Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ...

ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ದುರ್ಬಳಕೆ ಬೇಡ: ಸಿಎಂ

ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ5 April 2016 11:44 PM IST
share
ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನ ದುರ್ಬಳಕೆ ಬೇಡ: ಸಿಎಂ

ಬೆಂಗಳೂರು, ಎ.5: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಶ್ರೇಯೋಭಿವೃದ್ಧಿಗೆ ರಾಜ್ಯ ಸರಕಾರ ಮೀಸಲಿರಿಸಿರುವ ಅನುದಾನ ಯಾವುದೇ ಕಾರಣಕ್ಕೂ ದುರ್ಬಳಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
 ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾಜ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ 109ನೆ ಜನ್ಮ ದಿನಾಚರಣೆ ಹಾಗೂ ಜಗಜೀವನರಾಂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
 ಸರಕಾರ ಈ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಎಲ್ಲ ಇಲಾಖೆಗಳಿಗಿಂತಲೂ ಹೆಚ್ಚು ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡಿದೆ. ಎಸ್ಸಿ-ಎಸ್ಟಿ ಜನಸಂಖ್ಯೆ ಆಧಾರದ ಮೇಲೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 19,450 ಕೋಟಿ ರೂ.ಒದಗಿಸಿ ಇತಿಹಾಸ ಸೃಷ್ಟಿಸಿದೆ. ಇದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆಗೆ 4ಸಾವಿರ ಕೋಟಿ ರೂ.ಅನುದಾನ ಮೀಸಲಿರಿಸಲಾಗಿದೆ.
 ಈ ಎಲ್ಲ ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯು ಆ ಜನಾಂಗದ ಅಭಿವೃದ್ಧಿಗೆ ಸದ್ವಿನಿಯೋಗ ಮಾಡುವ ಮೂಲಕ ಮುಂದಿನ ಹತ್ತು ವರ್ಷಗಳಲ್ಲಿ ಪರಿಶಿಷ್ಟರು ಸಾಮಾಜಿಕ, ಆರ್ಥಿಕವಾಗಿ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.
 ಜಗಜೀವನರಾಂ ಹೆಸರಿನಲ್ಲಿ ಮಾಗಡಿ ರಸ್ತೆ, ಸುಮನಹಳ್ಳಿ ಬಳಿ 5ಎಕ್ರೆ ಪ್ರದೇಶದಲ್ಲಿ 50ಕೋಟಿ ರೂ.ವೆಚ್ಚದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು. ಈ ಕಾಮಗಾರಿಯನ್ನು ಪ್ರಸ್ತುತ ವರ್ಷದಲ್ಲೇ ಆರಂಭ ಮಾಡಲಾಗುವುದು ಎಂದು ಹೇಳಿದರು.
ಎಸ್ಸಿ-ಎಸ್ಟಿ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆ ಏನೇ ಯೋಜನೆ ರೂಪಿಸಿದರೂ ತಮ್ಮ ಸರಕಾರ ಅದರ ಅನುಷ್ಠಾನಕ್ಕೆ ಸದಾ ಸಿದ್ಧವಿದೆ ಎಂದ ಸಿದ್ದರಾಮಯ್ಯ, ಬಾಬೂಜಿ ಅವರು ಈ ದೇಶ ಕಂಡ ಅತ್ಯಂತ ಶ್ರೇಷ್ಠ ಆಡಳಿತಗಾರರು ಹಾಗೂ ಜನಪ್ರಿಯ ನಾಯಕರೂ ಆಗಿದ್ದರು. ಮಾತ್ರವಲ್ಲ ಎಲ್ಲ ಜಾತಿ ಜನಾಂಗದ ಪ್ರೀತಿ ಗಳಿಸಿದ್ದರು ಎಂದು ಬಣ್ಣಿಸಿದರು.
ಕೇಂದ್ರ ಸರಕಾರದ ಎಲ್ಲ್ಲ ಪ್ರಮುಖ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದ ಜಗಜೀವನ ರಾಂ ಈ ದೇಶದ ಪ್ರಧಾನಿ ಆಗುವ ಎಲ್ಲ್ಲ ಅರ್ಹತೆಗಳನ್ನೂ ಹೊಂದಿದ್ದರು. ಆದರೆ, ಈ ಸಮಾಜದಲ್ಲಿನ ವ್ಯವಸ್ಥೆಯಿಂದ ಅವರಿಗೆ ಪ್ರಧಾನಿ ಆಗುವ ಅವಕಾಶ ಸಿಗಲಿಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಯಾರು ಸಾಮಾಜಿಕವಾಗಿ ಅಗೌರವಕ್ಕೆ ಒಳಗಾಗುತ್ತಾರೋ ಅವರಲ್ಲಿ ಸ್ವಾಭಿಮಾನದ ಕಿಚ್ಚು ಹೆಚ್ಚಿರುತ್ತದೆ. ಅಂತಹವರ ಸಾಲಿನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಜಗಜೀವನ ರಾಂ, ಸಾಮಾಜಿಕ ವ್ಯವಸ್ಥೆಯನ್ನು ಸುಧಾರಿಸಲು ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಮಾತನಾಡಿ, ಎಸ್ಸಿ-ಎಸ್ಟಿಗಳಿಗೆ ನ್ಯಾಯ ಒದಗಿಸಲು ಅಂಬೇಡ್ಕರ್, ಜಗಜೀವನ ರಾಂ ಶ್ರಮವಹಿಸಿ ದುಡಿದಿದ್ದಾರೆ. ಈ ಇಬ್ಬರೂ ನಾಯಕರ ಆಶಯಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಾಮಾಜಿಕ ನ್ಯಾಯ ದೊರಕಿಸಿಕೊಡಲು ತಮ್ಮ ಸರಕಾರ ಶ್ರಮಿಸುತ್ತಿದ್ದು, ಸಮಾಜದಲ್ಲಿನ ಅಸಮತೋಲನ ಹೋಗಲಾಡಿಸಲು ಕಾರ್ಯನಿರ್ವಸುತ್ತಿದೆ ಎಂದ ಅವರು, ಸ್ವಾತಂತ್ರ್ಯ ಪೂರ್ವದ ಎಲ್ಲ್ಲ ಹೋರಾಟಗಳಲ್ಲಿ ಅಸ್ಪಶ್ಯರನ್ನು ಒಟ್ಟುಗೂಡಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಬಾಬೂಜಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಉಲ್ಲೇಖಿಸಿದರು.
ಜಗಜೀವನ ರಾಂ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ದಲಿತ ಮುಖಂಡ ಎಂ. ಜಯಣ್ಣ, ದಲಿತ ಚಳವಳಿ ಹುಟ್ಟು ಹಾಕಿದ ಪ್ರೊ.ಬಿ.ಕೃಷ್ಣಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು. ಅಲ್ಲದೆ, ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

