ಪಿಯುಸಿ ಪ್ರಶ್ನೆ ಪತ್ರಿಕೆ ಹಗರಣ ; ಸಿಐಡಿಯಿಂದ ಇನ್ನಿಬ್ಬರು ಅರೆಸ್ಟ್

ಬೆಂಗಳೂರು, ಎ.6: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಸಿಐಡಿ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಇಂದು ಬಂಧಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಪೂರ್ಣಪ್ರಜ್ಞ ಪಿಯು ಕಾಲೇಜ್ ನ ದೈಹಿಕ ಶಿಕ್ಷಕ ಹಾಗೂ ಮಲ್ಲೇಶ್ವರಂ ನಿವಾಸಿ ಅನಿಲ್ ಹಾಗೂ ಬೆಂಗಳೂರಿನ ಗುಟ್ಟಹಳ್ಳಯಲ್ಲಿರುವ ಸರಕಾರಿ ಶಾಲೆಯ ದೈಹಿಕ ಶಿಕ್ಷಕ ಸತೀಶ್ ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ನಾಳೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.
ಪ್ರಮುಖ ಆರೋಪಿ ಶಿವಕುಮಾರ್ ಅಲಿಯಾಸ್ ಶಿವಕುಮಾರಸ್ವಾಮಿ ಮನೆಯ ಮೇಲೆ ಸಿಐಡಿ ಪೊಲೀಸರು ದಾಳಿಸಿ ನಡೆಸಿದ್ದಾರೆ. ಆದರೆ ಆತ ಹೊರ ರಾಜ್ಯಕ್ಕೆ ಪರಾರಿಯಾಗಿರುವ ಬಗ್ಗೆ ಪೊಲೀಸರು ಗುಮಾನಿ ವ್ಯಕ್ತಪಡಿಸಿದ್ದಾರೆ.
Next Story





