ಇಂದ್ರಾಣಿ ತನ್ನ ಮಗಳು ಶೀನಾ ಬೋರಾಳನ್ನು ಹತ್ಯೆ ಮಾಡಿದ್ದಳು: ಜಾಮೀನು ಅರ್ಜಿಯಲ್ಲಿ ಮುಖರ್ಜಿ ಹೇಳಿಕೆ

ಮುಂಬೈ, ಮಾ.25: ಶೀನಾ ಬೋರಾಳನ್ನು ಆಕೆಯ ತಾಯಿ ಹಾಗೂ ತನ್ನ ಪತ್ನಿ ಇಂದ್ರಾಣಿ ಮಾಡಿರುವುದಾಗಿ ಸ್ಟಾರ್ ಇಂಡಿಯಾ ಸಮೂಹದ ಮಾಜಿ ಮುಖ್ಯಸ್ಥ ಪೀಟರ್ ಮುಖರ್ಜಿ ಬಹಿರಂಗಪಡಿಸಿದ್ದಾರೆ.
2012ರಲ್ಲಿ ನಡೆದ ಶೀನಾ ಬೋರಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಸ್ಟಾರ್ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಪೀಟರ್ ಮುಖರ್ಜಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ಈ ಸ್ಫೋಟಕ ಮಾಹಿತಿಯನ್ನು ತಿಳಿಸಿದ್ದಾರೆ..
ಪೀಟರ್ ಮುಖರ್ಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಈ ಕಾರಣದಿಂದಾಗಿ ಅವರು ಮತ್ತೊಂದು ಜಾಮೀನು ಅರ್ಜಿ ಸಲ್ಲಿಸಿದ್ದಾರೆ
Next Story





