ಸರ್ವಶಿಕ್ಷಾ ಅಭಿಯಾನದಡಿ 50 ಕೋ.ರೂ. ವಿನಿಯೋಗ
ಬಾಳ್ತಿಲ ಸರಕಾರಿ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಸಚಿವ ರೈ

ಬಂಟ್ವಾಳ, ಎ.3: ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ಮೂಲಸೌಕರ್ಯ ದೊರ ಕಿಸಿ ಒದಗಿಸುವುದಕ್ಕಾಗಿ ಕಳೆದ ಸಾಲಿ ನಲ್ಲಿ ಸರ್ವ ಶಿಕ್ಷಾ ಅಭಿಯಾನ ಯೋಜನೆಯಡಿ ಒಟ್ಟು 50 ಕೋ.ರೂ. ಮೊತ್ತದ ಅನುದಾನ ವಿನಿಯೋಗಿಸಲಾಗಿದೆ. ಆ ಮೂಲಕ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ತಾಲೂಕಿನ ಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಜೆ ನಡೆದ ವಾರ್ಷಿಕೋತ್ಸವ ಮತ್ತು ನೂತನ ರಂಗಮಂದಿರ ಉದ್ಘಾಟಿಸಿ ಮಾತನಾಡಿದ ಅವರು, ಈ ಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕೊಳವೆಬಾವಿ ಸಹಿತ ಸರಕಾರಿ ಪ್ರೌಢಶಾಲೆ ಮಂಜೂರಾತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಮುಖ್ಯ ಶಿಕ್ಷಕಿ ಜಯಶ್ರೀ ಎಸ್.ಔದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಗ್ರಾಪಂ ಅಧ್ಯಕ್ಷ ವಿಠಲ, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಪಂ ಸದಸ್ಯೆ ಲಕ್ಷ್ಮೀ ಗೋಪಾಲ ಆಚಾರ್ಯ ಮಾತ ನಾಡಿ ಶುಭ ಹಾರೈಸಿದರು.
ಮುಖ್ಯಶಿಕ್ಷಕಿ ಜಯಶ್ರೀ ಎಸ್.ಔದಿ ಸಹಿತ ಶಿಕ್ಷಕರಾದ ಸಂತೋಷ್ ಕುಮಾರ್, ಪ್ರೇಮಕುಮಾರಿ, ಕ್ಷಮಾಕುಮಾರಿ, ಮಲ್ಲಿಕಾ, ಮಮತಾ ಶೆಟ್ಟಿ, ಸುನೀತಾ, ಶಶಿಕಲಾ, ರೇಷ್ಮಾ, ಜಯಶ್ರೀ ಮತ್ತಿತ ರರನ್ನು ಸನ್ಮಾನಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಶೆಟ್ಟಿ, ಸಮೂಹ ಸಂಪನ್ಮೂಲ ಅಧಿಕಾರಿ ಉದಯಕುಮಾರ್ ಮತ್ತಿತರರು ಇದ್ದರು. ಗ್ರಾಪಂ ಸದಸ್ಯ ವಸಂತ ಸಾಲ್ಯಾನ್ ಸ್ವಾಗತಿಸಿ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಶಿವಶಂಕರ ಭಟ್ ಪ್ರಾಸ್ತಾವಿಕ ಮಾತನಾಡಿದರು. ಗ್ರಾಪಂ ಸದಸ್ಯ ಪಿ.ಎಸ್.ಮೋಹನ್ ವಂದಿಸಿದರು. ಕೃಷ್ಣಪ್ಪ ಪೂಜಾರಿ ದೋಟ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ಸರಕಾರಿ ಪ್ರೌಢಶಾಲೆ ಮಂಜೂರಾತಿಗೊಳಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.







