ಪಿಯು ಮೌಲ್ಯಮಾಪನ ಬಹಿಷ್ಕಾರ ಮುಂದುವರಿಕೆ: ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ

ಬೆಂಗಳೂರು,ಎ.7: ಪಿಯು ಮೌಲ್ಯಮಾಪನ ಬಹಿಷ್ಕಾರ ಮುಂದುವರಿಯಲಿದೆ. ಈ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಗುರುವಾರ ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.
ಇಂದು ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರೊಂದಿಗೆ ನಡೆಸಿರುವ ಮಾತುಕತೆ ಫಲಪ್ರದವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಉಪನ್ಯಾಕರ ಬೇಡಿಕೆಗಳ ಬಗ್ಗೆ ಮಾತನಾಡುವುದಾಗಿ ಶಿಕ್ಷಣ ಸಚಿವರು ತಿಳಿಸಿದರು.
ಧರಣಿ ನಿರತ ಉಪನ್ಯಾಸಕರೊಂದಿಗೆ 14 ಎಂಎಲ್‌ಸಿಗಳು ಇದ್ದಾರೆ. ಅವರು ಉಪನ್ಯಾಸಕರ ಪರವಾಗಿ ಮುಖ್ಯಮಂತ್ರಿ ಜೊತೆ ಮಾತನಾಡಲಿದ್ದಾರೆ. ಮರು ಪರೀಕ್ಷೆಗೆ ಉಪನ್ಯಾಸಕರ ಬಹಿಷ್ಕಾರ ಇಲ್ಲ. ಮೂಲವೇತನ ಹೆಚ್ಚಿಸಿದರೆ ಮಾತ್ರ ಮೌಲ್ಯಮಾಪನ ಬಹಿಷ್ಕಾರವನ್ನು ಹಿಂಪಡೆಯಲಿದ್ದಾರೆ. ಎಸ್ಮಾ ಜಾರಿಗೊಳಿಸುವ ಬಗ್ಗೆ ಶಿಕ್ಷಣ ಸಚಿವರು ಇಂದು ನಡೆದ ಸಭೆಯಲ್ಲಿ ಮಾತನಾಡಿಲ್ಲ ಎಂದು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಶ್ರೀಕಂಠೇ ಗೌಡ ಮಾಹಿತಿ ನೀಡಿದ್ದಾರೆ.
Next Story





