ಎ.4ರಂದು ಮೆಹಬೂಬ ಪ್ರಮಾಣ ವಚನ

ಶ್ರೀನಗರ,ಎ.1: ಪಿಡಿಪಿ ಅಧ್ಯಕ್ಷೆ ಮೆಹಬೂಬ ಮಫ್ತಿ ಅವರು ಎ.4ರಂದು ಜಮ್ಮುಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಅಮಿತಾಭ್ ಮಟ್ಟೂ ಅವರು ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
56ರ ಹರೆಯದ ಮೆಹಬೂಬ ಈ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಯ ಹೊಸ ಯುಗಕ್ಕೆ ನಾಂದಿ ಹಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮುಫ್ತಿ ಮುಹಮ್ಮದ್ ಸಯೀದ್ ಅವರಿಗೆ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದ ಮಟ್ಟೂ ಆಶಯ ವ್ಯಕ್ತಪಡಿಸಿದರು.
Next Story





