ಪ್ಲಾಸ್ಟಿಕ್ ಬಾಟ್ಲಿಗಳಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಮಧ್ಯಾಂತರ ತಡೆಯಾಜ್ಞೆ
ಮುಂಬೈ,ಎ.1: ಆರೋಗ್ಯಕ್ಕೆ ಹಾನಿಕಾರಕವೆಂಬ ಕಾರಣದಿಂದ ಇಂದಿನಿಂದ ಪ್ಲಾಸ್ಟಿಕ್ ಬಾಟ್ಲಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಮಹಾರಾಷ್ಟ್ರ ಸರಕಾರವು ಹೊರಡಿಸಿದ್ದ ಆದೇಶಕ್ಕೆ ಬಾಂಬೆ ಉಚ್ಚ ನ್ಯಾಯಾಲಯವು ಜೂ.30ರವರೆಗೆ ಮಧ್ಯಾಂತರ ತಡೆಯಾಜ್ಞೆಯನ್ನು ವಿಧಿಸಿದೆ.
ಮಹಾರಾಷ್ಟ್ರ ಮದ್ಯ ತಯಾರಕರ ಸಂಘ,ಅಖಿಲ ಭಾರತ ಪ್ಲಾಸ್ಟಿಕ್ ತಯಾರಕರ ಸಂಘ, ಭಾರತೀಯ ಮದ್ಯ ಕಂಪೆನಿಗಳ ಒಕ್ಕೂಟ ಮತ್ತು ಅಖಿಲ ಭಾರತ ವೈನ್ ತಯಾರಕರ ಸಂಘ ಸರಕಾರದ ಆದೇಶವನ್ನು ಪ್ರಶ್ನಿಸಿದ್ದವು
ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಜೂ.14ಕ್ಕೆ ನಿಗದಿಗೊಳಿಸಿದೆ.
Next Story





