ಸುಳ್ಯದಲ್ಲಿ ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ

ಸುಳ್ಯ: ದೀನ ದಲಿತ ಅಭಿವೃದ್ಧಿಗೆ ಹಾಗೂ ಸಮಾನತೆಯನ್ನು ಸಾಧಿಸಲು ಶ್ರಮಿಸಿದ ಮಹಾನ್ ವ್ಯಕ್ತಿ ಡಾ.ಬಾಬು ಜಗಜೀವನ ರಾಂ ಅವರ ಜನ್ಮದಿನಾರಣೆಯನ್ನು ಸಮಾಜದ ಪ್ರತಿಯೊಬ್ಬರೂ ಆಚರಿಸಬೇಕಾಗಿದೆ, ಇದು ನಮ್ಮೆಲ್ಲರ ಕರ್ತವ್ಯವೂ ಆಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಹೇಳಿದ್ದಾರೆ.
ಸುಳ್ಯ ತಾಲೂಕು ನಾಡ ಹಬ್ಬಗಳ ದಿನಾಚರಣಾ ಸಮಿತಿ ಇವರ ಆಶ್ರಯದಲ್ಲಿ ಮಂಗಳವಾರ ನಡೆದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂರವರ 109ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಅತಿಥಿಗಳಾಗಿ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮೋಹಿನಿ ನಾಗರಾಜ್, ತಹಶೀಲ್ದಾರ್ ಅನಂತ ಶಂಕರ್ ಭಾಗವಹಿಸಿದರು. ನಿವೃತ್ತ ಸಿ.ಡಿ.ಪಿ.ಒ ನಾರಾಯಣ ನೀರಬಿದಿರೆ ಉಪನ್ಯಾಸ ನೀಡಿದರು. ಪಶುಸಂಗೋಪನಾ ವೈದ್ಯಾಧಿಕಾರಿ ಡಾ.ಪ್ರಸನ್ನ ಕುಮಾರ್ ವಂದಿಸಿದರು. ತಾಲೂಕು ಪಂಚಾಯತ್ ಸಿಬ್ಬಂದಿ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
Next Story





