Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏ.1ರಿಂದ ಈದು ಮುಜಿಲ್ನಾಯ ದೈವಸ್ಥಾನದ...

ಏ.1ರಿಂದ ಈದು ಮುಜಿಲ್ನಾಯ ದೈವಸ್ಥಾನದ ಬ್ರಹ್ಮಕಲಶೋತ್ಸವ

ವಾರ್ತಾಭಾರತಿವಾರ್ತಾಭಾರತಿ31 March 2016 5:38 PM IST
share
ಏ.1ರಿಂದ ಈದು ಮುಜಿಲ್ನಾಯ ದೈವಸ್ಥಾನದ ಬ್ರಹ್ಮಕಲಶೋತ್ಸವ

ಕಾರ್ಕಳ : ಈದು ಮುಜಿಲ್ನಾಯ ದೈವಸ್ಥಾನದ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಎ.1ರಿಂದ ಎ.3ರವರೆಗೆ ನಡೆಯಲಿದೆ.

ಹನ್ನೆರಡನೇ ಶತಮಾನದಲ್ಲಿ ವಿಜಯನಗರ ಅರಸರ ಆಳ್ವಿಕೆಯ ಕಾಲದಲ್ಲಿ ಸ್ಥಾಪಿತ ಎಂದು ಹೇಳಲಾದ ಈ ದೈವಸ್ಥಾನ ಈದು ಗ್ರಾಮದ ಬಂಧುಗಳ ಧಾರ್ಮಿಕ ಕ್ಷೇತ್ರ. ಕಳೆದ 2015ರ ಫೆಬ್ರವರಿ ತಿಂಗಳಲ್ಲಿ ನಡೆದ ಶಿಲಾನ್ಯಾಸದ ಬಳಿಕ ಈದು ಗ್ರಾಮದ ಪ್ರತೀ ಗ್ರಾಮಸ್ಥರು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವಲ್ಲಿ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ವಿವಿಧ ಸಂಘಟನೆಗಳು, ಪುರುಷರು, ಮಹಿಳೆಯರು ಬಹಳಷ್ಟು ಸಂಖ್ಯೆಯಲ್ಲಿ ಈ ಶ್ರಮದಾನದಲ್ಲಿ ಪಾಲ್ಗೊಂಡಿದ್ದಲ್ಲದೆ ಒಟ್ಟು ಸುಮಾರು ಆರು ಸಾವಿರ ಮಂದಿ ಇಲ್ಲಿನ ಶ್ರಮದಾನ ನಡೆಸುವ ಮೂಲಕ ಊರಿನ ಜನತೆಯ ಸಂಘಟನಾತ್ಮಕ ಶಕ್ತಿಯನ್ನು ವಿಶೇಷವಾಗಿ ತೋರ್ಪಡಿಸಿದ್ದಾರೆ.

ಸಂಪೂರ್ಣ ಶಿಲಾಮಯವಾಗಿರುವ ಈ ದೈವಸ್ಥಾನ ತುಳುನಾಡಿನಲ್ಲೇ ವಿಶಿಷ್ಠತೆಯನ್ನು ಹೊಂದಿದೆ. ಹೊಯ್ಸಳ ಮಾದರಿಯ ಶಿಲ್ಪಕಲಾ ಶೈಲಿಯಲ್ಲಿ ಈ ದೈವಸ್ಥಾನ ನಿರ್ಮಾಣವಾಗಿದೆ. ದೈವಸ್ಥಾನದ ಹೊರಂಗಣದಲ್ಲಿ 20 ವಿವಿಧ ಶಿಲ್ಪಕಲಾ ಶೈಲಿಯ ಕಂಬಗಳಿವೆ. ದೈವಸ್ಥಾನದ ಒಳಭಾಗದಲ್ಲಿ ಅಪೂರ್ವವಾದ ಕೆತ್ತನೆಯ ಮರದ ವಿನ್ಯಾಸಗಳಿವೆ. ವಿಶಾಲ ಸ್ಥಳಾವಕಾಶವಿರುವ ಈ ಮುಜಿಲ್ನಾಯ ದೈವಸ್ಥಾನದ ಸುತ್ತಲೂ ಪಿಲಿಚಾಮುಂಡಿ, ಪಂಜುರ್ಲಿ, ಬೈರವ, ಕರಿಯಮಲ್ಲಯ, ಮರಕಚನ್ನಯ, ಬೊಮ್ಮರ್ದಾಯ ದೈವಗಳ ಗುಡಿಗಳಿದ್ದು, ಒಂದು ಸಾವಿರ ವರ್ಷಗಳಿಂದಲೂ ಈ ಗುಡಿಗಳಲ್ಲಿ ನೆಲೆಯಾಗಿರುವ ದೈವಗಳನ್ನು ಭಕ್ತರು ನಂಬಿಕೊಂಡು ಆರಾಧನೆ ಮಾಡುತ್ತಾ ಬಂದಿದ್ದಾರೆ.

ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿವಿಧಾನಗಳಿದ್ದು, ಧಾರ್ಮಿಕ ಸಭೆಯು ನಡೆಯಲಿದ್ದು, ಸಹಸ್ರಾರು ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ನವೀಕರಣ ಸಮಿತಿ ಅಧ್ಯಕ್ಷ ಭಾಸ್ಕರ ಎಸ್.ಕೋಟ್ಯಾನ್, ಆಡಳಿತ ಮೊಕ್ತೇಸರ ಅಶೊಕ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್, ಮಾಧ್ಯಮ ಸಮಿತಿ ಅಧ್ಯಕ್ಷ ವಸಂತ್ ಕುಮಾರ್, ಕಲಶ ಸಮಿತಿ ಅಧ್ಯಕ್ಷ ಹರೀ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X