ಕಾಸರಗೋಡು: ಅಕ್ರಮ ಮದ್ಯ ವಶ; ಆರೋಪಿ ಪರಾರಿ
ಕಾಸರಗೋಡು, ಎ.1: ನಿರ್ಜನ ಪ್ರದೇಶದಲ್ಲಿ ಬಚ್ಚಿಟ್ಟಿದ್ದ 192 ಬಾಟ್ಲಿ ವಿದೇಶಿ ಮದ್ಯವನ್ನು ಕಾಸರಗೋಡು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂದರ್ಭ ಆರೋಪಿ ಪರಾರಿಯಾಗಿರುವುದಾಗಿ ಅವರು ತಿಳಿಸಿದ್ದಾರೆ.
ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ನೆಲ್ಲಿಕುಂಜೆ ಗೀತಾ ಜಂಕ್ಷನ್ ಬಳಿಯ ನಿರ್ಜನ ಪ್ರದೇಶದಲ್ಲಿ ಮದ್ಯವನ್ನು ಬಚ್ಚಿಡಲಾಗಿತ್ತು. ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು .
ಇದರಂತೆ ದಾಳಿ ನಡೆಸಿದ ಪೊಲೀಸರು ಭಾರೀ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಆರೋಪಿ ಪರಾರಿಯಾದನು.
ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
Next Story