ದ್ವಿತೀಯ ಪಿ ಯು ಪ್ರಶ್ನೆಪತ್ರಿಕೆ ಸೋರಿಕೆ:ಸಿಪಿಐ ಖಂಡನೆ
ಮಂಗಳೂರು, ಮಾ. 31: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಎರಡನೆ ಬಾರಿ ಸೋರಿಕೆಯಾಗಿರುವುದು ಖಂಡನೀಯವಾಗಿದ್ದು ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಚಿವ ಕಿಮ್ಮನೆ ರತ್ನಾಕರ್ ಇದಕ್ಕೆ ನೇರ ಹೊಣೆಗಾರರು ಎಂದು ಸಿಪಿಐ ಜಿಲ್ಲಾ ಜೊತೆ ಕಾರ್ಯದರ್ಶಿ ವಿ.ಸೀತಾರಾಮ ಬೇರಿಂಜ ತಿಳಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯಾಗಲು ಕಾರಣರಾದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕೂಡಲೆ ಅಮಾನತುಗೊಳಿಸಬೇಕು. ಕಾಲವಕಾಶ ತೆಗೆದುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೊಸ ಪ್ರಶ್ನೆ ಪತ್ರಿಕೆಯನ್ನು ತಯಾರಿಸಿ ಗೊಂದಲವಿಲ್ಲದಂತೆ ಪರೀಕ್ಷೆ ನಡೆಸಬೇಕು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





