Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭೆೆ 6 ಸದಸ್ಯರ ಸದಸ್ಯತ್ವ...

ಪುತ್ತೂರು ನಗರಸಭೆೆ 6 ಸದಸ್ಯರ ಸದಸ್ಯತ್ವ ರದ್ದು

ವಾರ್ತಾಭಾರತಿವಾರ್ತಾಭಾರತಿ29 March 2016 11:53 PM IST
share
ಪುತ್ತೂರು ನಗರಸಭೆೆ 6 ಸದಸ್ಯರ ಸದಸ್ಯತ್ವ ರದ್ದು

ಪುತ್ತೂರು, ಮಾ.29: ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಸಹಿತ 6 ಮಂದಿ ಸದಸ್ಯರ ಸದಸ್ಯತ್ವ ರದ್ದತಿಯ ಕುರಿತಂತೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹೂಡಿದ್ದ ದಾವೆಯ ತೀರ್ಪನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಿದ್ದು, ಸದಸ್ಯತ್ವ ರದ್ದುಗೊಳಿಸಿ ದ.ಕ.ಜಿಲ್ಲಾಧಿಕಾರಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

  ಹೈಕೋರ್ಟ್ ತೀರ್ಪಿನಿಂದಾಗಿ ಪುತ್ತೂರು ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮತ್ತು ಅವರನ್ನು ಬೆಂಬಲಿಸಿದ್ದ ಸದಸ್ಯರಾದ ನವೀನ್ ನಾಕ್ ಬೆದ್ರಾಳ, ದೀಕ್ಷಾ ಪೈ, ಸೀಮಾ ಗಂಗಾಧರ್, ಕಮಲಾ ಆನಂದ್ ಮತ್ತು ರೇಖಾ ಯಶೋಧರ್‌ರ ಸದಸ್ಯತ್ವ ರದ್ದುಗೊಂಡಿದೆ. ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಯ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ವಿಪ್ ಉಲ್ಲಂಘಿಸಿದ ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ ಹೊರಿಸಿ ಸದಸ್ಯ ಎಚ್. ಮುಹಮ್ಮದ್ ಅಲಿ, ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನೆಲ್ಲಿಕಟ್ಟೆ ಜ

  ಗದೀಶ್ ಶೆಟ್ಟಿ ಸಹಿತ ಅವರನ್ನು ಬೆಂಬಲಿಸಿದ್ದ 6 ಮಂದಿ ಸದಸ್ಯರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಕೋರಿ ಜಿಲ್ಲಾಧಿಕಾರಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಯ ನ್ಯಾಯಾಲಯ 2015ನೆ ಮೇ 2ರಂದು ಈ ಆರು ಮಂದಿಯ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ನೀಡಿತ್ತು. ಕರ್ನಾಟಕ ಸ್ಥಳೀಯ ಸಂಸ್ಥೆಗಳ (ಪಕ್ಷಾಂತರ ನಿಷೇಧ) ಕಾಯ್ದೆಯ ಕಲಂ -1987ರ ಕಲಂ -3(1) (ಬಿ) ಮತ್ತು 4(2) (3)ರ ಅನ್ವಯ ಈ ಆರು ಮಂದಿಯ ಸದಸ್ಯತ್ವ ರದ್ದುಗೊಳಿಸಲಾಗಿತ್ತು. ಜಿಲ್ಲಾಧಿಕಾರಿಗಳು ನೀಡಿದ್ದ ಸದಸ್ಯತ್ವ ಅನರ್ಹತೆಯ ಆದೇಶದ ವಿರುದ್ಧ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮತ್ತು ಅವರ ಬೆಂಬಲಿಗರು ಹೈಕೋರ್ಟು ಮೊರೆ ಹೋಗಿದ್ದರು.ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಾಂತರ ಆದೇಶ ನೀಡಿ, ಸದಸ್ಯತ್ವವನ್ನು ತಾತ್ಕಾಲಿಕವಾಗಿ ಉಳಿಸಿಕೊಟ್ಟಿತ್ತು. ಆದರೆ ಮತದಾನದ ಹಕ್ಕು ನಿರಾಕರಿಸಿತ್ತು. ಸುದೀರ್ಘ ವಿಚಾರಣೆಯ ಬಳಿಕ ಮಂಗಳವಾರ ತೀರ್ಪು ಪ್ರಕಟಿಸಿರುವ ಹೈಕೋರ್ಟ್ ಜಿಲ್ಲಾಧಿಕಾರಿ ನ್ಯಾಯಾಲಯ ನೀಡಿದ್ದ ತೀರ್ಪನ್ನು ಮಾನ್ಯ ಮಾಡಿದೆ. ಪುತ್ತೂರು ನಗರಸಭೆಯ ಹಾಲಿ ಅಧ್ಯಕ್ಷ - ಉಪಾಧ್ಯಕ್ಷರ ಅಧಿಕಾರಾವಧಿ ಮಾ.10ಕ್ಕೆ ಮುಕ್ತಾಯಗೊಂಡಿದ್ದು, ಹೊಸ ಮೀಸಲಾತಿ ಪಟ್ಟಿಯ ಪ್ರಕಾರ ಅದೇ ದಿನ ನೂತನ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಿತ್ತು. ಆದರೆ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮತ್ತು ಅವರ ಬೆಂಬಲಿಗರು ನಮ್ಮ ಸದಸ್ಯತ್ವ ಪ್ರಕರಣ ಇತ್ಯರ್ಥವಾಗದೆ ಚುನಾವಣೆ ನಡೆಸಬಾರದು ಎಂದು ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ ಕಾರಣ ನ್ಯಾಯಾಲಯ ಚುನಾವಣೆಗೆ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪುತ್ತೂರು ನಗರಸಭೆೆಯ ಆಡಳಿತಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಧ್ಯಕ್ಷರಾಗಿದ್ದ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಅವರ ಸದಸ್ಯತ್ವ ರದ್ದುಗೊಂಡ ಬಳಿಕ ಉಪಾಧ್ಯಕ್ಷ ಜೀವಂಧರ್ ಜೈನ್ ಅವರು ಮತ್ತೆ ಪ್ರಭಾರ ಅಧ್ಯಕ್ಷರಾಗಿ ಮುಂದುವರಿದಿದ್ದರು.

