Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ;...

ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ; ಸದನದಲ್ಲೂ ಗದ್ದಲ

ಪಿಯು ರಾಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ31 March 2016 10:29 PM IST
share
ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ; ಸದನದಲ್ಲೂ ಗದ್ದಲ

ಬೆಂಗಳೂರು, ಮಾ. 31: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡನೆ ಬಾರಿ ಸೋರಿಕೆಯಾದ ಹಿನ್ನೆಲೆಯಲ್ಲಿ ದಿಢೀರ್ ಪರೀಕ್ಷೆ ರದ್ದುಪಡಿಸಿದ ಪದವಿ ಪೂರ್ವ ಪರೀಕ್ಷಾ ಮಂಡಳಿಯ ಕ್ರಮವನ್ನು ಖಂಡಿಸಿ ರಾಜ್ಯಾದ್ಯಂತ ವಿದ್ಯಾರ್ಥಿ-ಪೋಷಕರು, ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆಯೇ ವಿಧಾನಸಭೆಯಲ್ಲಿಯೂ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯ ಪ್ರತಿಧ್ವನಿಸಿತಲ್ಲದೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ರಾಜೀನಾಮೆಗೆ ಪಟ್ಟು ಹಿಡಿದು ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ನಡೆಸಿದರು.
‘ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ರಾಜ್ಯ ಸರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದ್ದು, ಸರಕಾರದ ಬೇಜವಾಬ್ದಾರಿಗೆ ಇದು ಸಾಕ್ಷಿ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಕಾರವೇ ಅನುತ್ತೀರ್ಣವಾಗಿದೆ ಎಂಬ ಆರೋಪಗಳು ಕೇಳಿ ಬಂದವು.
 ಲಘುಲಾಠಿ ಪ್ರಹಾರ: ಗುರುವಾರ ಬೆಳಗ್ಗೆ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡನೆ ಬಾರಿ ಸೋರಿಕೆಯ ಬಗ್ಗೆ ಖಾಸಗಿ ಸುದ್ದಿವಾಹಿನಿಗಳಲ್ಲಿ ಸುದ್ದಿ ಬಿತ್ತರಗೊಳ್ಳುತ್ತಿದ್ದಂತೆ ಆತಂಕಗೊಂಡ ವಿದ್ಯಾರ್ಥಿಗಳು ಮಲ್ಲೇಶ್ವರಂ 18ನೆ ಕ್ರಾಸ್‌ನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯ ಕಚೇರಿ ಮುಂದೆ ಜಮಾಯಿಸಿದರು.
ಇಂದು ನಡೆಯಬೇಕಾಗಿದ್ದ ಪರೀಕ್ಷೆಯನ್ನು ಮತ್ತೆ ಮುಂದೂಡಿದ್ದರಿಂದ ಉದ್ರಿಕ್ತ ವಿದ್ಯಾರ್ಥಿಗಳ ಗುಂಪು, ರಾಜ್ಯ ಸರಕಾರ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಈ ವೇಳೆ ಕೆಲ ಕಿಡಿಗೇಡಿಗಳು ಮಂಡಳಿ ಕಚೇರಿಯ ಕಿಟಕಿ ಗಾಜುಗಳಿಗೆ ಕಲ್ಲುತೂರಿ ಪುಡಿಗೈದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಗಮನಿಸಿದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಕ್ಷಣಕಾಲ ಮಂಡಳಿಯ ಕಚೇರಿಯ ಮುಂಭಾಗದಲ್ಲಿ ಆತಂಕದ ಸ್ಥಿತಿ ನಿರ್ಮಾಣ ಆಗಿತ್ತು.
