Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಡಿಯುವ ನೀರು ಪೂರೆಕೆಯಲ್ಲಿ ಲೋಪವಾದರೆ...

ಕುಡಿಯುವ ನೀರು ಪೂರೆಕೆಯಲ್ಲಿ ಲೋಪವಾದರೆ ಕಠಿಣ ಕ್ರಮ: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ6 April 2016 10:02 PM IST
share
ಕುಡಿಯುವ ನೀರು ಪೂರೆಕೆಯಲ್ಲಿ ಲೋಪವಾದರೆ ಕಠಿಣ ಕ್ರಮ: ಸಚಿವ ದೇಶಪಾಂಡೆ

ಕಾರವಾರ, ಎ. 6: ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸರಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು, ಕುಡಿಯುವ ನೀರು ಪೂರೈಕೆಯಲ್ಲಿ ಕರ್ತವ್ಯ ಲೋಪ ಎಸಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಎಚ್ಚರಿಕೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಕುಡಿಯುವ ನೀರಿನ ಕಾಮಗಾರಿಗಳಿಗೆ ಮಾರ್ಚ್ ಕೊನೆಯವರೆಗೆ ಜಿಲ್ಲೆಗೆ 11.40ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 7.27ಕೋಟಿ ರೂ. ವೆಚ್ಚ ಮಾಡಲಾಗಿದೆ. ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳ್ಳದಿರುವ ಅಥವಾ ಅನಿವಾರ್ಯವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು 4.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ಕುಡಿಯುವ ನೀರಿನ ಕಾಮಗಾರಿಗಳಿಗೆ 1.50ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರತಿ ತಹಶೀಲ್ದಾರ್ ಬಳಿ ಕನಿಷ್ಠ 20 ಲಕ್ಷ ರೂ., ಪ್ರತಿ ನಗರಸ್ಥಳೀಯ ಸಂಸ್ಥೆಗಳಲ್ಲಿ 30ಲಕ್ಷ ರೂ. ಲಭ್ಯವಿದ್ದು, ಅನುದಾನಕ್ಕೆ ಯಾವುದೇ ಕೊರತೆಯಿಲ್ಲ. ಕುಡಿಯುವ ನೀರಿನ ಕಾಮಗಾರಿಗಳಿಗೆ ಪ್ರಥಮ ಆದ್ಯತೆ ಒದಗಿಸಬೇಕು ಎಂದು ಅವರು ಹೇಳಿದರು.

ಮೋಟಾರ್, ಪಂಪ್‌ಗಳನ್ನು ತಕ್ಷಣಕ್ಕೆ ಪೂರೈಸಲು ಅನುಕೂಲವಾಗುವಂತೆ ಪ್ರತಿ ತಾಲೂಕಿನಲ್ಲಿ ಮೋಟಾರ್ ಬ್ಯಾಂಕ್‌ಗಳನ್ನು ಸ್ಥಾಪಿಸಲು ಈಗಾಗಲೇ ಸೂಚಿಸಲಾಗಿದ್ದು, ಇದರಂತೆ ಕೆಲವು ತಾಲೂಕುಗಳಲ್ಲಿ ಆರಂಭವಾಗಿದೆ. ಎಲ್ಲಾ ತಾಲೂಕುಗಳಲ್ಲಿ ಆರಂಭಿಸಬೇಕು. ಹೊನ್ನಾವಾರ-ಕುಮಟಾದಲ್ಲಿ ಕ ುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಇಲ್ಲಿರುವ ನೀರು ಶುದ್ಧೀಕರಣ ಘಟಕದ ರಿಪೇರಿಗೆ 1.07ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.

ಹೆಲ್ಪ್‌ಲೈನ್ ಆರಂಭ: ಕುಡಿಯುವ ನೀರಿನ ಕುರಿತು ಸಾರ್ವಜನಿಕರಿಂದ ಅಹವಾ ಲುಗಳನ್ನು ಸ್ವೀಕರಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರಂಭಿಸಲಾಗಿರುವ ಹೆಲ್ಪ್ ಲೈನ್ ಕೇಂದ್ರವನ್ನು ಸಚಿವರು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ದಿನದ 24ಗಂಟೆ ಕಾಲ ಈ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಕುಡಿಯುವ ನೀರಿನ ಕುರಿತು ದೂರವಾಣಿ ಸಂಖ್ಯೆ 1077 ಅಥವಾ 08382-229857 ಕರೆ ಮಾಡಬಹುದಾಗಿದೆ. ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸುವ ‘ಜಲದೂತ’ ವಾಹನಗಳಿಗೆ ಸಚಿವರು ಈ ಸಂದರ್ಭದಲ್ಲಿ ಹಸಿರು ನಿಶಾನೆ ತೋರಿಸಿದರು.

ಅಧಿಕಾರಿಗಳು ಕೇಂದ್ರಸಾ್ಥನದಲಿ್ಲರಬೇಕು:

ಗ್ರಾಮೀಣ ಮಟ್ಟದಿಂದ ಹಿಡಿದು ಜಿಲ್ಲಾಮಟ್ಟದವರೆಗಿನ ಅಧಿಕಾರಿಗಳು ಜೂನ್ ಒಂದರ ತನಕ ಕೇಂದ್ರಸ್ಥಾನವನ್ನು ಬಿಡಬಾರದು. ಅನಿವಾರ್ಯ ಸಂದರ್ಭದಲ್ಲಿ ಅನುಮತಿ ಪಡೆದು ಬಿಡಬಹುದು. ಕುಡಿಯುವ ನೀರಿನ ಕುರಿತು ಅಹವಾಲು ಬಂದ ತಕ್ಷಣ ಅದಕ್ಕೆ ಸ್ಪಂದಿಸಬೇಕು. ಕುಡಿಯುವ ನೀರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X