Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ವೈದ್ಯಕೀಯ ಕ್ಷೇತ್ರದಲ್ಲಿ ಏಕರೂಪ ಶಿಕ್ಷಣ...

‘ವೈದ್ಯಕೀಯ ಕ್ಷೇತ್ರದಲ್ಲಿ ಏಕರೂಪ ಶಿಕ್ಷಣ ಜಾರಿ’

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ5 April 2016 11:45 PM IST
share
‘ವೈದ್ಯಕೀಯ ಕ್ಷೇತ್ರದಲ್ಲಿ ಏಕರೂಪ ಶಿಕ್ಷಣ ಜಾರಿ’

ಬೆಂಗಳೂರು, ಎ.5: ವೈದ್ಯಕೀಯ ಕ್ಷೇತ್ರದಲ್ಲಿ ಸಮನಾದ ಪಠ್ಯಕ್ರಮವನ್ನು ಅಳವಡಿಸುವುದರ ಮೂಲಕ ಏಕರೂಪ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರಲಾಗುವುದು ಎಂದು ಭಾರತಿಯ ವೈದ್ಯಕೀಯ ಪರಿಷತ್‌ನ ಅಧ್ಯಕ್ಷೆ ಡಾ.ಜಯಶ್ರೀ ತಿಳಿಸಿದ್ದಾರೆ.
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವತಿಯಿಂದ ನಗರದ ನಿಮ್ಹಾನ್ಸ್ ಕನ್ವೆಂಷನ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ 18ನೆ ವಾರ್ಷಿಕ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕವನ್ನು ಪ್ರದಾನ ಮಾಡಿ ಅವರು ಮಾತನಾಡಿದರು.
ದೇಶದಾದ್ಯಂತ ವೈದಕೀಯ ಪದವಿ ಶಿಕ್ಷಣ, ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಪದ್ಧತಿಯಲ್ಲಿ ಏಕರೂಪತೆ ತರಲು ಭಾರತೀಯ ವೈದ್ಯಕೀಯ ಪರಿಷತ್ ಶ್ರಮಿಸುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಹಾಗೂ ಸಮುದಾಯದವನ್ನು ಏಕೀಕರಣಗೊಳಿಸುವುದು ಸೇರಿದಂತೆ ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
 ವೈದ್ಯರು ತಮ್ಮ ಜೀವನದಲ್ಲಿ ಸೇವಾ ಮನೋಭಾವ ಮತ್ತು ನಮ್ರತೆಯ ಗುಣಗಳನ್ನು ಹೊಂದಿಲ್ಲದಿದ್ದರೆ ಉತ್ತಮ ವೈದ್ಯರಾಗಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ವೈದ್ಯರು ಪರಿಶ್ರಮ, ದೃಢತೆ ಮತ್ತು ಸಮರ್ಪಣಾ ಮನೋಭಾವದ ಮೂಲಕ ಆರೋಗ್ಯದ ಕ್ಷೇತ್ರಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು.
ಸಮಾಜದಲ್ಲಿ ವೈದ್ಯಕೀಯ ವೃತ್ತಿಪರರ ಮೇಲಿನ ವಿಶ್ವಾಸ ದಿನೇ ದಿನೇ ಕುಗ್ಗುತ್ತಿದೆ. ಹೆಚ್ಚಿನ ಸಂಖ್ಯೆಯ ವೈದ್ಯರು ಇಂದು ಆರೋಗ್ಯಕರವಲ್ಲದ ಔಷಧಗಳನ್ನು ಶಿಾರಸು ಮಾಡುತ್ತಿದ್ದು, ಹಣದ ವ್ಯಾಮೋಹಕ್ಕೆ ಒಳಗಾಗಿ ಈ ರೀತಿ ಮಾಡುತ್ತಿದ್ದಾರೆ. ಇದು ವೈದ್ಯ ವೃತ್ತಿಯ ಘನತೆ ಮತ್ತು ಗೌರವಕ್ಕೆ ಕುತ್ತು ತಂದಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ವೈದ್ಯಕೀಯ ವೃತ್ತಿ ವಿಜ್ಞಾನ ಮತ್ತು ಕಲೆಯೂ ಹೌದು. ವೈದ್ಯಕೀಯ ವೃತ್ತಿ ಕೇವಲ ವೈಜ್ಞಾನಿಕ ಜ್ಞಾನವೊಂದಕ್ಕೆ ಸೀಮಿತಗೊಳ್ಳದೆ ಚಿಕಿತ್ಸಾ ಕಲೆ ಕೂಡ ಹೊಂದಿದೆ. ವೈದ್ಯರ ನಡತೆ, ಹಾಸಿಗೆ ಪಕ್ಕದ ನಡವಳಿಕೆ ವೈದ್ಯಕೀಯ ಚಿಕಿತ್ಸಾ ಕಲೆಯ ಒಂದು ಭಾಗವಾಗಿರಬೇಕು. ಒಬ್ಬ ಕಲಾವಿದನು ಹೇಗೆ ಕಷ್ಟಕರವಾದ ಅಂಶಗಳನ್ನು ಉಪಯೋಗಿಸಿಕೊಂಡು ಉತ್ತಮ ಲಿತಾಂಶ ಕಂಡುಕೊಳ್ಳುತ್ತಾನೋ, ಹಾಗೆಯೇ ಒಬ್ಬ ವೈದ್ಯನು ನಿರ್ದಿಷ್ಟ ರೋಗಿಗೆ ತನ್ನ ಜ್ಞಾನದ ಸಹಾಯದಿಂದ ಸೂಕ್ತ ಚಿಕಿತ್ಸೆಯನ್ನು ನೀಡುವುದರ ಮೂಲಕ ಉತ್ತಮ ಲಿತಾಂಶ ಕಂಡುಕೊಳ್ಳುತ್ತಾನೆ ಎಂದು ಡಾ.ಜಯಶ್ರೀ ತಿಳಿಸಿದರು.
  ಘಟಿಕೋತ್ಸವದಲ್ಲಿ 70 ವಿದ್ಯಾರ್ಥಿಗಳಿಗೆ 102 ಚಿನ್ನದ ಪದಕವನ್ನು ರಾಜ್ಯಪಾಲ ವಿ.ಆರ್.ವಾಲಾ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಡಾ.ಕೆ.ಎಸ್.ರವೀಂದ್ರನಾಥ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವಾರು ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.

