Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಭಾರತೀಯ ರಾಯಭಾರ ಕಚೇರಿ ನಮ್ಮ ಸಹಾಯಕ್ಕೆ...

‘ಭಾರತೀಯ ರಾಯಭಾರ ಕಚೇರಿ ನಮ್ಮ ಸಹಾಯಕ್ಕೆ ಬರಲೇ ಇಲ್ಲ’

ಭಾರತೀಯ ಪ್ರಯಾಣಿಕನೊಬ್ಬನ ಪ್ರತ್ಯಕ್ಷದರ್ಶಿ ವರದಿ

ವಾರ್ತಾಭಾರತಿವಾರ್ತಾಭಾರತಿ26 March 2016 11:45 PM IST
share
‘ಭಾರತೀಯ ರಾಯಭಾರ ಕಚೇರಿ ನಮ್ಮ ಸಹಾಯಕ್ಕೆ ಬರಲೇ ಇಲ್ಲ’

ಹೊಸದಿಲ್ಲಿ, ಮಾ.26: ಮೂವತ್ತು ಜನರನ್ನು ಬಲಿ ತೆಗೆದುಕೊಂಡು ಹಲವರನ್ನು ಗಾಯಗೊಳಿಸಿದ ಬಾಂಬ್ ಸ್ಫೋಟ ಬೆಲ್ಜಿಯಂನ ರಾಜಧಾನಿ ಬ್ರಸ್ಸೆಲ್ಸ್ ವಿಮಾನ ನಿಲ್ದಾಣದಲ್ಲಿ ನಡೆದು ಕೆಲವೇ ಕೆಲವು ದಿನಗಳಾಗಿವೆ. ಆದರೆ ಘಟನೆ ನಡೆಯುವ ಅರ್ಧ ಗಂಟೆ ಮೊದಲು ನಿಲ್ದಾಣ ತಲುಪಿದ್ದ ಜೆಟ್ ಏರ್‌ವೇಸ್ ವಿಮಾನದಲ್ಲಿ ಟೊರೆಂಟೋಗೆ ತಮ್ಮ ಸಹೋದರಿಯನ್ನು ನೋಡಲು ಪ್ರಯಾಣಿಸುತ್ತಿದ್ದ ಫಾರ್ಮಾ ಕಂಪೆನಿಯೊಂದರ ಆಡಳಿತ ನಿರ್ದೇಶಕ ಸಂದೀಪ್ ಸಪ್ರ ತಮ್ಮ ಕಹಿ ಅನುಭವವನ್ನು ಫಸ್ಟ್ ಪೋಸ್ಟ್ ಪ್ರತಿನಿಧಿಯೊಂದಿಗೆ ಹಂಚಿಕೊಂಡಿದ್ದು ಭಾರತೀಯ ರಾಯಭಾರ ಕಚೇರಿ ತಮ್ಮ ಸಹಾಯಕ್ಕೆ ಬರಲೇ ಇಲ್ಲವೆಂದು ದೂರಿದ್ದಾರೆ.

