ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ನಿರಾಕರಣೆಗೆ ಆಕ್ರೋಶ
ಬೆಂಗಳೂರು, ಎ.5: ದಲಿತರನ್ನು ದೇವಸ್ಥಾನಗಳಿಗೆ ಪ್ರವೇಶ ಮಾಡಲು ನಿರಾಕರಿಸುವ ಸಂಗತಿಗಳು ಪದೇ ಪದೇ ವರದಿಯಾಗುತ್ತಿವೆ. ಇಂತಹ ವಿಚಾರಗಳು ಕಂಡು ಬಂದಾಗ ಕಾಂಗ್ರೆಸ್‌ನವರು ಪ್ರಬಲವಾಗಿ ವಿರೋಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಮಂಗಳವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್‌ರಾಮ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬಾಬು ಜಗಜೀವನ್‌ರಾಮ್ ಉಪಪ್ರಧಾನಿ ಯಾಗಿದ್ದಾಗ ಬನಾರಸ್‌ನಲ್ಲಿ ಒಂದು ದೇವಸ್ಥಾನ ಕಾಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಬಳಿಕ ಆ ದೇವಸ್ಥಾನವನ್ನು ಸ್ವಚ್ಛಗೊಳಿಸಲಾಗಿತ್ತು. ಇತ್ತೀಚೆಗೆ ಹಾಸನದಲ್ಲಿ ದಲಿತರನ್ನು ದೇವಸ್ಥಾನ ದೊಳಗೆ ಪ್ರವೇಶಿಸಲು ಅವಕಾಶ ನೀಡಿಲ್ಲ. ಬಡತನ ಹಾಗೂ ಜಾತಿ ವ್ಯವಸ್ಥೆ ದೇಶದ ದೊಡ್ಡ ಸಮಸ್ಯೆಯಾಗಿದೆ ಎಂದು ಅವರು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಹನುಮಂತಪ್ಪ, ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್‌ನಾಯ್ಕೆ, ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಉಪಸ್ಥಿತರಿದ್ದರು.





