Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಕಟಕಟೆಯಿಂದ ಹಾರಿ ಪರಾರಿಯಾಗಲು...

ಪುತ್ತೂರು: ಕಟಕಟೆಯಿಂದ ಹಾರಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿ

ವಾರ್ತಾಭಾರತಿವಾರ್ತಾಭಾರತಿ5 April 2016 5:31 PM IST
share

ಪುತ್ತೂರು: ನ್ಯಾಯಾಲಯದಲ್ಲಿ ಆರೋಪಿಯೊಬ್ಬನ ವಿಚಾರಣೆ ವೇಳೆಯಲ್ಲಿ ಕಟಕಟೆಯಿಂದ ಹಾರಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ ಘಟನೆ ಮಂಗಳವಾರ ಪುತ್ತೂರು ನ್ಯಾಯಾಲಯದಲ್ಲಿ ನಡೆಯಿತು. ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ 2008 ರಲ್ಲಿ ಗೃಹಿಣಿ ಸೌಮ್ಯ ಮತ್ತು ಆಕೆಯ ಗಂಡು ಮಗು ಜಿಷ್ಣುವನ್ನು ಕೊಲೆ ಗೈದ ಪ್ರಕರಣದ ಆರೋಪಿ ಜಯೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ. ಆರೋಪಿ ಜಯೇಶ್‌ನನ್ನು ಮಂಗಳೂರು ಕಾರಾಗೃಹದಿಂದ ಪುತ್ತೂರು ಜಿಲ್ಲಾ ಐದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ತನಿಖೆಗೆ ಕರೆ ತರಲಾಗಿತ್ತು. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಆರೋಪಿಗಳು ನಿಲ್ಲುವ ಕಟಕಟೆಯನ್ನು ಹಾರಿ ಓಡಿಹೋಗಿದ್ದ. ಆದರೆ ಆತನನ್ನು ಪುತ್ತೂರು ಮಿನಿ ವಿಧಾನ ಸೌಧದ ಬಳಿ ನ್ಯಾಯವಾದಿಯೊಬ್ಬರು ಹಿಡಿದು ಬಳಿಕ ಸಾರ್ವಜನಿಕರು ಸೇರಿ ನ್ಯಾಯಾಲಯಕ್ಕೆ ಕರೆ ಮತ್ತೆ ಕರೆದು ತಂದರು. ಈತ ತಾಯಿ ಮತ್ತು ಮಗುವಿನ ಕೊಲೆಗೈದು ಇಲ್ಲಿಂದ ಕೇರಳಕ್ಕೆ ಪರಾರಿಯಾಗಿದ್ದನು.

2014 ರಲ್ಲಿ ಕೇರಳದ ಮೂವಾಟ್ಟುಪುರಂ ಸಮೀಪ ಈತ ಆಕಸ್ಮಿಕವಾಗಿ ಕೇರಳ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದನು. ಅಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಆರೋಪಿ ಜಯೇಶ್ ಪತ್ನಿಯೊಂದಿಗೆ ಜಗಳವಾಡಿ ತೆಂಗಿನ ಮರ ಹತ್ತಿ ಕುಳಿತಿದ್ದನು. ಸ್ಥಳೀಯ ಪೊಲೀಸರು ಈತನನ್ನು ಕೆಳಗಿಳಿಸಿ ಠಾಣೆಗೆ ಕರೆ ತಂದು ವಿಚಾರಣೆ ಮಾಡಿದಾಗ ಈತ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿ ಎಂದು ತಿಳಿದು ಬಂದಿತ್ತು. ಉಪ್ಪಿನಂಗಡಿ ಪೊಲೀಸರು ಈತನನ್ನು ಅಲ್ಲಿಂದ ಬಂಧಿಸಿ ಕರೆ ತಂದಿದ್ದರು. ಕಳೆದ ಎರಡು ವರ್ಷಗಳಿಂದ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈತನನ್ನು ಮಂಗಳವಾರ ತನಿಖೆಗೆ ಕರೆ ತಂದಾಗ ಕಟಕಟೆಯಿಂದ ಹಾರಿ ಓಡಿ ಪರಾರಿಯಾಗಲು ವಿಫಲ ಯತ್ನ ನಡೆಸಿದ್ದಾನೆ. ಈತ ತನ್ನನ್ನು ಹಿಡಿದ ಸಾರ್ವಜನಿಕರಿಗೆ ಧಮ್ಕಿ ಹಾಕಿದ್ದಾನೆ. ಕಟಕಟೆಯ ತೆರೆದ ಭಾಗದಲ್ಲಿ ಪೊಲೀಸರು ನಿಂತಿರುತ್ತಾರೆ. ಈ ಕಾರಣದಿಂದ ಈತ ಕಟಕಟೆ ಹಾರಿ ತಪ್ಪಿಸಲು ಯತ್ನಿಸಿದನು. ಪುತ್ತೂರು ನ್ಯಾಯಾಲಯದಿಂದ ಬಂದ ಮಾಹಿತಿ ಮತ್ತು ಈತನನ್ನು ಜಿಲ್ಲಾ ಕಾರಾಗೃಹದಿಂದ ಪುತ್ತೂರಿಗೆ ಕರೆ ತಂದ ಪೊಲೀಸರ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಜಯೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಮಂಗಳವಾರ ಬೆಳಗ್ಗೆ ಕಾರಾಗೃಹದಿಂದ ಪುತ್ತೂರಿಗೆ ಕರೆ ತರುವಾಗಲೇ ಓಡಿ ಪರಾರಿಯಾಗುವ ಸಿದ್ಧತೆಯನ್ನು ಮಾಡಿದ್ದನು ಎನ್ನಲಾಗಿದ್ದು, ನ್ಯಾಯಾಲಯದಲ್ಲಿ ಈತನ ವಿರುದ್ಧದ ಕೊಲೆ ಪ್ರಕರಣದ ಸಾಕ್ಷಿಯ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲಿ ಎಲ್ಲರ ಗಮನ ಸಾಕ್ಷಿ ವಿಚಾರಣೆಯತ್ತ ಇರುವ ಸಂದರ್ಭವನ್ನು ಗಮನಿಸಿ ಪರಾರಿಯಾಗಲು ಯತ್ನಿಸಿದ್ದನು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X