 ಸಂದೀಪ್ ತಮ್ಮ ಅನುಭವ ಹೀಗೆ ವಿವರಿಸಿದ್ದಾರೆ: ‘‘ನಾವಿದ್ದ ವಿಮಾನ ಮಾರ್ಚ್ 22ರ ಬೆಳಿಗ್ಗೆ 8 ಗಂಟೆಗೆ ಬ್ರಸ್ಸೆಲ್ಸ್ ವಿಮಾನ ನಿಲ್ದಾಣ ತಲುಪಿದ್ದರೂ ವಿಮಾನವನ್ನು ರನ್-ವೇಯಲ್ಲೇ ಸುರಕ್ಷಾ ಕಾರಣಗಳಿಗಾಗಿ ನಿಲ್ಲಿಸಲಾಗಿತ್ತು. ನಾವು ಅಲ್ಲೇ 45 ನಿಮಿಷ ಕಾಯಬೇಕಾಯಿತು. ಒಂದು ಗಂಟೆಯ ತರುವಾಯ ನಮ್ಮನ್ನು ಒಂದು ತೆರೆದ ಪ್ರದೇಶಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಇತರ ವಿಮಾನಗಳ ಪ್ರಯಾಣಿಕರಿದ್ದರು. ಈ ಪ್ರದೇಶ ಸ್ಫೋಟ ನಡೆದ ಸ್ಥಳದ ಹತ್ತಿರದಲ್ಲಿದ್ದು ಆ ಸ್ಥಳವನ್ನು ನಾನು ನೋಡಿದೆ. ಅಲ್ಲಿ ಎಲ್ಲವೂ ಅಲ್ಲೋಲಕಲ್ಲೋಲವಾಗಿತ್ತು. ನಮಗೆ ಬ್ರೆಡ್ ಹಾಗೂ ಕಾಫಿ ನೀಡಲಾಯಿತು. ಮತ್ತೆ ನಮ್ಮನ್ನು ದೊಡ್ಡ ಕಾಂಪ್ಲೆಕ್ಸ್ ಒಂದಕ್ಕೆ ಕರೆದೊಯ್ಯಲಾಯಿತು. ನಮ್ಮ ಹೆಸರು ವಿಳಾಸ ತಿಳಿದುಕೊಂಡು ಪಾಸ್‌ಪೋರ್ಟ್ ನೋಡಿದ ನಂತರ ಆಹಾರ ನೀಡಲಾಯಿತು. ಸುಮಾರು ನಾಲ್ಕರಿಂದ ಐದು ಸಾವಿರ ಜನರಿಗೆ ಕೇವಲ ಏಳೆಂಟು ಶೌಚಾಲಯಗಳು ಅಲ್ಲಿದ್ದವು. ರೆಡ್ ಕ್ರಾಸ್‌ನವರು ಸಹಾಯಕ್ಕಿದ್ದರೂ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಯಿರುವವರಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿತ್ತು’’.
  ‘‘ಮಾರ್ಚ್ 22ರ ರಾತ್ರಿ ಇತರ ಏರ್‌ವೇಸ್ ಅಧಿಕಾರಿಗಳು ಬಂದು ತಮ್ಮ ಪ್ರಯಾಣಿಕರನ್ನು ಕರೆದುಕೊಂಡು ಹೋದರೂ ಜೆಟ್ ಏರ್‌ವೇಸ್ ಸಿಬ್ಬಂದಿ ನಮ್ಮ ಸಹಾಯಕ್ಕೆ ಬರಲೇ ಇಲ್ಲ. ಜೆಟ್ ಏರ್‌ವೇಸ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ನನಗೆ ಆನ್‌ಲೈನ್ ಮುಖಾಂತರ ಟ್ಯಾಕ್ಸಿ ಹಾಗೂ ಹೊಟೇಲ್ ಬುಕ್ ಮಾಡುವಂತೆ ತಿಳಿಸಿದರು. ನಾನು ಹಾಗೆಯೇ ಮಾಡಿ ಹೊಟೇಲ್ ಒಂದಕ್ಕೆ ಹೋದೆ. ಅದರೆ ಸಂಜೆಯ ಹೊತ್ತಿಗೆ ಬಸ್ ಏರ್ಪಾಟು ಮಾಡಲಾಗಿದೆಯೆಂದು ಹೇಳಲಾಯಿತು ಹಾಗೂ ನಮ್ಮನ್ನು ಆಮ್‌ಸ್ಟರ್ಡೆಂಗೆ ಕರೆದುಕೊಂಡು ಹೋಗಿ ಅಲ್ಲಿ ಸಣ್ಣ ಹೊಟೇಲೊಂದರಲ್ಲಿರಿಸಲಾಯಿತು’’ ಎಂದು ಅವರು ವಿವರಿಸಿದ್ದು ಭಾರತದ ರಾಯಭಾರ ಕಚೇರಿ ಯಾವತ್ತೂ ನಮ್ಮ ಸಹಾಯಕ್ಕೆ ಬಂದಿರಲಿಲ್ಲ ಹಾಗೂ ಪ್ರಯಾಣಿಕರೆಲ್ಲಾ ನಿರಾಶ್ರಿತರಂತೆ ಕಾಲ ಕಳೆಯಬೇಕಾಗಿತ್ತು ಎಂದಿದ್ದಾರೆ.
‘‘ನಮ್ಮ ಹ್ಯಾಂಡ್‌ಬ್ಯಾಗ್‌ಗಳನ್ನೂ ನಮಗೆ ನೀಡದೆ ಮೂರು ದಿನಗಳ ಕಾಲ ಬ್ರೆಡ್ ಬೆಣ್ಣೆ ತಿಂದು ಬದುಕು ವಂತೆ ಮಾಡಲಾಯಿತು’’ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X