ಒಂಟಿಕಟ್ಟೆ- ಪುತ್ತಿಗೆ ಡಾಮರೀಕೃತ ರಸ್ತೆ ಉದ್ಘಾಟನೆ

ಮೂಡುಬಿದರೆ: ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 15 ಲಕ್ಷ ರೂ. ವೆಚ್ಚದಲ್ಲಿ ಡಾಮರೀಕರಣಗೊಳಿಸಿದ ಒಂಟಿಕಟ್ಟೆ-ನೆಲ್ಲಿಗುಡ್ಡೆ-ಪುತ್ತಿಗೆ ದೇವಸ್ಥಾನ ರಸ್ತೆಯನ್ನು ಯುವಜನಸೇವೆ ಮತ್ತು ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಗುರುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ತೀರಾ ಹದಗೆಟ್ಟಿದ್ದ ಈ ರಸ್ತೆಯು ಡಾಮರೀಕರಣಗೊಂಡು ಗುಣಮಟ್ಟದ ರಸ್ತೆಯಾಗಿ ಪರಿವರ್ತನೆಗೊಂಡಿದೆ. ಉಳಿದ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಗುತ್ತಿಗೆದಾರ ಸಂತೋಷ್ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಚೌಟರ ಅರಮನೆಯ ಕುಲದೀಪ ಎಂ., ಪುರಸಭಾಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ, ಉಪಾಧ್ಯಕ್ಷೆ ಶಕುಂತಳಾ ದೇವಾಡಿಗ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪುರಸಭಾ ಸ್ಥಾಯೀ ಸಮಿತಿ ಅಧ್ಯಕ್ಷ ಕೊರಗಪ್ಪ, ಪುರಸಭಾ ಸದಸ್ಯ ಪಿ.ಕೆ.ಥೋಮಸ್ ಪುರಸಭಾ ಮಾಜಿ ಅಧ್ಯಕ್ಷ ಭೋಜ ಕೋಟ್ಯಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ತಾ.ಪಂ.ಮಾಜಿ ಸದಸ್ಯ ಪ್ರಕಾಶ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ ಸನಿಲ್, ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಅಡಿಗಳ್ ಶ್ರೀನಿವಾಸ ಭಟ್, ಉಮೇಶ್ ಭಟ್, ಕಾಂಗ್ರೆಸ್ ನಾಯಕ ವಾಸುದೇವ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.