ಪುತ್ತೂರು ಪುರಸಭೆಯಲ್ಲಿ ಕಾಂಗ್ರೆಸ್ 27 ಸ್ಥಾನಗಳ ಪೈಕಿ 15ನ್ನು ಗೆದ್ದುಕೊಂಡಿತ್ತು. 2013ರ ಸೆಷ್ಟಂಬರ್‌ನಲ್ಲಿ ನಡೆದಿದ್ದ ಮೊದಲ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಾಣಿ ಶ್ರೀಧರ್ ಬಿಜೆಪಿಯ ಬೆಂಬಲ ಪಡೆದು ಅಧ್ಯಕ್ಷರಾಗಿದ್ದರು. ಆ ವೇಳೆ ವಾಣಿ ಶ್ರೀಧರ್‌ರ ಬೆಂಬಲದೊಂದಿಗೆ ಬಿಜೆಪಿಯ ಜೀವಂಧರ್ ಜೈನ್ ಉಪಾಧ್ಯಕ್ಷರಾಗಿದ್ದರು. ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ಎಚ್. ಮುಹಮ್ಮದ್ ಅಲಿ, ವಾಣಿ ಶ್ರೀಧರ್ ವಿರುದ್ಧ ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ದೂರು ನೀಡಿದ್ದರು. 2014ರ ಆ.22ರಂದು ತೀರ್ಪು ನೀಡಿದ ನ್ಯಾಯಾಲಯ ವಾಣಿ ಶ್ರೀಧರ್‌ರ ಸದಸ್ಯತ್ವವನ್ನು ರದ್ದುಗೊಳಿಸಿತ್ತು. ಇದರ ವಿರುದ್ಧ ವಾಣಿಶ್ರೀಧರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ. ವಾಣಿಶ್ರೀಧರ್ ಅಧಿಕಾರ ಕಳೆದುಕೊಂಡ ಬಳಿಕ ಎರಡನೆ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ 5 ಮಂದಿ ಸದಸ್ಯರ ಬೆಂಬಲದೊಂದಿಗೆ ಬಂಡಾಯವಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಪಕ್ಷ ಆ ವೇಳೆ ಜಾರಿಗೊಳಿಸಿದ್ದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲದಲ್ಲಿ ಅಧ್ಯಕ್ಷರಾಗಿದ್ದರು. ಉಪಾಧ್ಯಕ್ಷರಾಗಿ ಮತ್ತೆ ಬಿಜೆಪಿಯ ಜೀವಂಧರ್ ಜೈನ್ ಅವರೇ ಮುಂದುವರಿದಿದ್ದರು. ಎರಡನೆ ಬಾರಿಯೂ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಹಮ್ಮದ್ ಅಲಿ, ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಹಾಗೂ ಉಳಿದ 5 ಮಂದಿಯ ಸದಸ್ಯತ್ವವನ್ನು ರದ್ದುಪಡಿಸುವಂತೆ ಕೋರಿ ಜಿಲ್ಲಾಧಿಕಾರಿಯ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ 2015ರ ಜನವರಿಯಲ್ಲಿ ಪುತ್ತೂರು ನಗರಸಭೆಯಾಗಿ ಮೇಲ್ದರ್ಜೆಗೇರಿತ್ತು. ನೂತನ ನಗರಸಭೆಯ ಮೊದಲ ಅಧ್ಯಕ್ಷರಾಗಿ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಮುಂದುವರಿದಿದ್ದರು. 2015ರ ಮೇ 7ರಂದು ಈ ಆರು ಮಂದಿಯ ಸದಸ್ಯತ್ವ ರದ್ದಾದ ಕಾರಣ ಜಗದೀಶ್ ಶೆಟ್ಟಿ ಅಧ್ಯಕ್ಷತೆ ಕಳೆದುಕೊಂಡಿದ್ದರು. ಆ ಬಳಿಕ ಜೀವಂಧರ್ ಜೈನ್ ಪ್ರಭಾರ ಅಧ್ಯಕ್ಷರಾಗಿ ಮುಂದುವರಿದಿದ್ದರು. *ತೀರ್ಪಿಗೆ ತಲೆಬಾಗುವೆ:

ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಜಿಲ್ಲಾಧಿಕಾರಿ ನ್ಯಾಯಾಲಯದ ತೀರ್ಪಿನ ವಿರುದ್ಧ ರಿಟ್ ಸಲ್ಲಿಸಿದ್ದೆವು. ಅದನ್ನು ಹೈಕೋರ್ಟ್ ತಳ್ಳಿಹಾಕಿದೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುತ್ತೇವೆ ಎಂದು ನಗರಸಭಾ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ ಕೋರ್ಟು ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X