Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ:...

ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ: ಹೈದರಾಬಾದ್ ವಿವಿ ವಿದ್ಯಾರ್ಥಿಗಳಿಗೆ ಜಾಮೀನು

ವಾರ್ತಾಭಾರತಿವಾರ್ತಾಭಾರತಿ28 March 2016 11:59 PM IST
share
ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ: ಹೈದರಾಬಾದ್ ವಿವಿ ವಿದ್ಯಾರ್ಥಿಗಳಿಗೆ ಜಾಮೀನು

ಹೈದರಾಬಾದ್,ಮಾ.28: ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯದ ಉಪಕುಲಪತಿಯವರ ಕಚೇರಿಯ ಕೊಠಡಿಗಳನ್ನು ಹಾನಿಗೊಳಿಸಿದ ಆರೋಪದಲ್ಲಿ ಕಳೆದ ವಾರ ಬಂಧಿಸಲ್ಪಟ್ಟಿದ್ದ ಹೈದರಾಬಾದ್ ವಿವಿಯ 25 ವಿದ್ಯಾರ್ಥಿಗಳು ಹಾಗೂ ಇಬ್ಬರು ಪ್ರೊಫೆಸರ್‌ಗಳಿಗೆ ಸೋಮವಾರ ಸ್ಥಳೀಯ ನ್ಯಾಯಾಲಯವು ಜಾಮೀನು ನೀಡಿದೆ.

26 ವರ್ಷ ವಯಸ್ಸಿನ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಕಳೆದ ಜನವರಿ ಆತ್ಮಹತ್ಯೆಗೈದ ಬಳಿಕ ಪ್ರಕ್ಷುಬ್ಧ ವಾತಾವರಣ ತಲೆದೋರಿರುವ ಹೈದರಾಬಾದ್ ವಿವಿಯ ಕ್ಯಾಂಪಸ್‌ನಲ್ಲಿ ಈ ವಿದ್ಯಾರ್ಥಿಗಳ ಬಿಡುಗಡೆಯು ತುಸು ನಿರಾಳತೆಯನ್ನುಂಟು ಮಾಡುವ ನಿರೀಕ್ಷೆಯಿದೆಯೆನ್ನಲಾಗಿದೆ.

ರೋಹಿತ್ ವೇಮುಲಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರೆಂದು ಆರೋಪಿಸಲಾಗಿರುವ ಉಪಕುಲಪತಿ ಅಪ್ಪಾರಾವ್ ಅವರನ್ನು ಸುಮಾರು 150 ವಿದ್ಯಾರ್ಥಿಗಳು ಸುಮಾರು ಆರು ತಾಸುಗಳ ಕಾಲ ಕೂಡಿಹಾಕಿದ್ದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಚದುರಿಸಲು ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿನಿಯರಿಗೆ ಅತ್ಯಾಚಾರದ ಬೆದರಿಕೆಯೊಡ್ಡಿದರು ಹಾಗೂ ಮುಸ್ಲಿಂ ವಿದ್ಯಾರ್ಥಿಗಳನ್ನು ಭಯೋತ್ಪಾದಕರೆಂದು ನಿಂದಿಸಿದ್ದಾಗಿ ಮಾನವಹಕ್ಕು ಕಾರ್ಯಕರ್ತರು ಹಾಗೂ ನ್ಯಾಯವಾದಿಗಳು ಆಪಾದಿಸಿದ್ದಾರೆ.

ಹೈದರಾಬಾದ್ ವಿವಿಯ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾರನ್ನು ತರಗತಿ ಹಾಗೂ ಹಾಸ್ಟೆಲ್‌ನಿಂದ ಅಮಾನತುಗೊಳಿಸುವ ಮೂಲಕ ಉಪಕುಲಪತಿ ಅಪ್ಪಾರಾವ್ ಆತನ ಆತ್ಮಹತ್ಯೆಗೆ ಪ್ರೇರೇಪಿಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಪ್ರತಿಭಟನಾಕಾರರು ಬೇಡಿಕೆಯೊಡ್ಡಿದ್ದರು. ವೇಮುಲಾ ನೇಣಿಗೆ ಶರಣಾಗುವುದಕ್ಕೆ ಮೊದಲು ಅಪ್ಪಾರಾವ್ ಅವರಿಗೆ ಬರೆದ ಪತ್ರದಲ್ಲಿ ಕ್ಯಾಂಪಸ್‌ನಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ಜಾತಿತಾರತಮ್ಯದ ಬಗ್ಗೆ ವಿಸ್ತೃತವಾದ ಪತ್ರವೊಂದನ್ನು ಬರೆದಿದ್ದರು.

ರೋಹಿತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪ್ಪಾರಾವ್ ಅವರ ವಜಾಕ್ಕೆ ಆಗ್ರಹಿಸುತ್ತಿರುವ 14 ವಿದ್ಯಾರ್ಥಿ ಸಂಘಟನೆಗಳನ್ನು ಪ್ರತಿನಿಧಿಸುವ ಜಂಟಿ ಕ್ರಿಯಾ ಸಮಿತಿಯು ಇಂದು ತರಗತಿಗಳ ಬಹಿಷ್ಕಾರಕ್ಕೆ ಕರೆ ನೀಡಿದೆ. ಕಳೆದ ವಾರದ ಗಲಭೆಯ ಬಳಿಕ ಉಪನ್ಯಾಸಕರು ಇಂದು ತರಗತಿಗಳನ್ನು ಪುನರಾರಂಭಿಸಲಿದ್ದರು. ಆದರೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಕಾರಿಡಾರ್‌ಗಳಲ್ಲಿ ಅಪ್ಪಾರಾವ್ ವಜಾಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.

...

ಶಿಕ್ಷಣ ತಜ್ಞರು, ವಿದ್ಯಾರ್ಥಿಗಳಿಂದ ಕುಲಪತಿಗೆ ಪತ್ರ

ಹೊಸದಿಲ್ಲಿ, ಮಾ.28: ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿಯುಳ್ಳ ವ್ಯಕ್ತಿಗಳು ಹಾಗೂ ಪದವಿ ವಿದ್ಯಾರ್ಥಿಗಳು ಸೇರಿದಂತೆ 200ಕ್ಕೂ ಅಧಿಕ ಭಾರತೀಯ ಶಿಕ್ಷಣತಜ್ಞರು, ಹೈದರಾಬಾದ್ ವಿಶ್ವವಿದ್ಯಾನಿಲಯದ ಕುಲಪತಿಯವರಿಗೆ ಸೋಮವಾರ ಪತ್ರ ಬರೆದಿದ್ದು, ಮಾರ್ಚ್ 22ರಂದು ಪ್ರತಿಭಟನನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿದ್ದಾರೆ.


....

ವಿವಿಯಲ್ಲಿ ಮುಂದುವರಿದ ಧರಣಿ

ಹೈದರಾಬಾದ್, ಮಾ.28: ಇಲ್ಲಿನ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ 24 ಮಂದಿ ವಿದ್ಯಾರ್ಥಿಗಳನ್ನು, ಕ್ಯಾಂಪಸ್‌ನ ಉನ್ನತ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಬಂಧಿಸಿದ ಬಳಿಕ ಮೂರು ವಾರಗಳಿಂದ ತರಗತಿಗಳು ನಡೆಯುತ್ತಿಲ್ಲ.

ಕೋಪ ಬೂದಿಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಿದ್ದು ವಿವಿ ಆಡಳಿತ ತರಗತಿಗಳನ್ನು ರದ್ದು ಮಾಡಿದೆ. ಇಂದು ತರಗತಿಗಳು ಆರಂಭವಾಗುತ್ತವೆ ಎಂದು ಘೋಷಿಸಲಾಗಿತ್ತು. ಆದರೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತರಗತಿ ಬಹಿಷ್ಕಾರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಜಟಿಲವಾಗುತ್ತಿದೆ.

ಜನವರಿಯಲ್ಲಿ ವಿವಿ ಹಾಸ್ಟೆಲ್‌ನಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಐಟಿ ಹಬ್‌ಗೆ ಸನಿಹದಲ್ಲಿರುವ ಕ್ಯಾಂಪಸ್ ಪ್ರಕ್ಷುಬ್ಧ ಪ್ರದೇಶ ವಾಯಿತು. ಕುಲಪತಿ ಅಪ್ಪಾರಾವ್ ಅವರನ್ನು ವಜಾ ಮಾಡಬೇಕು ಎನ್ನುವುದು ವಿದ್ಯಾರ್ಥಿಗಳ ಒಕ್ಕೊರಳ ಆಗ್ರಹ.

ಕಳೆದ ಆರು ವಾರಗಳಿಂದ ಅವರ ನಿವಾಸದ ಎದುರು ಸುಮಾರು 150 ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾನವ ಹಕ್ಕುಗಳ ಕಾರ್ಯಕರ್ತರ ನಿಯೋಗ ಹಾಗೂ ವಕೀಲರ ನಿಯೋಗ ಹೇಳುವಂತೆ ಮಹಿಳಾ ವಿದ್ಯಾರ್ಥಿಗಳಿಗೆ ಅತ್ಯಾಚಾರದ ಬೆದರಿಕೆ ಒಡ್ಡಲಾಗುತ್ತಿದೆ. ಮುಸ್ಲಿಮರನ್ನು ಉಗ್ರರು ಎಂದು ಪೊಲೀಸರು ಬಿಂಬಿಸುತ್ತಿದ್ದಾರೆ. ಬಂಧನಕ್ಕೆ ಒಳಗಾಗಿರುವ 25 ಮಂದಿ ವಿದ್ಯಾರ್ಥಿಗಳ ಜಾಮೀನು ಅರ್ಜಿ ಇಂದು ವಿಚಾರಣೆಗೆ ನ್ಯಾಯಾಲಯದ ಮುಂದೆ ಬಂದಿತ್ತು.