‘ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ದೊಂದಿಗೆ ಅಧಿಕಾರಿಗಳು ಚೆಲ್ಲಾಟ ಆಡುತ್ತಿರುವುದು ಶಿಕ್ಷಣ ಇಲಾಖೆಗೆ ಶೋಭೆಯಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಎಚ್‌ಡಿಕೆ ಪ್ರವೇಶ: ಈ ಬೆಳವಣಿಗೆಗಳ ಮಧ್ಯೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪಿಯು ಮಂಡಳಿಯ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೆ, ಪ್ರಶ್ನೆ ಪತ್ರಿಕೆ ಪದೇ-ಪದೇ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಸಚಿವ ಕಿಮ್ಮನೆ ರತ್ನಾಕರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಈ ನಡುವೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬರು ಆತಂಕಗೊಂಡು ಸ್ಥಳದಲ್ಲೇ ಅಸ್ವಸ್ಥರಾಗಿ ಕುಸಿದುಬಿದ್ದರು. ಕೂಡಲೇ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಎಸ್‌ಎಫ್‌ಐ, ಎನ್‌ಎಸ್‌ಯುಐ, ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯ ಕರ್ತರು, ವಿದ್ಯಾರ್ಥಿ-ಪೋಷಕರ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ: ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿ-ಪೋಷಕರ ಆಕ್ರೋಶ ಭುಗಿಲೆದ್ದಿದ್ದು, ವಿದ್ಯಾರ್ಥಿಗಳು ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿ, ಸಚಿವ ಕಿಮ್ಮನೆ ರತ್ನಾಕರ ಹಾಗೂ ಪಿಯು ಮಂಡಳಿ ನಿರ್ದೇಶಕಿ ಪಲ್ಲವಿ ಆಕುರಾತಿ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವರ ಸಭೆ: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ದಿಢೀರ್ ಸೋರಿಕೆ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ವಿಧಾನಸೌಧದಲ್ಲಿನ ತಮ್ಮ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.
ಸ್ಪೀಕರ್‌ಗೆ ಮಾಹಿತಿ: ಪಿಯು ಪ್ರಶ್ನೆ ಪತ್ರಿಕೆ ಎರಡನೆ ಬಾರಿ ಸೋರಿಕೆ ಹಿನ್ನೆಲೆಯಲ್ಲಿ ಈ ವಿಷಯ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ, ಪಿಯು ಮಂಡಳಿ ನಿರ್ದೇಶಕಿ ಪಲ್ಲವಿ ಆಕುರಾತಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಅಲ್ಲದೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಹಿರಿಯ ಅಧಿಕಾರಿಗಳಾದ ಕಿಶೋರ್‌ಚಂದ್ರ, ಸೋನಿಯಾ ನಾರಂಗ್ ಜತೆಗೂ ಚರ್ಚಿಸಿದರು. ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಸೂಚಿಸಿದರೆಂದು ಗೊತ್ತಾಗಿದೆ.


ಅಮಾನತುಗೊಂಡ ಅಧಿಕಾರಿ, ಸಿಬ್ಬಂದಿ ವಿವರ
ಪರೀಕ್ಷಾ ವಿಭಾಗ: ಜಂಟಿ ನಿರ್ದೇಶಕ ಕೆ.ಎನ್.ರಂಗನಾಥ, ಎಸ್‌ಯುಪಿಟಿ/ಪಿಎ ಜಯಲಕ್ಷ್ಮೀ ಎಸ್., ಡಿ ದರ್ಜೆ ಸಿಬ್ಬಂದಿ ಅಂಬಿಕಾ ಕೆ.ಬಿ., ಭಾನುಮೂರ್ತಿ ಕೆ.ಎಚ್., ಉಪ ನಿರ್ದೇಶಕ ರವೀಂದ್ರ ಆರ್.ಕಣ್ಣೂರ್, ಸಹಾಯಕ ನಿರ್ದೇಶಕರಾದ ಜಂಬಣ್ಣ ಎಸ್, ಸುರೇಶ, ಖಮರ್ ತಾಜ್, ಗೀತಾ ದೇವಿ ಸಿ.ಎಸ್.
