ಲಿ ಮಾಹಿತಿ ಇದೆ.ಸರಳ ವಿಜ್ಞಾನದ ಮಾಹಿತಿಗಳು ಪ್ರಾತ್ಯಕ್ಷಿಕೆಗಳ ಮೂಲಕ ಸ್ವಯಂ ಸೇವಕರು ಮಕ್ಕಳಿಗೆ ವಿಜ್ಞಾನದ ಮಾಹಿತಿಯನ್ನು ನೀಡುತ್ತಿದ್ದಾರೆ.ದೇಶದ ವಿವಿಧ ಕಡೆಗಳಲ್ಲಿ ಜನಸಾಮನ್ಯರ ಮೂಲಕ ಆವಿಷ್ಕಾರವಾದ ಸರಳ ಯಂತ್ರಗಳ ಮಾಹಿತಿ ಈ ರೈಲು ಬಂಡಿಯಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X