10 ಚಿನ್ನದ ಪದಕ ಬಂದಿರುವುದಕ್ಕೆ ಅತೀವ ಸಂತೋಷವಾಗುತ್ತಿದೆ. ಪ್ರತಿದಿನ 3-4ಗಂಟೆಗಳ ಕಾಲ ಕಷ್ಟ ಪಟ್ಟು ಅಭ್ಯಾಸ ಮಾಡುತ್ತಿದ್ದೆ. ಪಠ್ಯಗಳಲ್ಲಿ ಇರುವ ಅಂಶಗಳ ಜೊತೆಗೆ ಆಸ್ಪತ್ರೆಯಲ್ಲಿ ಬರುವ ರೋಗಿಗಳೊಂದಿಗೆ ಹೆಚ್ಚಾಗಿ ಬೆರೆತಿದ್ದರಿಂದ ಅವರೊಂದಿಗೆ ರೋಗದ ಕುರಿತು ಸಂಪೂರ್ಣ ಮಾಹಿತಿಯ ಕುರಿತು ಟಿಪ್ಪಣಿ ಮಾಡಿಕೊಂಡು ಅಭ್ಯಾಸ ಮಾಡುತ್ತಿದ್ದ್ಟೆ. ಇವೆಲ್ಲವುಗಳ ಪ್ರತಿಫಲವಾಗಿ ಪರೀಕ್ಷೆಯಲ್ಲಿ ಉತ್ತಮವಾಗಿ ಬರೆಯಲು ಸಾಧ್ಯವಾಯಿತು. ಮುಂದೆ ಕ್ಯಾನ್ಸರ್ ಸ್ಪೆಷಲಿಸ್ಟ್ ಆಗಿ ಬಡವರ ಸೇವೆ ಮಾಡುವುದೇ ನನ್ನ ಉದ್ದೇಶವಾಗಿದೆ.
-ಡಾ.ನಿಶಾ ಬಿ.ಜೈನ್, 10 ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿನಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X