Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೌಚಾಲಯದ ಗುಂಡಿ ಸ್ವಚ್ಚತೆಗೆ ಮಾನವ ಬಳಕೆ:...

ಶೌಚಾಲಯದ ಗುಂಡಿ ಸ್ವಚ್ಚತೆಗೆ ಮಾನವ ಬಳಕೆ: ದಲಿತ ಕುಂದು ಕೊರತೆ ಸಭೆಯಲ್ಲಿ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 March 2016 4:28 PM IST
share
ಶೌಚಾಲಯದ ಗುಂಡಿ ಸ್ವಚ್ಚತೆಗೆ ಮಾನವ ಬಳಕೆ: ದಲಿತ ಕುಂದು ಕೊರತೆ ಸಭೆಯಲ್ಲಿ ಕ್ರಮಕ್ಕೆ ಆಗ್ರಹ

ಮಂಗಳೂರು,ಮಾ.27:ಶೌಚಾಲಯದ ಗುಂಡಿಗಳ ಸ್ವಚ್ಚತೆಗೆ ಮಾನವ ಬಳಕೆ ಮಾಡಬಾರದೆಂದು ಸುಪ್ರೀಂಕೋರ್ಟ್ ಆದೇಶವಿದ್ದರೂ,ದ.ಕ ಜಿಲ್ಲಾಧಿಕಾರಿಗಳು ಸೂಚಿಸಿದ್ದರೂ ಮಂಗಳೂರು ನಗರದ ಮಧ್ಯಭಾಗದಲ್ಲಿಯೆ ಶೌಚಾಲಯದ ಗುಂಡಿಗಳನ್ನು ದಲಿತ ಸಮುದಾಯದವರಿಂದ ಮಾಡಿಸಲಾಗುತ್ತಿದೆ ಎಂದು ಇಂದು ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ದಲಿತ ಕುಂದುಕೊರತೆ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಮಂಗಳೂರು ಡಿಸಿಪಿ ಶಾಂತರಾಜು ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡ ಎಸ್.ಪಿ.ಆನಂದ್ ಅವರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮತ್ತು ಪುರಭವನದ ಹಿಂದೆ ಇರುವ ಸುಲಭ ಶೌಚಾಲಯದ ಬಳಿಯಿರುವ ಡ್ರೈನೆಜ್‍ನಲ್ಲಿ ದಲಿತ ಯುವಕರನ್ನು ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ.ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರೀಯಿಸಿದ ಡಿಸಿಪಿ ಶಾಂತರಾಜು ಈ ಬಗ್ಗೆ ದೂರು ದಾಖಲಿಸುವಂತೆ ಸೂಚಿಸಿದರು.

ದಲಿತ ಮುಖಂಡ ಮುಖೇಶ್ ಮಾತನಾಡಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳೆದ 9 ತಿಂಗಳಿನಿಂದ ನಡೆಯುತ್ತಿರುವ ದಲಿತ ಕುಂದುಕೊರತೆ ಸಭೆಯಲ್ಲಿ ಎಸ್‍ಐ ಭಾಗವಹಿಸುತ್ತಿಲ್ಲ. ಈ ಬಗ್ಗೆ ಸಾಕಷ್ಟು ಭಾರಿ ದೂರು ಸಲ್ಲಿಸಿದರೂ ಯಾವುದೆ ಪ್ರಯೋಜನವಾಗಿಲ್ಲ.ಈ ರೀತಿಯಾದರೆ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗುವುದು ಎಂದು ಹೇಳಿದರು.