ಸೆಕ್ಷನ್ ಅಧಿಕಾರಿಗಳಾದ ಸುಭಾಷ್‌ಚಂದ್ರ, ಕೊಟ್ಟೂರೇಶ್ವರಿ, ಮೇಲ್ವಿಚಾರಕರಾದ ಗಿರೀಶ ಪಿ.ಎಸ್., ಗಂಗಮ್ಮ ಎ.ಟಿ., ಹೇಮಲತಾ ವೈ.ಎಂ., ಪ್ರಥಮ ದರ್ಜೆ ಸಹಾಯಕರಾದ ಅನುಪಮಾ ಎಂ., ಸನತ್‌ಕುಮಾರ್ ಎಚ್.ವಿ., ಅಶೋಕ್ ಕೆ.(ಪ್ರಭಾರಿ), ಸದಾಶಿವಪ್ಪ ಡಿ.ಎನ್., ಪ್ರಸಾದ್ ಬಿ.ಆರ್.(ಪ್ರಭಾರಿ), ರವಿ ಎನ್, ಗಂಗರಾಜು ಎಚ್.ವಿ(ಪ್ರಭಾರಿ), ದ್ವಿತೀಯ ದರ್ಜೆ ಸಹಾಯಕರಾದ ರಾಮಚಂದ್ರ ಕೆ.ಆರ್., ಸಣ್ಣಸ್ವಾಮಿ ಎಂ.ಆರ್., ವಸಂತಕುಮಾರ ನಾಯಕ ಕೆ., ರಮೇಶ್ ಎನ್. ಹಾಗೂ ಗುರುರಾಜ್ ಎಸ್.
ಅಂಕಪಟ್ಟಿ ವಿಭಾಗ: ಸಹಾಯಕ ನಿರ್ದೇಶಕ ಸುಬ್ರಮಣ್ಯಂ ಆರ್., ಪ್ರಥಮ ದರ್ಜೆ ಸಹಾಯಕರಾದ ಮಹೇಶ್‌ಕುಮಾರ್ ಎ.ಎನ್., ಪ್ರಶಾಂತ್‌ರಾಜ್ ಎನ್.(ಪ್ರಭಾರಿ), ಸವಿತಾ ಎಲ್.ಎನ್, ದ್ವಿತೀಯ ದರ್ಜೆ ಸಹಾಯಕಿ(ಪ್ರಭಾರಿ) ವಿಜಯಕುಮಾರಿ ಸಿ.ಆರ್., ಮೋಹನ್‌ಕುಮಾರ್ ಜಿ.ವಿ., ಡಿ ದರ್ಜೆ ಸಿಬ್ಬಂದಿ ಸಂತೋಷ್.
ಕಂಪ್ಯೂಟರ್ ವಿಭಾಗ: ಸಿಸ್ಟಂ ಅನಾಲಿಸಿಸ್ಟ್ ವೆಂಕಟೇಶ್‌ಮೂರ್ತಿ ಎಚ್., ಪ್ರಥಮ ದರ್ಜೆ ಸಹಾಯಕಿ ರಶ್ಮೀ ಆರ್.ಕರದೇಗೌಡ, ದ್ವಿತೀಯ ದರ್ಜೆ ಸಹಾಯಕ ಬಾಲಾಜಿ ಪಿ.ವೈ., ಸಹಾಯಕ ಮೂರ್ತಿ ಕೆ.ಎಸ್.ಎಂ., ಸರಬರಾಜು ವಿಭಾಗ: ಸೆಕ್ಷನ್ ಅಧಿಕಾರಿ ಶ್ರೀನಾಥ್ ಕೆ.ಎಸ್ ಹಾಗೂ ದ್ವಿತೀಯ ದರ್ಜೆ ಸಹಾಯಕ ಮಹಾದೇವಯ್ಯ ಎಂ. ಎಂಬವರನ್ನು ಅಮಾನತು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X