Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ...

ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 10 ಕೋಟಿ ರೂ.: ಸಿಎಂ

ವಾರ್ತಾಭಾರತಿವಾರ್ತಾಭಾರತಿ2 April 2016 11:42 PM IST
share
ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 10 ಕೋಟಿ ರೂ.: ಸಿಎಂ

ಬೆಂಗಳೂರು, ಎ.2: ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿನ್ನೆಲೆಯಲ್ಲಿ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ನಿಧಿಗೆ 10 ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.

ಶನಿವಾರ ನಗರದ ಕೆಎಸ್‌ಆರ್‌ಪಿ ಪೆರೇಡ್ ಮೈದಾನದಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಏರ್ಪಡಿಸಿದ್ದ ‘ಪೊಲೀಸ್ ಧ್ವಜ ದಿನಾಚರಣೆ’ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಶೇ.13 ರಷ್ಟು ಅಧಿಕಾರಿಗಳು, ಶೇ.83 ರಷ್ಟು ಸಿಬ್ಬಂದಿ ವರ್ಗದವರು ಕೆಲಸ ನಿರ್ವಹಿಸುತ್ತಿದ್ದಾರೆ. ಜೊತೆಗೆ 50 ಸಾವಿರಕ್ಕಿಂತ ಹೆಚ್ಚು ನಿವೃತ್ತ ಪೊಲೀಸರಿದ್ದಾರೆ. ಹೀಗಾಗಿ, ಇವರ ಕ್ಷೇಮಾಭಿವೃದ್ಧಿಗಾಗಿ 10 ಕೋಟಿ ರೂ. ನೀಡಲಾಗುವುದು. ಅಲ್ಲದೆ, ನಿವೃತ್ತ ಪೊಲೀಸ್ ಕಲ್ಯಾಣ ನಿಧಿಯ ಸಹಾಯಧನ ಹಿಂದೆ 25 ಸಾವಿರ ರೂ.ಮಾತ್ರವಿತ್ತು. ಇದೀಗ 50 ಸಾವಿರಕ್ಕೆ ಏರಿಸಲಾಗಿದೆ ಎಂದ ಅವರು ಹೇಳಿದರು.

1965ರಲ್ಲಿ ಪೊಲೀಸ್ ಕಾಯ್ದೆ ಜಾರಿಗೆ ಬಂದಿದ್ದು, ಈ ದಿನವನ್ನು ‘ಪೊಲೀಸ್ ಕಲ್ಯಾಣ ದಿನ’ ಎಂದು ಕರೆಯುತ್ತೇವೆ. ಪೊಲೀಸರು ದಿನಪೂರ್ತಿ, ವರ್ಷದ 365 ದಿನಗಳು ಕೂಡ ಬಿಡುವಿಲ್ಲದ ಕೆಲಸ ಮಾಡಬೇಕಾಗುತ್ತದೆ. ಹಬ್ಬ-ಹರಿದಿನ ಸೇರಿ ಯಾವುದೇ ಸಂದರ್ಭದಲ್ಲಿ ಕುಟುಂಬದವರೊಡನೆ ಉಳಿಯಲು ಸಾಧ್ಯವಾಗುವುದಿಲ್ಲ. ಅವರ ಸೇವೆ ಬಹಳ ಕ್ಲಿಷ್ಟಕರವಾಗಿದ್ದು, ಜೀವಕ್ಕೆ ಅಪಾಯ ತರುವಂತಹದ್ದಾಗಿರುತ್ತದೆ. ಆದರೂ, ಕಾನೂನು ಸುವ್ಯವಸ್ಥೆ ಕಾಪಾಡಲು, ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಅವರು ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡ ಬೇಕಾಗುತ್ತದೆ ಎಂದು ನುಡಿದರು.

ದೇಶದಲ್ಲಿ ಹೆಣ್ಣು ಮಕ್ಕಳು ಸರಿರಾತ್ರಿಯಲ್ಲಿ ಒಬ್ಬರೇ ಹೊರಗೆ ಓಡಾಡುವಂತಾಗಬೇಕು. ಅದು ನಿಜವಾದ ಸ್ವಾತಂತ್ರ ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. ಇದನ್ನು ನೆನಪಿನಲ್ಲಿಟ್ಟುಕೊಂಡು ಎಲ್ಲೂ ಎಚ್ಚರ ತಪ್ಪದೆ ಪೊಲೀಸ್ ಇಲಾಖೆ ಕೆಲಸ ಮಾಡಬೇಕಾಗುತ್ತದೆ. ಕ್ಲಿಷ್ಟಕರ ಪರಿಸ್ಥಿತಿಯಲ್ಲೂ ಮೈಯೆಲ್ಲಾ ಕಣ್ಣಾಗಿ, ತಮ್ಮನ್ನು ತಾವು ಸಂಪೂರ್ಣವಾಗಿ ಸಮರ್ಪಣೆ ಮಾಡಿಕೊಂಡು ಕೆಲಸ ನಿರ್ವಹಿಸಬೇಕು. ನಾಡಿಗಾಗಿ, ನಾಡಿನ ಜನತೆಗಾಗಿ ನಿಷ್ಠೆಯಿಂದ ದುಡಿಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅಪರಾಧ ನಡೆಯುವ ಮೊದಲೇ ತಡೆಯುವುದು ಬಹಳ ಮುಖ್ಯವಾಗಿದೆ ಎಂದ ಅವರು, ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಇದು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದೇ ರೀತಿ, ಕಾನೂನು ಪಾಲನೆಯಿಂದ ಸಮಾಜದ ನೆಮ್ಮದಿ ಹಾಳು ಮಾಡುವ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ಬಲಿ ಹಾಕುವ ಕೆಲಸ ಆಗಬೇಕೆಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಲತಾ ಕೃಷ್ಣರಾವ್ ಸೇರಿ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಿಎಂ ಪದಕ ನಿರಾಕರಿಸಿದ ಮೃತ ಪೊಲೀಸ್ ಪತ್ನಿ

ಆಂತರಿಕ ಭದ್ರತಾ ವಿಭಾಗದಲ್ಲಿದ್ದ ಚಾಮರಾಜನಗರ ಮೂಲದ ಮಹದೇವಸ್ವಾಮಿ ಕರ್ತವ್ಯ ನಿರ್ವಹಣೆ ವೇಳೆ ಆಕಸ್ಮಿಕ ಗುಂಡು ತಗಲಿ 2015ರ ಜೂನ್‌ನಲ್ಲಿ ಮೃತಪಟ್ಟಿದ್ದರು. ಅವರಿಗೆ ಮರಣೋತ್ತರವಾಗಿ ಮುಖ್ಯಮಂತ್ರಿಯ ಪದಕ ಘೋಷಿಸಲಾಗಿತ್ತು. ಪತಿಯ ಪರವಾಗಿ ಪದಕ ಸ್ವೀಕರಿಸಲು ಅವರ ಪತ್ನಿ ಚೈತ್ರಾ ಅವರು ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಕ ನೀಡಲು ಹೋದಾಗ ನಿರಾಕರಿಸಿದರು. ವೇದಿಕೆಯಲ್ಲೇ ಮುಖ್ಯಮಂತ್ರಿ, ಗೃಹಸಚಿವರು, ಪೊಲೀಸ್ ಮಹಾನಿರ್ದೇಶಕರು ಸೂಕ್ತ ಪರಿಹಾರ ನೀಡುವ ಭರವಸೆ ನೀಡಿ ಮನವೊಲಿಸಿದ ನಂತರ ಚೈತ್ರಾ ಅವರು ಪದಕ ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X