Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಿಕ್ಷುಕನಿಗೆ ಒಲಿದ ಲಾಟರಿ - 65 ಲಕ್ಷ...

ಭಿಕ್ಷುಕನಿಗೆ ಒಲಿದ ಲಾಟರಿ - 65 ಲಕ್ಷ ಜಾಕ್‌ಪಾಟ್!

ಅಂಗವಿಕಲ ಪೊನ್ನಯ್ಯ ಇಂದು ಹೊನ್ನಿನ ಒಡೆಯ

ವಾರ್ತಾಭಾರತಿವಾರ್ತಾಭಾರತಿ3 April 2016 4:46 PM IST
share
ಭಿಕ್ಷುಕನಿಗೆ ಒಲಿದ ಲಾಟರಿ - 65 ಲಕ್ಷ ಜಾಕ್‌ಪಾಟ್!

ತಿರುವನಂತಪುರ: ಬರಡು ನೆಲ ಆಂಧ್ರದಿಂದ ಭಿಕ್ಷಾಟನೆಗಾಗಿ ಕೇರಳಕ್ಕೆ ಬಂದ ಅಂಗವಿಕಲ ಭಿಕ್ಷುಕನಿಗೆ ದೇವರ ನಾಡಿನ ಲಾಟರಿಲಕ್ಷ್ಮಿ ಒಲಿದಿದ್ದಾಳೆ. ಕೇರಳ ರಾಜ್ಯ ಲಾಟರಿಯಲ್ಲಿ 65 ಲಕ್ಷದ ಜಾಕ್‌ಪಾಟ್ ಪಡೆದ ಪೊನ್ನಯ್ಯ ಇದೀಗ ನಿಜಕ್ಕೂ ಹೊನ್ನಿನ ಒಡೆಯ.

ವೆಲ್ಲರದಾ ಉಪನಗರದಲ್ಲಿ ವಾಸಿಸುವ ಈ ವಲಸೆ ಕಾರ್ಮಿಕನಿಗೆ ರಾಜ್ಯ ಸರ್ಕಾರದ ಅಕ್ಷಯಲಕ್ಷ್ಮಿ ಲಾಟರಿಯಲ್ಲಿ 65 ಲಕ್ಷ ಬಹುಮಾನ ಬಂದಿದೆ. ಕಳೆದ ಬುಧವಾರ ನಡೆದ ಡ್ರಾದಲ್ಲಿ 90 ಸಾವಿರ ಮೌಲ್ಯದ ಸಮಾಧಾನಕರ ಬಹುಮಾನಗಳು ಕೂಡಾ ಈತನ ಪಾಲಿಗೆ ಸಿಕ್ಕಿವೆ. ಪೊಲೀಸರು ಆತನ ಕುಟುಂಬದವರಿಗೆ ವಿಷಯ ಮುಟ್ಟಿಸಿದ ಬಳಿಕ ತಂದೆ ಹಾಗೂ ಸಹೋದರ ತಿರುವನಂತಪುರಕ್ಕೆ ಬಂದು ಬಹುಮಾನ ಮೊತ್ತವನ್ನು ಪಡೆಯುವ ವಿಧಿವಿಧಾನ ಪೂರ್ಣಗೊಳಿಸಿ, ಆತನನ್ನು ಮನೆಗೆ ಕರೆದೊಯ್ಯಲು ನಿರ್ಧರಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ 22 ವರ್ಷದ ವಲಸೆ ಕಾರ್ಮಿಕನಿಗೆ ಕಳೆದ ತಿಂಗಳು ಒಂದು ಕೋಟಿ ರೂಪಾಯಿ ಬಹುಮಾನ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಹಿಂದೆ ಗಾರೆ ಕೆಲಸ ಮಾಡಿಕೊಂಡಿದ್ದ ಅನಂತಪುರ ಜಿಲ್ಲೆಯ ಪೊನ್ನಯ್ಯ, ಅಪಘಾತದಲ್ಲಿ ಕಾಲು ಕಳೆದುಕೊಂಡ ಬಳಿಕ, ಪತ್ನಿ ಮತ್ತು ಮೂವರು ಮಕ್ಕಳನ್ನು ಸಾಕುವ ಸಲುವಾಗಿ ಭಿಕ್ಷಾಟನೆಗೆ ಇಳಿದಿದ್ದ. ವೆಲ್ಲರದ ಸುತ್ತಮುತ್ತಲೂ ಭಿಕ್ಷೆ ಬೇಡಿಕೊಂಡು, ಕೇರಳ- ತಮಿಳುನಾಡು ಗಡಿಯ ಮಾರ್ತಾಂಡಂ ಎಂಬಲ್ಲಿ ಬಸ್ ನಿಲ್ದಾಣದಲ್ಲಿ ರಾತ್ರಿ ತಂಗುತ್ತಿದ್ದ ಎಂದು ಪೊಲೀಸರು ವಿವರಿಸಿದ್ದಾರೆ. ಭಿಕ್ಷೆ ಬೇಡಿದ ಸಂಪಾದನೆಯಲ್ಲಿ ಬಹುಪಾಲನ್ನು ಬ್ಯಾಂಕ್ ಖಾತೆ ಮೂಲಕ ತನ್ನ ಕುಟುಂಬಕ್ಕೆ ಕಳುಹಿಸಿಕೊಡುತ್ತಿದ್ದ ಈತ ಪ್ರತಿ ತಿಂಗಳು ಲಾಟರಿಗಾಗಿ ಒಂದಷ್ಟು ಹಣ ಮೀಸಲಿಡುತ್ತಿದ್ದ. ಈತನಿಗೆ ಲಾಟರಿ ಮಾರಾಟ ಮಾಡಿದ್ದ ಏಜೆಂಟ್, ಈತನಿಗೆ ಪ್ರಥಮ ಬಹುಮಾನ ಬಂದಿರುವ ಬಗ್ಗೆ ಮಾಹಿತಿ ನೀಡಿದರು. ಬಳಿಕ ಆತನ ಸುರಕ್ಷತೆ ದೃಷ್ಟಿಯಿಂದ ಪೊಲೀಸರ ಬಳಿ ಕರೆದೊಯ್ದಿದ್ದ. ಮುಂದಿನ ಪ್ರಕ್ರಿಯೆಗಾಗಿ ಪೊಲೀಸರು ಆತನನ್ನು ಹತ್ತಿರದ ಎಸ್‌ಬಿಐ ಶಾಖೆಗೆ ಕರೆದುಕೊಂಡು ಹೋದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X