ಕೊಣಾಜೆ: ಚಿಕಿತ್ಸಾ ವೆಚ್ಚಕ್ಕೆ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಪರಿಹಾರ ನಿಧಿ

ಕೊಣಾಜೆ: ಅನಾರೋಗ್ಯದಿಂದ ಬಳಲುತ್ತಿರುವ ಇರಾ ಗ್ರಾಮದ ಕುಕ್ಕಾಜೆ ಬೈಲು ನಿವಾಸಿ ಅಬ್ಬಾಸ್ ಮುಸ್ಲಿಯಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕೆ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡ 25 ಸಾವಿರ ರೂ ಚೆಕ್ಕನ್ನು ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಝಾಕ್ ಕುಕ್ಕಾಜೆ ಅವರು ಶುಕ್ರವಾರ ವಿತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಲಕ್ ಕುಮಾರ್, ಪ್ರಕಾಶ್ ಎನ್ ಉಪಸ್ಥಿತರಿದ್ದರು.
Next Story





