ಇಂದು ಸಾಲ ಯೋಜನೆಗೆ ಚಾಲನೆ
ಬೆಂಗಳೂರು, ಮಾ. 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಪ್ರಸಕ್ತ ಸಾಲಿಗೆ ರೂಪಿಸಿರುವ ಜಿಲ್ಲಾ ಸಾಲ ಯೋಜನೆಗೆ ಮಾ.28ರಂದು ಕೆನರಾ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ಎನ್.ಲಕ್ಷ್ಮೀನಾರಾಯಣ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಕಾರಿ ಎಸ್. ಪಾಲಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಕಾರಿ ಸಿ.ಪಿ.ಶೈಲಜಾ, ಯೋಜನಾ ನಿರ್ದೇಶಕ ಮಾದೋರಾವ್, ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕ ಜಿ.ಎಸ್.ಶ್ರೀನಿವಾಸ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.ನೆ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,580 ಕೋಟಿ ರೂ. ಸಾಲ ಯೋಜನೆ ರೂಪಿಸಲಾಗಿದೆ. ಇದರಲ್ಲಿ ಕೃಷಿ ಮತ್ತು ಕೈಗಾರಿಕಾ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿರುವ 186 ಶಾಖೆಗಳ ಮೂಲಕ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜಿಲ್ಲಾ ಲೀಡ್ ಬ್ಯಾಂಕ್ ವಿಭಾಗೀಯ ವ್ಯವಸ್ಥಾಪಕರ ಜಿ.ಎಸ್.ಶ್ರೀನಿವಾಸನ್ ತಿಳಿಸಿದ್ದಾರೆ.