Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಣಕಯಂತ್ರ ಕನ್ನಡೀಕರಣದಿಂದ ಭಾಷಾ ರಕ್ಷಣೆ...

ಗಣಕಯಂತ್ರ ಕನ್ನಡೀಕರಣದಿಂದ ಭಾಷಾ ರಕ್ಷಣೆ ಸಾಧ್ಯ: ಡಾ.ಚಂದ್ರಶೇಖರ ಕಂಬಾರ

ವಾರ್ತಾಭಾರತಿವಾರ್ತಾಭಾರತಿ27 March 2016 11:25 PM IST
share
ಗಣಕಯಂತ್ರ ಕನ್ನಡೀಕರಣದಿಂದ ಭಾಷಾ ರಕ್ಷಣೆ ಸಾಧ್ಯ: ಡಾ.ಚಂದ್ರಶೇಖರ ಕಂಬಾರ

ಬೆಂಗಳೂರು, ಮಾ. 27: ಆಂಗ್ಲ ಭಾಷೆಯ ಪ್ರಮಾಣದಷ್ಟೇ ಗಣಕಯಂತ್ರದಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಬಳಸದ ಹೊರತು ಕನ್ನಡವನ್ನು ರಕ್ಷಣೆ ಮಾಡಲು ಸಾಧ್ಯವಿಲ್ಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ ರವಿವಾರ ನಗರದ ಯವನಿಕಾ ಸಭಾಂಗಣದಲ್ಲಿ ಆಯೋಜಿಸಿದ್ದ ದಶಮಾನೋತ್ಸವ ಮತ್ತು ರಾಜ್ಯಮಟ್ಟದ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ ಕನ್ನಡ ಗಣಕ ಸ್ಮರಣಪತ್ರ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
  ಕನ್ನಡ ಉಳಿವಿಗಾಗಿ ಎಷ್ಟು ವಿಶ್ವ ಕನ್ನಡ ಸಮ್ಮೇಳನ, ವಿಚಾರ ಸಂಕಿರಣ, ಚರ್ಚೆ, ಸಂವಾದಗಳನ್ನು ಹಮ್ಮಿಕೊಂಡರೂ ಭಾಷೆಯ ರಕ್ಷಣೆಗೆ ಉಪಯೋಗಕ್ಕೆ ಬರುವುದಿಲ್ಲ. ಆಧುನೀಕರಣದ ಪ್ರಭಾವತೆಯ ಕಂಪ್ಯೂಟರ್‌ನಲ್ಲಿ ಬಳಸುವ ಎಲ್ಲ ತಂತ್ರಾಂಶಗಳನ್ನು ಆಂಗ್ಲ ಭಾಷೆಯ ಮಾದರಿಯಲ್ಲೆ ಕನ್ನಡವನ್ನು ಬಳಸಿದಾಗ ಮಾತ್ರ ಭಾಷಾ ರಕ್ಷಣೆ ಮಾಡಲು ಸಾಧ್ಯ ಎಂದು ಅಭಿಪ್ರಾಯಿಸಿದರು.
 ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ಅವಧಿಯಲ್ಲಿ ನಾನೂ ವಿಧಾನ ಪರಿಷತ್ ಸದಸ್ಯನಾಗಿದ್ದಾಗ ಕಂಪ್ಯೂಟರನ್ನು ಕನ್ನಡೀಕರಣಗೊಳಿಸಬೇಕು ಎಂದು ಹೋರಾಟ ಮಾಡಿದೆ. ನನ್ನ ಜೊತೆ ಪೂರ್ಣಚಂದ್ರ ತೇಜಸ್ವಿ ಮತ್ತು ಕುವೆಂಪು ವಿವಿ ಕುಲಪತಿಯಾಗಿದ್ದ ಡಾ.ಚಿದಾನಂದಗೌಡ ಸೇರಿ ಸರಕಾರದ ಮೇಲೆ ಒತ್ತಡ ತಂದರೂ ಯಾವುದೇ ಪ್ರಯೋಜನ ಸಿಗಲಿಲ್ಲ. ಈ ನಮ್ಮ ಪ್ರಯತ್ನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಡಿಯೂರಪ್ಪನವರು ಪ್ರೋತ್ಸಾಹ ನೀಡಿದರಾದರೂ ಈ ಯೋಜನೆ ಇಂದಿಗೂ ಕುಂಠಿತವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂದು ಯಾವೊಬ್ಬ ರಾಜಕಾರಣಿ ಕನ್ನಡ ಭಾಷೆಗಾಗಿ ಧ್ವನಿ ಎತ್ತುತ್ತಿಲ್ಲ, ಎನೇನೂ ಕೆಲಸ ಮಾಡುತ್ತಿಲ್ಲ. ಮಂತ್ರಿಗಳಿಂದಲೇ ಕನ್ನಡ ಭಾಷೆ ನಾಶವಾಗುತ್ತಿದೆ.ರಾಜಕೀಯ ನಾಯಕರೇ ಪರೋಕ್ಷವಾಗಿ ಕನ್ನಡವನ್ನು ಕೊಲೆ ಮಾಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ ಅವರು, ಕನ್ನಡ ಭಾಷೆಯನ್ನು ಕಂಪ್ಯೂಟರೀಕರಣ ಗೊಳಿಸಲು ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
