Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಪುರುಷ ಮತ್ತು ಮಹಿಳೆಯ ಸಮಾನ...

ಪುತ್ತೂರು : ಪುರುಷ ಮತ್ತು ಮಹಿಳೆಯ ಸಮಾನ ಚಿಂತನೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಸಾಧ್ಯ- ರೇಖಾ ಜೆ.ಶೆಟ್ಟಿ

ಗ್ರಾ.ಪಂ ಮಟ್ಟದ ಕಾವಲು ಸಮಿತಿ ಸದಸ್ಯರ ತರಬೇತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ29 March 2016 4:53 PM IST
share
ಪುತ್ತೂರು : ಪುರುಷ ಮತ್ತು ಮಹಿಳೆಯ ಸಮಾನ ಚಿಂತನೆಯಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಸಾಧ್ಯ- ರೇಖಾ ಜೆ.ಶೆಟ್ಟಿ

 ಪುತ್ತೂರು: ಮಹಿಳೆ ಮತ್ತು ಪುರುಷರು ಸಮಾನತೆ ಮೂಡಿದಾಗ ಮಾತ್ರ ಸಮಾಜದಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯನ್ನು ಕಾಣಲು ಸಾಧ್ಯ ಎಂದು ಪುತ್ತೂರು ನಗರ ಸಭಾ ಪೌರಾಯುಕ್ತೆ ರೇಖಾ ಜೆ.ಶೆಟ್ಟಿ ಹೇಳಿದರು.

ಅವರು ಮಂಗಳವಾರ ಪುತ್ತೂರಿನ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಇದರ ಜಂಟೀ ಆಶ್ರಯದಲ್ಲಿ ನಡೆದ ಗ್ರಾಮ ಪಂಚಾಯತ್ ಮಟ್ಟದ ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟ ತಡೆ ಕಾವಲು ಸಮಿತಿ ಸದಸ್ಯರ ಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾನ ಚಿಂತನೆಯ ಕೊರತೆಯಿಂದಾಗಿ ಮಹಿಳೆಯರು ಸಾಮಾಜಿಕವಾಗಿ ಇನ್ನೂ ಮುಂದೆ ಬರಲು ಸಾಧ್ಯವಾಗಿಲ್ಲ ಎಂದ ಅವರು ಮನೆಕೆಲಸ ಹಾಗೂ ನೌಕರಿಯನ್ನು ಮಾಡುತ್ತಿರುವ ಮಹಿಳೆಯ ಶ್ರಮಕ್ಕೆ ಸರಿಯಾದ ಬಲ ಮತ್ತು ಬೆಲೆ ಸಿಗುತ್ತಿಲ್ಲ. ಇದನ್ನು ಸವಾಲಾಗಿ ಸ್ವೀಕರಿಸಿ ಮಹಿಳೆಯರು ಮುಂದೆ ಬರಬೇಕು ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಾಟ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇದನ್ನು ತಪ್ಪಿಸಲು ಕಾವಲು ಸಮಿತಿಗಳಿಗೆ ಈ ಬಗ್ಗೆ ಸರಿಯಾದ ಅರಿವು ಮತ್ತು ಕ್ರಿಯಾಶೀಲತೆ ಬೆಳೆಯಬೇಕು. ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಅರಿವನ್ನು ಪಡೆದು ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟವನ್ನು ತಡೆಯಲು ಸಾಧ್ಯ ಎಂದರು.

ಅತಿಥಿಯಾಗಿ ಭಾಗವಹಿಸಿದ್ದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಸುಂದರ ಪೂಜಾರಿ ಮಾತನಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಕಾವಲು ಸಮಿತಿಗೆ ಮಹಿಳೆಯರ ಮತ್ತು ಮಕ್ಕಳ ಮಾರಾಟ ಹಾಗೂ ಸಾಗಾಟವನ್ನು ತಡೆಯವ ನಿಟ್ಟಿನಲ್ಲಿ ಹೆಚ್ಚಿನ ಜವಾಬ್ದಾರಿಗಳಿವೆ. ಈ ಬಗ್ಗೆ ಸಾಕಷ್ಟು ಕಾನೂನುಗಳಿದ್ದರೂ ಮಾಹಿತಿಯ ಕೊರತೆಯಿಂದಾಗಿ ಸಾಕಷ್ಟು ಪ್ರಕರಣಗಳು ನಡೆಯುತ್ತಿದೆ. ಶಿಬಿರದಲ್ಲಿ ಮಾಹಿತಿ ಪಡೆದುಕೊಂಡ ಕಾವಲು ಸಮಿತಿ ಸದಸ್ಯರು ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಉಸ್ಮಾನ್ ಅವರು ಮಾತನಾಡಿ ಮಹಿಳೆಯರ ಮತ್ತು ಮಕ್ಕಳ ಮಾರಾಟ ಮತ್ತು ಸಾಗಾಟವನ್ನು ತಡೆಯುವ ನಿಟ್ಟಿನಲ್ಲಿ ಇಲಾಖೆ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ನಮಗೆ ಸರಿಯಾದ ವರದಿ ಬಾರದಿರುವ ಕಾರಣ ಎಲ್ಲಾ ಪ್ರಕರಣಗಳನ್ನು ಗುರುತಿಸಿ ಪರಿಹರಿಸುವಲ್ಲಿ ತೊಡಕಾಗುತ್ತಿದೆ. ಪಂಚಾಯತ್ ಮೂಲಕ ಆಯ್ಕೆಯಾಗಿರುವ ಸಮಿತಿಯು ಈ ಬಗ್ಗೆ ಪ್ರಕರಣ ನಡೆದಾಗ ಹೆಚ್ಚಿನ ಕಾಳಜಿ ವಹಿಸಿ ಇಲಾಖೆಗೆ ಮಾಹಿತಿ ನೀಡುವ ಕಾರ್ಯಕ್ಕೆ ಮುಂದಾಗಬೇಕು ಎಂದರು. ಪುತ್ತೂರು ತಾಲೂಕು ಪಂಚಾಯತ್ ವಿಸ್ತರಣಾಧಿಕಾರಿ ಗಣಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಪತ್ರಕರ್ತ ಸಂಶುದ್ಧೀನ್ ಸಂಪ್ಯ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯೆ ಕಸ್ತೂರಿ ಬೊಳುವಾರು ಮತ್ತು ನ್ಯಾಯವಾದಿ ಮನೋಹರ ಕೆ.ವಿ. ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ ಸದಸ್ಯೆ ಹಾಗೂ ಪುತ್ತೂರು ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಜಯಂತಿ ಆರ್. ಗೌಡ, ಅಸಹಾಯಕರ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ನಯನಾ ರೈ ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗಡೆ ಸ್ವಾಗತಿಸಿರು. ಅಂಗನವಾಡಿ ಮೇಲ್ವಿಚಾರಕಿಯರಾದ ಸರೋಜಿನಿ ವಂದಿಸಿದರು. ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X