ಅಧಿಕಾರಿಗಳ ಪ್ರಕಾರ, ಪ್ರತಿಭಟನಾ ನಿರತ ವಿದ್ಯಾರ್ಥಿಗಳು, ಕ್ಯಾಂಪಸ್ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ; ಕ್ಯಾಂಪಸ್ ನಿಯಮಾವಳಿ ಮತ್ತು ಇತರ ವಿದ್ಯಾರ್ಥಿಗಳ ಹಕ್ಕನ್ನು ಕಸಿದು ತರಗತಿ ನಡೆಸಲು ಅವಕಾಶ ನೀಡುತ್ತಿಲ್ಲ.

ಕೃಷಿಕುಟುಂಬದಿಂದ ಬಂದ ಸಿ.ಜಿ.ಗಂಗಾಧರ್ (24) ಎಂಬ ವಿದ್ಯಾರ್ಥಿಯಂತೆ ಹಲವು ಮಂದಿ ವಿದ್ಯಾರ್ಥಿಗಳ ಕುಟುಂಬದವರು ಭೀಕರ ಬರದ ದವಡೆಗೆ ಸಿಲುಕಿದ್ದಾರೆ. ಆದರೆ ಇನ್ನೂ ವಿವಿಗೆ ಫೆಲೋಶಿಪ್ ನೀಡುವಲ್ಲಿ ಸರಕಾರ ವಿಳಂಬ ಮಾಡುತ್ತಿದೆ. ಇದರ ದೊಡ್ಡಪಾಲನ್ನು ಆತ ಮನೆಗೆ ಕಳುಹಿಸುತ್ತಾನೆ. ನನ್ನ ಕುಟುಂಬ ಹಣಕ್ಕಾಗಿ ಬೇಡುತ್ತಿದೆ. ಆದರೆ ವಿದ್ಯಾರ್ಥಿ ವೇತನ ಸಿಗದೇ ನನ್ನ ಕೈಯಲ್ಲಿ ಹಣ ಇಲ್ಲ. ನಾನು ಬಡಹುಡುಗ. ನನ್ನ ಪಿಎಚ್‌ಡಿ ಮುಂದುವರಿಸಬೇಕಾಗಿದೆ ಎಂದು ಗಂಗಾಧರ್ ಹೇಳಿದರು.

ಉದ್ಯೋಗದ ಹುಡುಕಾಟದಲ್ಲಿರುವ ಸೂರ್ಯಪ್ರತಾಪ್ ಸಿಂಗ್, ಈ ವಿಶ್ವವಿದ್ಯಾನಿಲಯದಿಂದ ಉದ್ಯೋಗದಾತರು ಇನ್ನು ಯಾರನ್ನೂ ಆಯ್ಕೆ ಮಾಡಿಕೊಳ್ಳಲಾರರು; ಹಲವು ಕಂಪೆನಿಗಳು ಕ್ಯಾಂಪಸ್ ಸಂದರ್ಶನಕ್ಕೆ ಬರಬೇಕಿತ್ತು. ಇನ್ನು ಬರಲಾರವು. ಇದೀಗ ನೇಮಕಾತಿ ಅವಧಿ. ಆದ್ದರಿಂದ ನಮ್ಮ ಬಗ್ಗೆ ಒಂದಷ್ಟು ಚಿಂತಿಸಿ. ಬಂಧಿತ ವಿದ್ಯಾರ್ಥಿಗಳಿಗೆ ಬೆಂಬಲ ಬೇಕಿದೆ. ನಮ್ಮ ಸುತ್ತ ಬಂದು ತರಗತಿ ಬಹಿಷ್ಕಾರಕ್ಕೆ ಏಕೆ ಒತ್ತಡ ತರಲಾಗುತ್ತಿದೆ? ಎಂದು ಪ್ರಶ್ನಿಸುತ್ತಾರೆ.

ಜಂಟಿಕ್ರಿಯಾ ಸಮಿತಿಯ ಕರೆ ಅನ್ವಯ ಸುಮಾರು 400 ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದಾರೆ. ಕುಲಪತಿಯ ಪದಚ್ಯುತಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X