 ಮಹಿಷಿ ವರದಿ ಅನುಷ್ಠಾನಗೊಳಿಸಿ:  ಇತ್ತೀಚಿನ ದಿನಗಳಲ್ಲಿ ಯುವಕರ ಮೇಲೆ ಹೆಚ್ಚು ಬ್ರಿಟಿಷರ ಪ್ರಭಾವ ಬೀರಿದೆ. ಅವರ ಜೀವನ ಶೈಲಿ, ಜೀವನ ಕ್ರಮ ಮತ್ತು ಭಾಷೆಯ ಮೇಲೆ ಪರಾವಲಂಬಿಯಾಗುತ್ತಿದ್ದಾರೆ. ಈ ಪರಿಣಾಮ ಮಕ್ಕಳಲ್ಲಿನ ಸೃಜನಶೀಲತೆಗೆ ಕುಂದು ಬಂದಿದೆ. ಇಂದಿನ ಯುವಕರಲ್ಲಿ ಸೃಜನಶೀಲತೆ ಬೆಳೆಯಬೇಕಾದರೆ ಸರೋಜಿನಿ ಮಹಿಷಿ ವರದಿಯನ್ನು ಕೂಡಲೆ ಅನುಷ್ಠಾನಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಆಹಾರ ಸಚಿವ ದಿನೇಶ್‌ಗುಂಡೂ ರಾವ್ ಮಾತನಾಡಿ, ಕನ್ನಡದಲ್ಲಿ ಕಂಪ್ಯೂಟರ್ ತರಬೇತಿ ನೀಡುವುದರಿಂದ ಅನ್ಯ ಭಾಷೆಗೆ ಅವಲಂಬಿತರಾಗುವುದನ್ನು ತಪ್ಪಿಸಬಹುದು. ಇಂದು ಕಂಪ್ಯೂಟರ್ ಜ್ಞಾನವಿದ್ದರೆ ಮಾತ್ರ ಉದ್ಯೋಗ ಗಳಿಸಲು ಸಾಧ್ಯ. ಈ ದೃಷ್ಠಿಯಿಂದ ಯುವಕರಿಗೆ ಉಚಿತ ಕಂಪ್ಯೂಟರ್ ತರಬೇತಿ ನೀಡುತ್ತಿರುವ ಕೇಂದ್ರಗಳಿಗೆ ಸರಕಾರ ಪ್ರೋತ್ಸಾಹ ನೀಡಲಾಗುವುದು ಎಂದು ಹೇಳಿದರು.
ಕನ್ನಡ ಗಣಕ ಉಚಿತ ತರಬೇತಿ ಕೇಂದ್ರದ ಅಧ್ಯಕ್ಷ ಎಸ್.ಎಲ್.ಗಂಗಾಧರಪ್ಪ ಮಾತನಾಡಿ, ಕನ್ನಡಿಗರ ಸೋಮಾರಿತನ ದಿಂದ ಇಂದು ಕನ್ನಡ ಅವನತಿಯತ್ತ ಸಾಗಿದೆ. ನಗರದಲ್ಲಿ ಹೋಟೆಲ್ ಉದ್ಯಮ ಸೇರಿದಂತೆ ಇತರೆ ವಲಯಗಳ ಸಣ್ಣ ಪುಟ್ಟ ಕೆಲಸಗಳನ್ನು ಇಂದು ಹೆಚ್ಚು ಪರಭಾಷಿಗರೇ ನಿಭಾಯಿಸುತ್ತಿದ್ದಾರೆ. ಈ ಪರಿಣಾಮ ಬೆಂಗಳೂರು ನಗರದಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಶೇ.23ಕ್ಕೆ ಇಳಿದಿದೆ.ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ ವರ್ಷಗಳಲ್ಲಿ ಕನ್ನಡ ಭಾಷೆ ಸಂಪೂರ್ಣವಾಗಿ ನಶಿಸಲಿದೆ ಎಂದು ಆತಂಕಪಟ್ಟರು.
ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರದ ಸಂಸ್ಥಾಪಕ ಮುಖ್ಯಸ್ಥ ಆರ್.ಎ.ಪ್ರಸಾದ್, ಕೆಪಿಸಿಎಲ್‌ನ ಮಾಜಿ ನಿರ್ದೇಶಕ ಎಂ.ಬಿ.ಜಯರಾಂ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಸ್.ಆರ್.ಸತ್ಯನಾರಾಯಣ ಉಪಸ್ಥಿತ ರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X