ಕಮಲಾ ಅಡ್ವಾಣಿ ನಿಧನಕ್ಕೆ ಬಿಎಸ್‌ವೈ ಸಂತಾಪ
ಬೆಂಗಳೂರು, ಎ.6: ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ ನಿಧನಕ್ಕೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಮಲಾ ಅಡ್ವಾಣಿ ಸಾತ್ವಿಕ ಜೀವನ ನಡೆಸಿದವರು. ಎಲ್.ಕೆ.ಅಡ್ವಾಣಿ ಅವರ ಎಲ್ಲ ಹೋರಾಟಗಳ ಹಿಂದಿನ ಶಕ್ತಿಯಾಗಿ, ಅವರಲ್ಲಿ ಸ್ಫೂರ್ತಿ ತುಂಬುತ್ತಿದ್ದರು. ಅತ್ಯಂತ ಸ್ನೇಹಮಯಿಯಾಗಿದ್ದ ಕಮಲಾ ಅಡ್ವಾಣಿ ಅವರ ನಿಧನವು ತೀವ್ರ ಆಘಾತವನ್ನುಂಟು ಮಾಡಿದೆ ಎಂದು ಯಡಿಯೂರಪ್ಪ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕಮಲಾ ಅಡ್ವಾಣಿಯವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಭಗವಂತ ಕರುಣಿಸಲಿ ಎಂದು ಅವರು ತಿಳಿಸಿದ್ದಾರೆ.
Next Story





