ಎ.7ರಂದು ವಿಶ್ವ ಆರೋಗ್ಯ ದಿನಾಚರಣೆ
ಬೆಂಗಳೂರು,ಮಾ. 27: ನಗರದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಎ.7ರಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಿ.ಎಸ್. ವಸದ್ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ಅಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ‘ಮಧುಮೇಹ ಏರಿಕೆಯನ್ನು ನಿಲ್ಲಿಸೋಣ ಹಾಗೂ ಸೋಲಿಸೋಣ’ ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷದ ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಧುಮೇಹವು ವಯಸ್ಸಿನ ಅಂತರವಿಲ್ಲದೆ ಎಲ್ಲಾ ವಯಸ್ಸಿನವರಲ್ಲೂ ಕಾಣುವ ಕಾಯಿಲೆಯಾಗಿದೆ. ಈ ವರ್ಷದ ಆರೋಗ್ಯ ದಿನಾಚರಣೆ ಪ್ರಯುಕ್ತ ಮಧುಮೇಹವನ್ನು ತಡೆಯಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
Next Story





