ಮುಲ್ಕಿ : ಶಿಮಂತೂರು, ಮೇ 4ರಿಂದ ಮೇ9 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ

ಮುಲ್ಕಿ, ಎ.4: ಶಿಮಂತೂರು ಆದಿ ಜನಾರ್ದನ ದೇವಸ್ಥಾನದಲ್ಲಿ ಮೇ 4ರಿಂದ ಮೇ9 2016ರವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಗ್ರಾಮಸ್ಥರ ಮತ್ತು ಭಕ್ತಾಧಿಗಳ ಸಭೆಯು ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಉದಯ ಬಿ. ಶೆಟ್ಟಿ ವಹಿಸಿ ಸಮಾರಂಭವು ವಿಜೃಂಭಣೆಯಿಂದ ನಡೆಯಲು ಗ್ರಾಮಸ್ಥರ ಸಹಕಾರವನ್ನು ಕೋರಿದರು.
ವೇದಿಕೆಯಲ್ಲಿ ಸಮಿತಿಯ ಉಪಾಧ್ಯಕ್ಷರುಗಳಾದ ರಾಮಚಂದ್ರ ಭಟ್ ಮತ್ತು ಶ್ರೀ ಉದಯ ಟಿ. ಶೆಟ್ಟಿ ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಶ್ರೀ ಪುರುಷೋತ್ತಮ ಭಟ್ ಪ್ರಾರ್ಥನೆ ಗೈದರು. ಸಮಿತಿಯ ಕಾರ್ಯದರ್ಶಿ ಶ್ರೀ ವಿಶ್ವನಾಥ್ ರಾವ್ ಎಲ್ಲರನ್ನೂ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Next Story





