ಕೇಂದ್ರ ಸರಕಾರದ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ
ಶಿವಮೊಗ್ಗ, ಮಾ. 30: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕೇಂದ್ರ ಸರಕಾರದಿಂದ ನೀಡಲಾಗುವ ಅರ್ಜುನ ಪ್ರಶಸ್ತಿ, ಧ್ಯಾನಚಂದ್ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ರಾಜೀವ್‌ಗಾಂಧಿ ಖೇಲ್‌ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಖೇಲ್ ಪ್ರೋತ್ಸಾಹಧನ ಪ್ರಶಸ್ತಿಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜೀವನ ಪರ್ಯಂತ ಸಾಧನೆ ಮಾಡಿದ ಹಾಗೂ ಅತ್ಯುತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಪ್ರಸ್ತಾವನೆಯನ್ನು ಎ. 10ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ದೂರವಾಣಿ ಸಂಖ್ಯೆ 08182-223328ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





