Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಲ್ಕತಾ:ನಿರ್ಮಾಣ ಹಂತದ ಫ್ಲೈಓವರ್...

ಕೋಲ್ಕತಾ:ನಿರ್ಮಾಣ ಹಂತದ ಫ್ಲೈಓವರ್ ಕುಸಿದು ಬಿದ್ದು 18 ಜನರ ಸಾವು

ಕನಿಷ್ಠ 60 ಜನರಿಗೆ ಗಾಯ * ಹಲವರು ಅವಶೇಷಗಳಡಿಯಲ್ಲಿ * ಸಾವಿನ ಸಂಖ್ಯೆ ಹೆಚ್ಚುವ ಭೀತಿ

ವಾರ್ತಾಭಾರತಿವಾರ್ತಾಭಾರತಿ31 March 2016 2:42 PM IST
share
ಕೋಲ್ಕತಾ:ನಿರ್ಮಾಣ ಹಂತದ ಫ್ಲೈಓವರ್ ಕುಸಿದು ಬಿದ್ದು 18 ಜನರ ಸಾವು

ಕೋಲ್ಕತಾ,ಮಾ.31: ಉತ್ತರ ಕೋಲ್ಕತಾದಲ್ಲಿನ ಜನನಿಬಿಡ ಬುರ್ರಾಬಾಝಾರ್ ಸಮೀಪದ ರಬೀಂದ್ರ ಸರಾನಿ-ಕೆ.ಕೆ.ಟಾಗೋರ್ ಸ್ಟ್ರೀಟ್ ಕ್ರಾಸಿಂಗ್ ಬಳಿ ನಿರ್ಮಾಣ ಹಂತದಲ್ಲಿರುವ ಎರಡು ಕಿ.ಮೀ ಉದ್ದದ ಫ್ಲೈ ಓವರ್‌ನ ಸುಮಾರು 100 ಮೀಟರ್ ಉದ್ದದ ಭಾಗವೊಂದು ಗುರುವಾರ ಮಧ್ಯಾಹ್ನ ಕುಸಿದು ಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. 60 ಜನರು ಗಾಯಗೊಂಡಿದ್ದಾರೆ. ಇತರ ಹಲವಾರು ಜನರು ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಭೀತಿ ವ್ಯಕ್ತವಾಗಿದೆ. ತನ್ಮಧ್ಯೆ,ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಹಲವಾರು ಗಾಯಾಳುಗಳನ್ನು ಅವಶೇಷಗಳಡಿಯಿಂದ ರಕ್ಷಿಸಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ದೇವರ ಕೃತ್ಯ!

ಹೈದರಾಬಾದ್‌ನ ಐವಿಆರ್‌ಸಿಲ್ ಕಂಪನಿಯು ಫ್ಲೈಓವರ್‌ನ ನಿರ್ಮಾಣ ಕಾಮಗಾರಿಯನ್ನು ನಡೆಸುತ್ತಿದ್ದು,ಅದರ ಕಳಪೆ ಕಾಮಗಾರಿಯ ಬಗ್ಗೆ ಸರ್ವತ್ರ ಆಕ್ರೋಶ, ಟೀಕೆಗಳು ವ್ಯಕ್ತವಾಗಿವೆ. ಇದರ ನಡುವೆಯೇ ‘ಇದು ದೇವರ ಕೃತ್ಯವಲ್ಲದೇ ಬೇರೇನೂ ಅಲ್ಲ’ ಎಂದು ಕಂಪನಿಯ ಹಿರಿಯ ಅಧಿಕಾರಿ ಪಾಂಡುರಂಗ ರಾವ್ ಹೇಳಿದ್ದಾರೆ.

ಕೋಲ್ಕತಾಕ್ಕೆ ಧಾವಿಸಿದ ಸಿಎಂ

ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ತನ್ನ ಭೇಟಿಯನ್ನು ಮೊಟಕುಗೊಳಿಸಿ ನಗರಕ್ಕೆ ಧಾವಿಸಿದರಲ್ಲದೆ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಒಂದು ಬಸ್ ಸೇರಿದಂತೆ ಹಲವಾರು ಪ್ರಯಾಣಿಕ ವಾಹನಗಳೂ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡಿವೆ.

ಎನ್‌ಡಿಆರ್‌ಎಫ್,ಪೊಲೀಸ್,ಅಗ್ನಿಶಾಮಕ ದಳ ಮತ್ತು ವಿಪತ್ತು ನಿರ್ವಹಣೆ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಭಾರೀ ಗಾತ್ರದ ಕ್ರೇನ್‌ಗಳು ಮತ್ತು ಇತರ ರಕ್ಷಣಾ ವಾಹನಗಳನ್ನು ಕಾರ್ಯಾಚರಣೆಯಲ್ಲಿ ತೊಡಗಿಸಲಾಗಿದೆ.

ಫ್ಯೈ ಓವರ್‌ನ ಕೆಳಭಾಗವನ್ನು ವಾಹನಗಳ ಪಾರ್ಕಿಂಗ್‌ಗಾಗಿ ಬಳಸಿಕೊಳ್ಳಲಾಗುತ್ತಿದ್ದು, ಹಲವಾರು ಸಣ್ಣಪುಟ್ಟ ವ್ಯಾಪಾರಿಗಳು ಇಲ್ಲಿ ವ್ಯಾಪಾರವನ್ನು ನಡೆಸುತ್ತಿದ್ದಾರೆ.

ಆರೋಪ -ಪ್ರತ್ಯಾರೋಪ

ಎಡರಂಗ ಸರಕಾರವು ಅಧಿಕಾರದಲ್ಲಿದ್ದಾಗ ಈ ಫ್ಲೈಓವರ್ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು,ಈ ದುರಂತಕ್ಕೆ ಎಡರಂಗ ಸರಕಾರವೇ ಕಾರಣವೆಂದು ಹಾಲಿ ತೃಣಮೂಲ ಸರಕಾರವು ಆರೋಪಿಸಿದೆ. ಆದರೆ ಎಡರಂಗವು ದುರಂತದ ಹೊಣೆಯನ್ನು ತೃಣಮೂಲ ಸರಕಾರದ ಮೇಲೆ ಹೊರಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X