Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬರ ಪೀಡಿತ ಪ್ರದೇಶಗಳಿಗೆ ರೈಲಲ್ಲಿ ನೀರು

ಬರ ಪೀಡಿತ ಪ್ರದೇಶಗಳಿಗೆ ರೈಲಲ್ಲಿ ನೀರು

ವಾರ್ತಾಭಾರತಿವಾರ್ತಾಭಾರತಿ2 April 2016 11:22 PM IST
share
ಬರ ಪೀಡಿತ ಪ್ರದೇಶಗಳಿಗೆ ರೈಲಲ್ಲಿ ನೀರು

ಹೊಸದಿಲ್ಲಿ, ಎ.2: ಭಾರತೀಯ ರೈಲ್ವೆಯು ದೇಶದ ಬರಗಾಲ ಪೀಡಿತ ಪ್ರದೇಶಗಳಿಗೆ ನೀರನ್ನು ಸಾಗಿಸಲಿದೆಯೆಂದು ಅಧಿಕೃತ ಹೇಳಿಕೆಯೊಂದು ಶುಕ್ರವಾರ ತಿಳಿಸಿದೆ.

ಈ ಸಂಬಂಧ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ರೈಲ್ವೆ ಆಡಳಿತಕ್ಕೆ ರೈಲ್ವೆ ಸಚಿವ ಸುರೇಶ್ ಪ್ರಭು ನಿರ್ದೇಶನ ನೀಡಿದ್ದಾರೆಂದು ಅದು ಹೇಳಿದೆ.
ಮಹಾರಾಷ್ಟ್ರ ಸರಕಾರ ಹಾಗೂ ಮಧ್ಯ ರೈಲ್ವೆ ವಲಯಗಳ ಮನವಿಯಂತೆ ರೈಲ್ವೆ ಸಚಿವಾಲಯವು ಲಾತೂರು ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರನ್ನು ತುಂಬುವ ಹಾಗೂ ಪೂರೈಸುವ ಉದ್ದೇಶಕ್ಕಾಗಿ ತಲಾ 50 ಟ್ಯಾಂಕರ್‌ನಂತಹ ಬೋಗಿಗಳುಳ್ಳ 2 ಸರಕು ರೈಲುಗಳ ಏರ್ಪಾಡನ್ನು ಮಾಡಿದೆಯೆಂದು ಹೇಳಿಕೆ ತಿಳಿಸಿದೆ.
 ಕುಡಿಯುವ ನೀರನ್ನು ತುಂಬಿಸುವುದಕ್ಕಾಗಿ ವ್ಯಾಗನ್‌ಗಳ ಸ್ಟೀಮ್‌ಕ್ಲೀನಿಂಗ್ ನಡೆಸುವಂತೆ ರೈಲ್ವೆಯ ಕೋಟಾ ಕಾರ್ಯಾಗಾರಕ್ಕೆ ನಿರ್ದೇಶನ ನೀಡಲಾಗಿದೆ. ಎರಡು ಸರಕು ರೈಲುಗಳನ್ನು ಸೋಲಾಪುರ ವಿಭಾಗದ ಪಂಢರಾಪುರ-ಲಾತೂರು ವಲಯದಲ್ಲಿ ನಿಯೋಜಿಸಲಾಗುವುದು.
ಮೊದಲ ರೈಲಿನ 50 ವ್ಯಾಗನ್‌ಗಳ ಸ್ಟೀಮ್ ಕ್ಲೀನಿಂಗ್ ಕೋಟಾ ಕಾರ್ಯಾಗಾರದಲ್ಲಿ ನಡೆದು ಅದು ಎ.8ಕ್ಕೆ ನೀರು ಸಾಗಾಟಕ್ಕೆ ಸಿದ್ಧವಾಗಲಿದೆ. 2ನೆ ರೈಲು ಎ.15ರೊಳಗೆ ಸಜ್ಜಾಗುವ ನಿರೀಕ್ಷೆಯಿದೆ.

2016-17ನೆ ವಿತ್ತ ವರ್ಷದ ಬೇಸಗೆಯ ಋತುವಿನಲ್ಲಿ ಅವುಗಳನ್ನು ಲಾತೂರಿನಲ್ಲಿ ನಿಯೋಜಿಸಲಾಗುವುದು. ಅಗತ್ಯಕ್ಕೆ ತಕ್ಕಂತೆ ಅವುಗಳ ಸಂಚಾರದ ಸರದಿಯನ್ನು ವ್ಯವಸ್ಥೆ ಮಾಡಲಾಗುವುದು.
ಈ ವರ್ಷದ ಆರಂಭದಲ್ಲಿ, ರಾಜಸ್ಥಾನ ಸರಕಾರ ಹಾಗೂ ವಾಯವ್ಯ ರೈಲ್ವೆ ವಲಯಗಳ ಬೇಡಿಕೆಯಂತೆ ನಝರಾಬಾದ್‌ನಿಂದ ಅಜ್ಮೀರ್ ವಿಭಾಗಕ್ಕೆ ನೀರು ಸಾಗಿಸಲು ಹಲವು ಗೂಡ್ಸ್ ರೈಲುಗಳನ್ನು ನಿಯೋಜಿಸಲಾಗಿತ್ತು.
ಪ್ರತಿ ವ್ಯಾಗನ್ 55 ಸಾವಿರ ಲೀ. ಸಾಮರ್ಥ್ಯ ಹೊಂದಿದ್ದು, ಒಂದು ರೈಲು ಸುಮಾರು 27.5 ಲಕ್ಷ ಲೀ. ನೀರು ಸಾಗಿಸಬಲ್ಲುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X