ವಿಶ್ವಕಪ್:ಆಸ್ಟ್ರೇಲಿಯ ಬ್ಯಾಟಿಂಗ್ ಆಯ್ಕೆ

ಮೊಹಾಲಿ, ಮಾ.27: ಟ್ವೆಂಟಿ-20 ವಿಶ್ವಕಪ್‌ನ ಸೂಪರ್-10 ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್ ಜಯಿಸಿದ ಆಸ್ಟ್ರೇಲಿಯ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಕ್ವಾರ್ಟರ್ ಫೈನಲ್ ಸ್ವರೂಪ ಪಡೆದಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ಗೆ ತೇರ್ಗಡೆಯಾಗಲಿದೆ. ಸೋತ ತಂಡ ಮನೆ ಹಾದಿ ಹಿಡಿಯಲಿದೆ.
ಆಸ್ಟ್ರೇಲಿಯ ಹಾಗೂ ಭಾರತ ತಂಡಗಳು ಯಾವುದೇ ಬದಲಾವಣೆ ಮಾಡಿಲ್ಲ. ಆಸ್ಟ್ರೇಲಿಯ ತಂಡ ಪಾಕ್ ವಿರುದ್ಧ ಆಡಿದ್ದ ತಂಡವನ್ನೇ ಕಣಕ್ಕಿಳಿಸಲಿದೆ. ಭಾರತ ತಂಡದಲ್ಲೂ ಎಂದಿನಂತೆ ಯಾವುದೇ ಬದಲಾವಣೆ ಮಾಡಲಾಗಿಲ್ಲ.
Next Story





