Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತ ಯೋಧನ ದೇಹವನ್ನು ಬೆತ್ತಲೆಯಾಗಿಯೇ...

ಮೃತ ಯೋಧನ ದೇಹವನ್ನು ಬೆತ್ತಲೆಯಾಗಿಯೇ ಕುಟುಂಬಕ್ಕೆ ಒಪ್ಪಿಸಿದ ಅರೆಸೇನಾ ಪಡೆ: ಆರೋಪ

ಸಿಆರ್‌ಪಿಎಫ್‌ನಿಂದ ತನಿಖೆ: ರಾಜನಾಥ್

ವಾರ್ತಾಭಾರತಿವಾರ್ತಾಭಾರತಿ27 March 2016 9:06 PM IST
share
ಮೃತ ಯೋಧನ ದೇಹವನ್ನು ಬೆತ್ತಲೆಯಾಗಿಯೇ ಕುಟುಂಬಕ್ಕೆ ಒಪ್ಪಿಸಿದ ಅರೆಸೇನಾ ಪಡೆ: ಆರೋಪ

ಕೊಚ್ಚಿ, ಮಾ.27: ಛತ್ತೀಸ್‌ಗಡದ ಬಿಲಾಸ್ಪುರದಲ್ಲಿ ಹುತಾತ್ಮನಾದ ಸೈನಿಕನನ್ನು ಅತ್ಯಂತ ಅನಾಗರಿಕ ರೀತಿಯಲ್ಲಿ ಅರೆಸೇನಾ ಪಡೆ ಆತನ ಕುಟುಂಬಕ್ಕೆ ಒಪ್ಪಿಸಿದ ಘಟನೆಯೊಂದು ಬಹಿರಂಗವಾಗಿದೆ.

 ಕೇರಳದ ಕೊಚ್ಚಿಯ ಮೂಲದ ಯೋಧ ಅನಿಲ್ ಎಂಬವರ ಮೃತದೇಹವನ್ನು ಪ್ಲಾಸ್ಟಿಕ್‌ನಿಂದಲೂ ಮುಚ್ಚದೆ, ಯಾವುದೇ ಗೌರವವನ್ನು ನೀಡದೆ, ಬತ್ತಲೆ ರೀತಿಯಲ್ಲೇ ಕುಟುಂಬಕ್ಕೆ ಅರೆಸೇನಾ ಪಡೆ ಒಪ್ಪಿಸಿದೆ ಎಂದು ಲೋಕಸಭಾ ಸದಸ್ಯ ಕೆ. ಸಿ. ವೇಣುಗೋಪಾಲ್ ಆರೋಪಿಸಿದ್ದಾರೆ.
ತನ್ನೊಬ್ಬ ಯೋಧನಿಗೆ ಅರೆ ಸೇನಾ ಪಡೆ ಅಗೌರವ ತೋರಿಸಿದೆಯೆಂಬ ಆರೋಪದ ಕುರಿತು ಸಿಆರ್‌ಪಿಎಫ್ ತನಿಖೆ ನಡೆಸಲಿದೆಯೆಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಇಂದು ಲೋಕಸಭಾ ಸದಸ್ಯ ಕೆ.ಸಿ. ವೇಣುಗೋಪಾಲರಿಗೆ ಭರವಸೆ ನೀಡಿದ್ದಾರೆ.
ಚಿಂಗೋಲಿ ಪಂಚಾಯ್ ನಿವಾಸಿ ಅನಿಲ್, ಛತ್ತೀಸ್‌ಗಡದ ಬಿಲಾಸಪುರದಲ್ಲಿ ಗುರುವಾರ ನೀರಲ್ಲಿ ಕೊಚ್ಚಿಕೊಂಡು ಹೋಗಿ ಮೃತರಾಗಿದ್ದರು. ಆದರೆ, ಅವರ ಪಾರ್ಥಿವ ಶರೀರ ಆಲಪ್ಪುರಕ್ಕೆ ತಲುಪಿದಾಗ, ಅದು ಬತ್ತಲೆಯಾಗಿತ್ತು. ಅದನ್ನು ಪ್ಲಾಸ್ಟಿಕ್ ಹಾಳೆಯಲ್ಲ್ಲೂ ಸುತ್ತಿರಲಿಲ್ಲ ಹಾಗೂ ಕೆಡದಂತೆ ಸುಗಂಧ ದ್ರವ್ಯವನ್ನೂ ಹಾಕಿರಲಿಲ್ಲ. ಈ ಕಾರಣದಿಂದ ಮೃತದೇಹ ಕೊಳೆಯಲಾರಂಭಿಸಿತ್ತು ವೇಣುಗೋಪಾಲ್ ಆರೋಪಿಸಿದರು.
ಆಘಾತಗೊಂಡ ಅನಿಲ್‌ರ ಬಂಧುಗಳು ಮೃತದೇಹ ಪಡೆಯಲು ನಿರಾಕರಿಸಿದರು.
ಬಳಿಕ ಸ್ಥಳೀಯ ಪೊಲೀಸರು ಅದನ್ನು ಪಡೆದು, ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಯೊಂದರ ಶವಾಗಾರದಲ್ಲಿರಿಸಿದರು.
ಸಿಆರ್‌ಪಿಎಫ್ ಅಧಿಕಾರಿಗಳು ತೋರಿಸಿದ ಅಗೌರವದ ಬಗ್ಗೆ ತನಿಖೆಗೆ ಕೋರಿ ತಾನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹಾಗೂ ಅವರ ಸಹಾಯಕ ಸಚಿವ ಕಿರಣ್ ರಿಜಿಜು ಅವರಿಗೆ ಪತ್ರ ಬರೆದಿದ್ದೆ. ಗೃಹ ಸಚಿವರಿಂದು ತನಗೆ ಕರೆ ಮಾಡಿದ್ದರು. ಘಟನೆಯ ಕುರಿತು ತನಿಖೆಗೆ ಸಿಆರ್‌ಪಿಎಫ್ ಮಹಾನಿರ್ದೇಶಕರಿಗೆ ಆದೇಶ ನೀಡಿದ್ದೇನೆಂದು ಅವರು ತಿಳಿಸಿದ್ದಾರೆಂದು ವೇಣುಗೋಪಾಲ್ ಹೇಳಿದರು.
ಗೃಹ ಸಚಿವರ ಆಶ್ವಾಸನೆಯ ಬಳಿಕ ಸಮಾಧಾನಿತರಾದ ಬಂಧುಗಳು ಅಂತ್ಯ ಸಂಸ್ಕಾರಕ್ಕಾಗಿ ಅನಿಲ್‌ರ ಪಾರ್ಥಿವ ಶರೀರವನ್ನು ಪಡೆದರು. ನಾಗರಿಕ ಸಮಾಜದಲ್ಲಿ ಮೃತ ದೇಹಕ್ಕೆ ಅತ್ಯಂತ ಗೌರವ ನೀಡುವುದು ಸಾಮಾನ್ಯ ಸಂಪ್ರದಾಯವಾಗಿದೆ. ಅಗೌರವಕ್ಕೆ ಹೊಣೆಗಾರರಾದವರನ್ನು ತೀವ್ರವಾಗಿ ಶಿಕ್ಷಿಸಬೇಕೆಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X