ಬಿಹಾರ ಮೂಲದ ಅಡುಗೆ ಭಟ್ಟನ ಕೊಲೆ
ಬೆಂಗಳೂರು, ಮಾ. 27: ಹಳೆದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಅಡುಗೆ ಭಟ್ಟನನ್ನು ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಇಲ್ಲಿನ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ.
ಬಿಹಾರ ಮೂಲದ ರಾಮ್ ಚಾರಿತ್ರ ಮುಖಿಯಾ (55) ಕೊಲೆಯಾದವರು.
ಮುಖಿಯಾ ಇಲ್ಲಿನ ಇಂದಿರಾ ನಗರದಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು, ಇಪ್ಪತ್ತೈದು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಸಂಬಂಕರು ಬಿಹಾರದಿಂದ ಆಗಮಿಸಬೇಕಿದ್ದು, ಮಾ. 28ರಂದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ವಾರಸುದಾರರಿಗೆ ಒಪ್ಪಿಸುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಇಂದಿರಾನಗರ ಠಾಣಾ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು, ಕೊಲೆ ಆರೋಪಿಗಳ ಬಂಧನಕ್ಕೆ ವ್ಯಾಪಕ ಶೋಧ ಕಾರ್ಯ ಕೈಗೊಂಡಿದ್ದಾರೆ.





