ಯುಪಿಎಸ್ಸಿ ತರಬೇತಿಯಲ್ಲಿ ಅಲ್ಪಸಂಖ್ಯಾತರ ಕಡೆಗಣನೆ: ಆರೋಪ
ಶಿವಮೊಗ್ಗ, ಮಾ.31: ಜಿಲ್ಲೆಯಲ್ಲಿ ಜಿಲ್ಲಾಡಳಿತದಿಂದ ಸ್ಥಾಪಿಸಲು ಉದ್ದೇಶಿಸಿರುವ ಯುಪಿಎಸ್ಸಿ ತರಬೇತಿ ಕೇಂದ್ರದಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಆದ್ಯತೆ ನೀಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ಮೂಲಕ ಅಲ್ಪಸಂಖ್ಯಾತ ಸಮುದಾಯವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ, ಶಿವಮೊಗ್ಗ ಪೀಸ್ ಆರ್ಗನೈಝೇಷನ್ ಸಂಘಟನೆಯು ಗುರುವಾರ ನಗರದ ಡಿ.ಸಿ. ಕಚೇರಿಯಲ್ಲಿ ಸ್ಥಳೀಯ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಅರ್ಪಿಸಿತು. ಜಿಲ್ಲಾಧಿಕಾರಿಗಳು ಮಾ. 31 ರಂದು ನಡೆಸಿದ ಸಭೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಯುಪಿಎಸ್ಸಿ ತರಬೇತಿ ಕೇಂದ್ರದಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಅ್ಯರ್ಥಿಗಳನ್ನು ಕೇಂದ್ರೀಕರಿಸಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆ ಕೇಂದ್ರದ ಸದುಪಯೋಗದ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ ಎಂದು ಸಂಘಟನೆ ದೂರಿದೆ. ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ತರಬೇತಿ ಕೇಂದ್ರದಲ್ಲಿ ಅಲ್ಪಸಂಖ್ಯಾತ, ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಸ್ಥಾಪಿಸಬೇಕು. ಕೇಂದ್ರದ ಉಪಯೋಗವನ್ನು ಎಸ್ಸಿ, ಎಸ್ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಮ್, ಕ್ರಿಶ್ಚಿಯನ್, ಸಿಖ್, ಬೌದ್ಧಧರ್ಮಿಯರಿಗೂ ಒದಗಿಸಬೇಕೆಂದು ಸಂಘಟನೆ ಒತ್ತಾಯಿಸಿದೆ. ಮನವಿ ಅರ್ಪಿಸುವ ಸಂದಭರ್ದಲ್ಲಿ ಸೈಯದ್ ಸೈಫುಲ್ಲಾ, ಮುಹಮ್ಮದ್ ಸಮೀವುಲ್ಲಾ, ಸೈಯದ್ ರವುಫ್,ಅಬ್ದುಲ್ ಖಯ್ಯಾಂ, ನಝ್ರು ಮತ್ತಿತರರು ಉಪಸ್ಥಿತರಿದ್ದರು.





