ಕೇಂದ್ರ ನಗರಾಭಿವೃದ್ಧಿ ಕಾರ್ಯದರ್ಶಿಯಾಗಿ ರಾಜೀವ್ ಗುಬಾ ಅಧಿಕಾರ ಸ್ವೀಕಾರ
ಹೊಸದಿಲ್ಲಿ,ಎ.1: ಗುರುವಾರ ಸೇವಾನಿವೃತ್ತರಾದ ನಗರಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮಧುಸೂದನ್‌ಪ್ರಸಾದ್ ಅವರ ಉತ್ತರಾಧಿಕಾರಿಯಾಗಿ ಜಾರ್ಖಂಡ್‌ನ ಮಾಜಿ ಮುಖ್ಯ ಕಾರ್ಯದರ್ಶಿ ರಾಜೀವ್ ಗುಬಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಅವರು 1982ರ ತಂಡದ ಜಾರ್ಖಂಡ್ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.
ಪಟ್ನಾ ವಿವಿಯಿಂದ ಭೌತಶಾಸ್ತ್ರ ಪದವೀಧರರಾಗಿರುವ ಗುಬಾ ಕೇಂದ್ರ ಮತ್ತು ರಾಜ್ಯಸರಕಾರಗಳು ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ನೀತಿ ನಿರೂಪಣೆ ಮತ್ತು ಕಾರ್ಯಕ್ರಮ ಅನುಷ್ಠಾನದಲ್ಲಿ ಹಿರಿಯ ಹುದ್ದೆಗಳನ್ನು ನಿರ್ವಹಿಸಿರುವ ಅನುಭವಿಯಾಗಿದ್ದಾರೆ.
Next Story





