ಪುತ್ತೂರು : ವಿದ್ಯಾರ್ಥಿಗಳ ಹೊಡೆದಾಟ , ನಾಲ್ವರು ಆಸ್ಪತ್ರೆಗೆ
ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ಸಮುದಾಯಕ್ಕೆ ಸೇರಿದ ವಿದ್ಯಾರ್ಥಿ ತಂಡಗಳ ನಡುವೆ ಪರಸ್ಪರ ಹೊಡೆದಾಟ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರು ನಗರದ ಹೊರವಲಯದ ಜಿಡೆಕಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಜಿಡೆಕಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಹನೀಫುದ್ದೀನ್ ಮತ್ತು ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಸಿದ್ದೀಕ್ ಅವರು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವಿಭಾಗದ ವಿದ್ಯಾರ್ಥಿಗಳಾದ ಅಮರ್ ಮತ್ತು ಶ್ರೀಶೈಲ ಅವರು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಬೈಲ್‌ಸೆಟ್‌ವೊಂದರ ವಿಚಾರದಲ್ಲಿ ಈ ಎರಡು ತಂಡಗಳ ನಡುವೆ ಕಾಲೇಜು ಆವರಣದಲ್ಲಿ ಪರಸ್ಪರ ಹೊಡೆದಾಟ ನಡೆದಿದೆ. ಇತ್ತಂಡದವರು ಪರಸ್ಪರ ಆರೋಪ ಮಾಡಿದ್ದಾರೆ. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story





