Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ...

ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಪತ್ತೆಗೆ ವಿಮಾನ ನಿಲ್ದಾಣಗಳಿಗೆ ಲುಕ್‌ಔಟ್ ನೋಟಿಸ್ ಜಾರಿ

ವಾರ್ತಾಭಾರತಿವಾರ್ತಾಭಾರತಿ6 April 2016 10:49 PM IST
share
ನಮೋ ಬ್ರಿಗೇಡ್ ಸಂಸ್ಥಾಪಕ ನರೇಶ್ ಶೆಣೈ ಪತ್ತೆಗೆ ವಿಮಾನ ನಿಲ್ದಾಣಗಳಿಗೆ ಲುಕ್‌ಔಟ್ ನೋಟಿಸ್ ಜಾರಿ

ಮಂಗಳೂರು, ಎ. 6: ಬಾಳಿಗಾ ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿರುವ ನಮೋ ಬ್ರಿಗೇಟ್‌ನ ಸಂಸ್ಥಾಪಕ ನರೇಶ್ ಶೆಣೈ ಅವರ ಪತ್ತೆಗಾಗಿ ಪೊಲೀಸರು ದೇಶದ ವಿಮಾನ ನಿಲ್ದಾಣಗಳಿಗೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಬಾಳಿಗಾ ಹತ್ಯೆಯಲ್ಲಿ ಪ್ರಮುಖ ಕೈವಾಡ ಇದೆ ಎನ್ನಲಾಗಿರುವ ನರೇಶ್ ಶೆಣೈಗಾಗಿ ಪೊಲೀಸರ ಶೋಧ ಕಾರ್ಯ ಮುಂದುವರಿದಿರುವಂತೆ ತಲೆಮರೆಸಿಕೊಂಡಿದ್ದಾರೆ. ಕೆಲವು ಮೂಲಗಳ ಪ್ರಕಾರ ನರೇಶ್ ಶೆಣೈ ವಿದೇಶಕ್ಕೆ ಹೋಗಲು ಸಿದ್ಧತೆ ನಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಆದರೂ ಈ ಬಗ್ಗೆ ಎಚ್ಚೆತ್ತುಕೊಂಡಿರುವ ಪೊಲೀಸರು, ವಿದೇಶಕ್ಕೆ ಪಲಾಯನಗೈಯ್ಯದಂತೆ ಎಲ್ಲಾ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲುಕ್‌ಔಟ್ ನೋಟಿಸ್ ನೀಡಿದ್ದಾರೆ.
 ವಿನಾಯಕ ಪಾಂಡುರಂಗ ಬಾಳಿಗಾ ಅವರು ಮಾರ್ಚ್ 21ರಂದು ಹತ್ಯೆಗೀಡಾಗಿದ್ದರು. ಹತ್ಯೆಯಲ್ಲಿ ನರೇಶ್ ಶೆಣೈಯ ಕೈವಾಡ ಇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಅದರಂತೆ ಪೊಲೀಸ್ ತನಿಖಾ ತಂಡವು ನರೇಶ್ ಶೆಣೈಗೆ ನೋಟಿಸ್ ನೀಡಿ, ವಿಚಾರಣೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ನರೇಶ್ ಶೆಣೈ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗಿರಲಿಲ್ಲ. ಮಾ.31ರಂದು ನಗರದ ವಿ.ಟಿ. ರಸ್ತೆಯಲ್ಲಿರುವ ಶೆಣೈ ಮನೆ ಮೇಲೆ ದಾಳಿ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದರು. ಆದರೆ ಅವರು ಪತ್ತೆಯಾಗಿರಲಿಲ್ಲ. ಶೆಣೈ ಗೋವಾ ಅಥವಾ ಅಂಡಮಾನ್‌ಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪೊಲೀಸ್ ಅಧಿಕಾರಿಗಳ ಎರಡು ಪ್ರತ್ಯೇಕ ತಂಡಗಳು ಗೋವಾ ಮತ್ತು ಅಂಡಮಾನ್‌ಗೆ ತೆರಳಿತ್ತು. ಇದೀಗ ಅವರ ಶೋಧ ಕಾರ್ಯವನ್ನು ಮುಂದುವರಿಸಿರುವ ಪೊಲೀಸರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬಾಳಿಗಾ ಹತ್ಯೆಯಾದ ವಾರದೊಳಗೆ ಪೊಲೀಸರು ಇಬ್ಬರು ಆರೋಪಿಗಳಾದ ವಿನೀತ್ ಪೂಜಾರಿ ಮತ್ತು ವಿಶಿತ್ ದೇವಾಡಿಗ ಎಂಬಿಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದರು. ಬಾಳಿಗಾರನ್ನು ಹತ್ಯೆ ಮಾಡಿದ ಆರೋಪಿಗಳು ನರೇಶ್ ಶೆಣೈ ಆಪ್ತರಿಗೆ ಸೇರಿದ ಕ್ವಾಲಿಸ್ ವಾಹನವೊಂದರಲ್ಲಿ ಪರಾರಿ ಆಗಿದ್ದರು ಎಂಬುದು ಬಂಧಿತರ ವಿಚಾರಣೆಯಿಂದ ತಿಳಿದುಬಂದಿದೆ. ಇದೀಗ ಪೊಲೀಸರು ನರೇಶ್ ಶೆಣೈ ಸಹಿತ ಶ್ರೀಕಾಂತ್ ಹಾಗೂ ಶಿವ ಅವರ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ವಿಮಾನ ನಿಲ್ದಾಣಗಳಿಗೆ ಲುಕ್‌ಔಟ್ ನೋಟಿಸ್: ಕಮಿಷನರ್
ಮಂಗಳೂರು, ಎ. 6: ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣದಲ್ಲಿ ನರೇಶ್ ಶೆಣೈ ಅವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗಾಗಿ ಎಲ್ಲಾ ವಿಮಾನ ನಿಲ್ದಾಣಗಳಿಗೆ ಲುಕ್‌ಔಟ್ ನೋಟಿಸ್‌ನ್ನು ನೀಡಿರುವುದಾಗಿ ನಗರ ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ನರೇಶ್ ಶೆಣೈ ವಿಚಾರಣೆಗೊಳಪಡಬೇಕಾಗಿರುವುದರಿಂದ ನೋಟಿಸ್ ನೀಡಲಾಗಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X