ಕೋಟಿಮುರ ಎಂಬ ಪ್ರದೇಶದಲ್ಲಿ ರಸ್ತೆಗೆ ದಲಿತರು ಜಾಗ ಬಿಟ್ಟುಕೊಟ್ಟಿದ್ದಾರೆ. ಆದರೆ ಅಲ್ಲಿ ನಿರ್ಮಾನವಾಗುತ್ತಿರುವ ಕಟ್ಟಡªವು ರಸ್ತೆಗೆ ಜಾಗ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದಾಗ ಡಿಸಿಪಿ ಶಾಂತರಾಜು ಈ ಬಗ್ಗೆ ಮನಪಾದೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸುಮಿತ್ರ ಉಮೇಶ್ ಎಂಬವರು ಮಾತನಾಡಿ  ಮೂರು ವರ್ಷಗಳ ಹಿಂದೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿದ ದ್ವೇಷಕ್ಕೆ ನೀರಿನ ಟ್ಯಾಂಕ್‍ಗೆ ವಿಷ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.ಪ್ರಸಕ್ತ ದಾಖಲಿಸಲಾಗುತ್ತಿರುವ ದೂರುಗಳಿಗೆ ಸ್ಪಂದನೆಯಿಲ್ಲ ಎಂದು ಅವರು ಹೇಳಿದರು. ಇದಕ್ಕೆ ಪ್ರತಿಕ್ರೀಯಿಸಿದ ಡಿಸಿಪಿ ಶಾಂತರಾಜು ನೀರಿನ ಟ್ಯಾಂಕ್‍ಗೆ ವಿಷವನ್ನು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾನವ ಹಕ್ಕು ಆಯೋಗದ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ದಾಖಲಿಸಲಾಗಿರುವ ಪ್ರಕರಣವನ್ನು ದಕ್ಷಿಣ ಎಸಿಪಿಯವರು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿಶುಕುಮಾರ್ ಮಾತನಾಡಿ ಮುಲ್ಕಿ, ಮೂಡಬಿದ್ರೆಯಲ್ಲಿ ಪಿಸಿಆರ್,ಪಿಸಿಐ ಇಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ ಎಂದು ದೂರಿದರು. 

ಸಿಟಿಬಸ್‍ಗಳಲ್ಲಿ ಟಿಕೇಟ್ ಕೊಡದೆ ಇರುವುದರಿಂದ ವಾಹನಗಳು ಅಪಘಾತವಾದಾಗ ಪ್ರಕರಣಕ್ಕೆ ಸಂಬಂಧಪಟ್ಟು ಟಿಕೇಟು ಅಗತ್ಯವಿದ್ದು ಈ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆಯೂ ಒತ್ತಾಯಿಸಲಾಯಿತು. ಸಭೆಯಲ್ಲಿ ಡಿಸಿಪಿ ಸಂಜೀವ್ ಪಾಟೀಲ್ ಉಪಸ್ಥಿತರಿದ್ದರು.

ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಸಂದೀಪ್ ಅತ್ತಾವರ ಎಂಬಾತ ಬಡ ರಿಕ್ಷಾ ಚಾಲಕರಿಗೆ ಮತ್ತು ಹೊಸದಾಗಿ ದುಡಿಯಲು ಬರುತ್ತಿರುವ ರಿಕ್ಷಾ ಚಾಲಕರಿಗೆ ಹಲ್ಲೆ ಮಾಡುತ್ತಿದ್ದರೂ ಪೊಲೀಸರು ಆತನ ಬೆಂಬಲಕ್ಕೆ ನಿಂತಿದ್ದಾರೆ ಎಂದು ದಲಿತ ಮುಖಂಡ ಸದಾಸಿವ ಆಪಾದಿಸಿದರು. ಸಂದೀಪ್ ಅತ್ತಾವರ ದೊಣ್ಣೆಯ ಮೂಲಕ ಹಲ್ಲೆಗೈಯುತ್ತಿದ್ದು ಈ ಸಂದರ್ಭದಲ್ಲಿ ಆತನಿಗೆ ಹೆದರಿ ಯಾರು ಹಲ್ಲೆಗೊಳಗಾಗುತ್ತಿರುವವರ ರಕ್ಷಣೆಗೆ ಬರುವುದಿಲ್ಲ.ಆತನಿಗೆ ದಿನಂಪ್ರತಿ ಹಪ್ತಾ ನೀಡಬೇಕೆಂಬ ಮಾಹಿತಿಯಿದೆ . ಪೊಲೀಸ್ ಇನ್ಸ್‍ಪೆಕ್ಟರ್ ಶರೀಫ್ ಅವರಿಗೆ ದೂರು ನೀಡಿದರು ಆತನಿಗೆ ಅವರು ಬೆಂಬಲಿಸುತ್ತಿದ್ದಾರೆ ಎಂದು ಆಪಾದಿಸಿದರು.

ಈ ಬಗ್ಗೆ ಪ್ರತಿಕ್ರೀಯಿಸಿದ ಡಿಸಿಪಿ ಶಾಂತರಾಜು ದಕ್ಷಿಣ ಎಸಿಪಿ ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X