ನಾಳೆ ಉಪ್ಪಿನಂಗಡಿಯಲ್ಲಿ ಚೆರುಶ್ಶೇರಿ ಉಸ್ತಾದರ ಅನುಸ್ಮರಣೆ
ಎಸ್‌ಕೆಎಸ್‌ಎಸ್‌ಎಫ್ ರಾಜ್ಯಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ

ಉಪ್ಪಿನಂಗಡಿ: ರೇಂಜ್ ಮದ್ರಸ ಮೆನೇಜ್‌ಮೆಂಟ್ ಉಪ್ಪಿನಂಗಡಿ ಹಾಗೂ ಉಪ್ಪಿನಂಗಡಿ ರೇಂಜ್ ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಮತ್ತು ಮಾಲಿಕ್‌ದೀನಾರ್ ಆಡಳಿತ ಸಮಿತಿ ಉಪ್ಪಿನಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಮಾ. 29ರಂದು ಮಾಲಿಕ್‌ದೀನಾರ್ ಜುಮಾ ಮಸೀದಿ ವಠಾರದಲ್ಲಿ ಝೈನುಲ್ ಉಲಮಾ ಚೆರುಶ್ಶೇರಿ ಉಸ್ತಾದ್‌ರವರ ಅನುಸ್ಮರಣೆ ಹಾಗೂ ಎಸ್‌ಕೆಎಸ್‌ಎಸ್‌ಎಫ್ ರಾಜ್ಯಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪ್ಪಿನಂಗಡಿ ಮಾಲಿಕ್‌ದೀನಾರ್ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಹೆಚ್. ಯೂಸುಫ್ ಹಾಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಝೈನುಲ್ ಉಲಮಾ ಚೆರುಶ್ಶೇರಿ ಝೈನುದ್ದೀನ್ ಮುಸ್ಲಿಯಾರ್‌ರವರು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಸಂಸ್ಥೆಯಲ್ಲಿ ಕಳೆದ 20 ವರ್ಷಗಳ ಕಾಲ ಪ್ರಧಾನ ಕಾರ್ಯದರ್ಶಿಯಾಗಿದ್ದು, ಸಮಸ್ತ ಸಂಸ್ಥೆಯ ಅಗ್ರಗಣ್ಯ ನಾಯಕರಲ್ಲಿ ಓರ್ವರಾಗಿದ್ದರು. ಉಪ್ಪಿನಂಗಡಿಯ ನೂತನ ಮಸೀದಿ ಉದ್ಘಾಟನೆಗೆ ಆಗಮಿಸಿದ್ದ ಅವರು ಜುಮಾ ನಮಾಜಿನ ನೇತೃತ್ವ ವಹಿಸಿದ್ದರು. ಈಚೆಗೆ ನಿಧನ ಹೊಂದಿರುವ ಅವರ ಗೌರವಾರ್ಥ ಉಪ್ಪಿನಂಗಡಿಯಲ್ಲಿ ಅವರಿಗೆ ತಹಲೀಲ್ ಸಮರ್ಪಿಸಿ, ಅನುಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗೂ ಎಸ್‌ಕೆಎಸ್‌ಎಸ್‌ಎಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಅವರ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಉಪ್ಪಿನಂಗಡಿ ಮಾಲಿಕ್‌ದೀನಾರ್ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಉದ್ಘಾಟಿಸಲಿದ್ದಾರೆ. ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಅನಸ್ ತಂಙಳ್ ದುವಾಃ ನೆರವೇರಿಸಲಿದ್ದಾರೆ. ದಾರುಲ್ ಹುದಾ ಚೆಮ್ಮಾಡ್ ಇದರ ಪ್ರೊಫೇಸರ್ ಕೆ.ಸಿ. ಮುಹಮ್ಮದ್ ಬಾಖಾವಿ ಮುಖ್ಯ ಪ್ರಭಾಷಣ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಉಪ್ಪಿನಂಗಡಿ ರೇಂಜ್ ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಗೌರವಾಧ್ಯಕ್ಷ ಹನೀಫ್ ಫೈಝಿ, ಉಪ್ಪಿನಂಗಡಿ ರೇಂಜ್ ಮದ್ರಸ ಮೆನೇಜ್‌ಮೆಂಟ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಕೊಳ್ಳೇಜಾಲ್ ಮತ್ತಿತರ ಪ್ರಮುಖರು, ವಿವಿಧ ಮಸೀದಿಯ ಅಧ್ಯಕ್ಷರು, ಇಮಾಮರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪ್ಪಿನಂಗಡಿ ರೇಂಜ್ ಜಂ-ಇಯ್ಯತ್ತುಲ್ ಮುಅಲ್ಲಿಮೀನ್ ಕಾರ್ಯದರ್ಶಿ ಕೆ.ಎಚ್. ಅಶ್ರಫ್ ಹನೀಫಿ, ಉಪ್ಪಿನಂಗಡಿ ಎಸ್‌ಕೆಎಸ್‌ಎಸ್‌ಎಫ್ ಘಟಕದ ಉಪಾಧ್ಯಕ್ಷ ಮಹಮ್ಮದ್ ಕೂಟೇಲು, ಕಾರ್ಯದರ್ಶಿ ಸಾದಿಕ್ ಕೋಲ್ಪೆ ಉಪಸ್ಥಿತರಿದ್ದರು.