ಪ್ರಶಸ್ತಿ ಪುರಸ್ಕೃತ ಎಂ.ಜಯಣ್ಣ ಅವರಿಗೆ ಮೈಸೂರು ಪೇಟ ತೊಡಿಸಿ 5ಲಕ್ಷ ರೂ. ನಗದು ಒಳಗೊಂಡ ‘ಜಗಜೀವನ ರಾಂ’ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ ಪ್ರದಾನ ಮಾಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ, ಹಂಪಿ ವಿವಿ ಕುಲಪತಿ ಡಾ.ಮಲ್ಲಿಕಾ ಘಂಟಿ, ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಬಸಣ್ಣ ಚಲವಾದಿ, ಬಾಬು ಜಗಜೀವನ ರಾಂ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಕೃಷ್ಣ, ಸಾಹಿತಿ ಡಾ.ಸಿದ್ದಲಿಂಗಯ್ಯ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ, ಆಯುಕ್ತೆ ಸಾವಿತ್ರಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಈಗಾಗಲೇ ಸಚಿವ ಸಂಪುಟದ ಮುಂದೆ ಬಂದಿದೆ. ಆದರೆ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯೂ ಸಿದ್ಧವಿದ್ದು, ಎರಡೂ ವರದಿಗಳನ್ನು ಮತ್ತೊಮ್ಮೆ ಸಚಿವ ಸಂಪುಟದ ಮುಂದಿಟ್ಟು ಪರಿಶೀಲಿಸಿ ಅನಂತರ ತೀರ್ಮಾನ ಕೈಗೊಳ್ಳಲಾಗುವುದು.
-ಸಿದ್ದರಾಮಯ್ಯ ಮುಖ್ಯಮಂತ್ರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X