ಮಾರಕಾಸ್ತ್ರಗಳಿಂದ ದಾಳಿ: ದೂರು ದಾಖಲು
ಶಿವಮೊಗ್ಗ, ಮಾ.25: ಮನೆಯ ಬಳಿ ನಿಂತಿದ್ದ ವ್ಯಕ್ತಿಯೋರ್ವರ ಮೇಲೆ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹಲ್ಲೆ ನಡೆಸಿರುವ ಘಟನೆ ನಗರದ ನ್ಯೂ ಮಂಡ್ಲಿ ಬಡಾವಣೆಯ ನೂರು ಅಡಿ ರಸ್ತೆಯ ಇಲಿಯಾಸ್ ನಗರದ ಬಳಿ ಗುರುವಾರ ರಾತ್ರಿ ನಡೆದಿದೆ. ನಿಹ್‌ಮತ್‌ವುಲ್ಲಾ (62) ಹಲ್ಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅದೇ ಏರಿಯಾದ ಅನ್ಸಾರ್, ಬಚ್ಚಾ ಸೇರಿದಂತೆ ನಾಲ್ಕಕ್ಕೂ ಅಧಿಕ ಜನರಿದ್ದ ತಂಡ ಈ ದಾಳಿ ನಡೆಸಿದ ಎಂದು ಪೊಲೀಸ್ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ಘಟನಾ ಸ್ಥಳದಲ್ಲಿ ಆರೋಪಿಗಳು ಬಿಟ್ಟು ಹೋಗಿದ್ದ ಆಟೊ, ಎರಡು ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವ್ಯಾಪಕ ಜಾಲ ಬೀಸಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.
Next Story





