Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಯಲ್ಲಿ ಕೆಗಾರಿಕೆಗಳಅಭಿವೃದ್ಧಿ ಗೆ...

ಜಿಲ್ಲೆಯಲ್ಲಿ ಕೆಗಾರಿಕೆಗಳಅಭಿವೃದ್ಧಿ ಗೆ ನೀಲ ನಕ್ಷೆ ತಯಾರಿಸಿ: ಸಚಿವ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ6 April 2016 10:06 PM IST
share
ಜಿಲ್ಲೆಯಲ್ಲಿ ಕೆಗಾರಿಕೆಗಳಅಭಿವೃದ್ಧಿ ಗೆ ನೀಲ ನಕ್ಷೆ ತಯಾರಿಸಿ: ಸಚಿವ ಜಾರಕಿಹೊಳಿ

 ಚಿಕ್ಕಮಗಳೂರು, ಎ.6: ಜಿಲ್ಲೆಯಲ್ಲಿ ಕೈಗಾರಿಕೆಗಳ ಬೆಳವ ಣಿಗೆಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕೆಂದು ಸಣ್ಣ ಕೈಗಾರಿಕಾ ಸಚಿವ ಸತೀಶ್ ಜಾರಕಿ ಹೊಳಿ ತಿಳಿಸಿದ್ದಾರೆ.

ಅವರು ಬುಧವಾರ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಇಲಾಖಾಧಿ ಕಾರಿಗಳು, ಜನಪ್ರತಿನಿಧಿಗಳು ಹಾಗೂ ವಾಣಿಜ್ಯೋದ್ಯ ಮಿಗ ಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಜ್ಯ ಸರಕಾರ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮತ್ತು ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಸಹ ಕೈಗಾರಿಕೆಗಳ ಸ್ಥಾಪನೆಗೆ ಮತ್ತು ಬೆಳವಣಿಗೆಗೆ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಅಧಿಕಾರಿಗಳು ಒದಗಿಸಿಕೊಡಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸರಕಾರಿ ಹಾಗೂ ಸರಕಾರೇತರ ಭೂಮಿಯನ್ನು ಗುರುತಿಸಿ ನೀಲ ನಕ್ಷೆ ಸಿದ್ಧಪಡಿಸಬೇಕು. ನಗರದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಿಂದ ಮುಖ್ಯ ರಸ್ತೆಗೆ ಸಾಗಲು ಅಗತ್ಯವಾದ ರಸ್ತೆ ನಿರ್ಮಿಸುವುದರ ಜೊತೆಗೆ ಈಗಿರುವ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಸಣ್ಣ ಕೈಗಾರಿಕೆ ಸ್ಥಾಪಿಸುವ ಗ್ರಾಮೀಣ ಜನರಿಗೆ ನೀಡುವ ಸಾಲ ಭದ್ರತೆ ಶೇ. 200ರಷ್ಟು ಒದಗಿಸುವುದನ್ನು ಆದಷ್ಟು ಸರಳೀಕರಣಗೊಳಿಸಬೇಕು. ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನೆ ನೀಡುವ ನಿಟ್ಟಿನಲ್ಲಿ ಯುವಜನತೆಗೆ ಕೌಶಲ್ಯಾಭಿವೃದ್ಧಿಯಂತಹ ಕಾರ್ಯಕ್ರಮ ಹಾಗೂ ಕಾರ್ಯಾಗಾರ ನಡೆಸಬೇಕು. ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಚಿಕ್ಕಮಗಳೂರು ಜಿಲ್ಲೆ ಯಲ್ಲಿ ಪ್ರಸಕ್ತ ಸಾಲಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ. ಇದಕ್ಕಾಗಿ 3 ತಿಂಗಳ ಅವಧಿಯನ್ನು ವಿಸ್ತರಿಸ ಲಿದ್ದು, ಆ ಅವಧಿಯೊಳಗೆ ಪ್ರಗತಿ ಸಾಧಿಸುವಂತೆ ಸೂಚಿಸಿದರು.

ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವುದರಿಂದಾಗಿ ಕೈಗಾರಿಕೆಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಆದರೂ ಸಹ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಬೇಡಿಕೆ ಇದ್ದು, ಇದರ ಬಗ್ಗೆ ಸಮೀಕ್ಷೆ ನಡೆಸಬೇಕು ಕೈಗಾರಿಕಾ ಸ್ಥಾಪನೆಗೆ ಪೂರಕವಾಗುವಂತೆ ನಗರದಲ್ಲಿ ವಿಮಾನ ನಿಲ್ದಾಣವನ್ನು ಸ್ಥಾಪಿಸಬೇಕು ಎಂದು ಸಲಹೆ ಮಾಡಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ಜಿಲ್ಲೆಯಲ್ಲಿ ಕೈಗಾರಿಕೆಗಳು ಇಲ್ಲದ ಕಾರಣ ಕೆಲಸಕ್ಕಾಗಿ ಜಿಲ್ಲೆಯಿಂದ ಕಾರ್ಮಿಕರು ನಗರ ಪ್ರದೇಶಗಳಿಗೆ ವಲಸೆ ಹೋಗು ತ್ತಿದ್ದಾರೆ. ಇದನ್ನು ತಪ್ಪಿಸಲು ಕಡೂರು ತಾಲೂಕಿನ ದೇವನೂರಿನಲ್ಲಿ ಜವಳಿ ಪಾರ್ಕ್ ನಿರ್ಮಿಸಬೇಕು. ದೇವನೂರಿನಲ್ಲಿ ರೈಲ್ವೆ ನಿಲ್ದಾಣ ಮತ್ತು ರಾಷ್ಟ್ರೀಯ ಹೆದ್ದಾರಿ ಇರುವುದರಿಂದ ಸಾರಿಗೆ ವ್ಯವಸ್ಥೆಗೆ ಸಾಕಷ್ಟು ಅನುಕೂಲವಿದೆ. ಜಿಲ್ಲೆಯಲ್ಲಿ ಕಾಫಿ ಟೆಕ್ನಾಲಜಿ ಪಾರ್ಕ್ ನಿರ್ಮಿಸಬೇಕು. ನಗರ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶವನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ತರೀಕೆರೆ ಶಾಸಕ ಶ್ರೀನಿವಾಸ್ ಮಾತನಾಡಿ, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಯಲು ಸೀಮೆ ಇದ್ದು, ಸದಾ ಆ ಪ್ರದೇಶ ಬರಗಾಲಕ್ಕೆ ತುತ್ತಾಗುವ ಹಿನ್ನೆಲೆಯಲ್ಲಿ ಅಲ್ಲಿನ ರೈತರು ಮತ್ತು ಕೃಷಿಕರು ಸಂಕಷ್ಟದಲ್ಲಿದ್ದಾರೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ತರೀಕೆರೆ ತಾಲೂಕಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಉದ್ಯೋಗ ಸೃಷ್ಟಿ ಮಾಡಬೇಕು. ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆ ಬಿಟ್ಟು ಬೇರೆ ಉದ್ಯಮ ಮಾಡಲು ಅವಕಾಶ ನೀಡಬಾರದು. ಈಗಾಗಲೇ ಬೇರೆ ಉದ್ಯಮ ಮಾಡುತ್ತಿರುವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಬಾಲ್ಯಾ ನಾಕ್, ಉಪನಿರ್ದೇಶಕ ರಿಯಾಝ್ ಅಹ್ಮದ್, ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಮುಹಮ್ಮದ್, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X