ಜೂಜಾಟ: ಎಂಟು ಮಂದಿಯ ಬಂಧನ
ಶಿವಮೊಗ್ಗ,ಎ. 1: ಅಂದರ್-ಬಾಹರ್ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿರುವ ಘಟನೆ ನಗರದ ಹೊರವಲಯ ಗಾಡಿಕೊಪ್ಪದ ಬಳಿ ವರದಿಯಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಗಳಿಂದ 1,050 ನಗದು, ಆರು ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





